ಹುಬ್ಬಳ್ಳಿ: ಡಿಎನ್‌ಎ ಆಧಾರಿತ ಪೌರತ್ವಕ್ಕೆ ಆಗ್ರಹಿಸಿ ಪೌರ ಕಾರ್ಮಿಕರು ರಕ್ತದ ಮಾದರಿಗಳನ್ನು ಪರೀಕ್ಷೆಗೆ ನೀಡುವ ಮೂಲಕ ವಿನೂತನವಾಗಿ ಬುಧವಾರ ಪ್ರತಿಭಟನೆ ನಡೆಸಲಾಯಿತು.
ಪೌರತ್ವ ಕಾಯ್ದೆ ತಿದ್ದುಪಡಿ ವಿರೋಧಿಸಿ ಮುಸ್ಲಿಂ ಹಾಗೂ ಅಲ್ಪಸಂಖ್ಯಾತರ ಸಂಘಟನೆಗಳ ನೇತೃತ್ವದಲ್ಲಿ ಕೇಂದ್ರ ಸರ್ಕಾರಕ್ಕೆ ರಕ್ತದಲ್ಲಿ ಪತ್ರ ಬರೆಯುವ ಮೂಲಕ ನಗರದ ಅಂಬೇಡ್ಕರ ವೃತ್ತದಲ್ಲಿ ಸಿಎಎ ಹಾಗೂ ಎನ್ ಆರ್‌ಸಿಗಳು ದೇಶದ ಮುಸ್ಲಿಂ ಹಾಗೂ ಅಲ್ಪಸಂಖ್ಯಾತರ ವಿರೋಧಿಯಾಗಿದ್ದು, ಎಷ್ಟು ಮನವಿ ಸಲ್ಲಿಸಿದರು.
ಕೂಡ ಕೇಂದ್ರ ಸರ್ಕಾರ ಸ್ಪಂದಿಸುತ್ತಿಲ್ಲ. ನಮ್ಮ ನೆತ್ತರು ಹರಿಸಿ ಕೇಂದ್ರ ಸರ್ಕಾರಕ್ಕೆ ಎಚ್ಚರಿಸುತ್ತಿದ್ದೇವೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಭಾರತ ದೇಶದ ಮೂಲ ನಿವಾಸಿಗಳೆಂದರೇ ದಲಿತರು, ಆದಿವಾಸಿಗಳು, ಅಲ್ಪಸಂಖ್ಯಾತರು, ಹಿಂದುಳಿದ ಜನಾಂಗವನ್ನು ತೀವ್ರವಾಗಿ ಸಂಕಷ್ಟಕ್ಕೆ ದೂಡಿದೆ. ಧರ್ಮ ಆಧಾರಿತ ಸಂವಿಧಾನದ ಮೂಲ ಪೀಠಿಕೆ ಹಾಗೂ ಸಂವಿಧಾನದ ಕಲಂ 14,15, 20,21ರ ಉಲ್ಲಂಘಿಸಿ ಸಂವಿಧಾನ ವಿರೋಧಿ ದೇಶ ವಿರೋಧಿಯಾದ ಪೌರತ್ವ ತಿದ್ದುಪಡಿಯನ್ನು ದೇಶದ ಕೋಟ್ಯಂತರ ಜನರು ವಿರೋಧಿಸುತ್ತಿದ್ದರು, ಕೇಂದ್ರ ಬಿಜೆಪಿ ಸರಕಾರ ಮಾತ್ರ ಕಾನೂನು ಜಾರಿ ಮಾಡಿಯೇ ತೀರುತ್ತೇವೆ ಎಂದು ಹಠ ಮಾಡುತ್ತಿರುವುದು ಯಾವ ಪುರುಷಾರ್ಥಕ್ಕೆ ಎಂದು ತಿಳಿಯುತ್ತಿಲ್ಲ.
ಪಾಕಿಸ್ತಾನ, ಬಾಂಗ್ಲಾದೇಶ, ಅಪಘಾನಿಸ್ತಾನದ ಅಲ್ಪಸಂಖ್ಯಾತರ ಮೇಲೆ ನಡೆದಿರುವ ದೌರ್ಜನ್ಯದ ಬಗ್ಗೆ ಕೇಂದ್ರ ಸರಕಾರ ಯಾವುದಾದರೂ ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಧ್ವನಿ ಎತ್ತಿ ಅಂಕಿ-ಅಂಶಗಳನ್ನು ಬಹಿರಂಗ ಪಡಿಸಲಿ. ಅದು ಬಿಟ್ಟು ದೇಶದಲ್ಲಿರುವವರ ಪೌರತ್ವ ಪ್ರಶ್ನಿಸುತ್ತಿರುವುದು ಯಾವುದಕ್ಕೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿ, ಈ ಕೂಡಲೇ ಪೌರತ್ವ ತಿದ್ದುಪಡಿ ಕಾಯ್ದೆಯಿಂದ ಹಿಂದೆ ಸರಿಯಬೇಕೆಂದು ಒತ್ತಾಯಿಸಿದ್ದಾರೆ.
ಪ್ರತಿಭಟನೆಯಲ್ಲಿ ಬಾಬಾಜಾನ ಮುಧೋಳ, ಗಾಳೆಪ್ಪ ಧ್ವಾಸಲಕೇರಿ, ಗಂಗಮ್ಮ ಸಿದ್ರಾಮಪುರ, ಅನಿತಾ ಈನಗೊಂಡ, ನೀಲವ್ವ ಬಳ್ಳೂಟಗಿ, ಬಸವರಾಜ ದೊಡ್ಡಮನಿ ಸೇರಿದಂತೆ ಮೊದಲಾದವರು ಇದ್ದರು.