Advertisement

ಪೌರತ್ವ ತಿದ್ದುಪಡಿ ಕಾಯ್ದೆ ಜಾಗೃತಿಗೆ ವಿರೋಧ

03:21 PM Jan 12, 2020 | Team Udayavani |

ಗಂಗಾವತಿ: ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಬಿಜೆಪಿ ಮುಖಂಡರು ಜಾಗೃತಿ ಮೂಡಿಸುತ್ತಿದ್ದ ವೇಳೆ ಕೆಲ ಯುವಕರು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ಮಾತಿನ ಚಕಮಕಿ ನಡೆದು ಪರಿಸ್ಥಿತಿ ಉದ್ವಿಗ್ನಗೊಂಡ ಘಟನೆ ನಗರದ ಕಿಲ್ಲಾ ಪ್ರದೇಶದಲ್ಲಿ ಶನಿವಾರ ರಾತ್ರಿ ಜರುಗಿದೆ.  ಕಿಲ್ಲಾ ಪ್ರದೇಶದಲ್ಲಿರುವ ಬಿಜೆಪಿ ಕಾರ್ಯಕರ್ತರ ನಿವಾಸದಲ್ಲಿ ಪೌರತ್ವ ಕಾಯ್ದೆ ಜನಜಾಗೃತಿ ನಡೆಸಲು ಬಿಜೆಪಿ ನಗರಸಭೆ ಸದಸ್ಯರು ಮತ್ತು ಮುಖಂಡರು ಆಗಮಿಸಿದ್ದ ವೇಳೆ ಮುಸ್ಲಿಂ ಯುವಕರು “ನೋ ಸಿಎಎ ಗೋ ಬ್ಯಾಕ್‌’ ಎಂದು ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು.

Advertisement

ಇದರಿಂದ ಬಿಜೆಪಿ ಮುಖಂಡರು ಮತ್ತು ಕಿಲ್ಲಾ ಪ್ರದೇಶದ ಯುವಕರ ಮಧ್ಯೆ ಮಾತಿನ ಚಕಮಕಿ ಜರುಗಿ ಪರಿಸ್ಥಿತಿ ವಿಕೋಪಗೊಂಡಿತ್ತು. ನಮ್ಮ ಏರಿಯಾದಲ್ಲಿ ಪೌರತ್ವ ಕಾಯ್ದೆ ಕುರಿತು ಯಾವುದೇ ಜಾಗೃತಿ ಬೇಡ, ಓಣಿ ಬಿಟ್ಟುಹೋಗುವಂತೆ ಪ್ರತಿಭಟನಾ ನಿರತರು ಆಕ್ರೋಶ ವ್ಯಕ್ತಪಡಿಸಿದರು. ಇದಕ್ಕೆ ಒಪ್ಪದ ಬಿಜೆಪಿ ಮುಖಂಡರು ತಾವು ತಮ್ಮ ಕಾರ್ಯಕರ್ತರಿಗೆ ಪೌರತ್ವ ಕಾಯ್ದೆ ಬಗ್ಗೆ ಜಾಗೃತಿ ಮೂಡಿಸುವ ಅಭಿಯಾನ ಕಾರ್ಯಕ್ರಮ ನಡೆಸುತ್ತಿದ್ದು, ಇದುದೇಶವ್ಯಾಪಿ ನಡೆಯುತ್ತಿದೆ. ಇದಕ್ಕೆ ಅಡ್ಡಿಪಡಿಸುವ ಮೂಲಕ ಸಂವಿಧಾನ ವಿರೋಧಿಸಲಾಗುತ್ತಿದೆ ಎಂದುಪೊಲೀಸರಿಗೆ ತಿಳಿಸಿದರು.  ಪ್ರತಿಭಟನಾ ನಿರತರು ಕೇಂದ್ರ ಸರಕಾರ ಹಾಗೂ ಕೇಂದ್ರ ಪ್ರಧಾನಿ ಹಾಗೂ ಗೃಹ ಸಚಿವರ ವಿರುದ್ಧ ಘೋಷಣೆ ಕೂಗಿದರು. ಕಿಲ್ಲಾ ಏರಿಯಾದಲ್ಲಿ ಪೊಲೀಸ್‌ ಬಂದೋಬಸ್ತ್ ಹಾಕಲಾಗಿದ್ದು, ಸ್ಥಳಕ್ಕೆ ಹೆಚ್ಚಿನ ಭದ್ರತೆ ಒದಗಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next