Advertisement

ಶಿವಮೊಗ್ಗ: ಪೌರತ್ವ ಕಾಯ್ದೆ ವಿರೋಧಿಸಿ 10 ಸಾವಿರ ಮುಸ್ಲಿಮರಿಂದ ಪ್ರತಿಭಟನೆ

09:48 AM Dec 29, 2019 | keerthan |

ಶಿವಮೊಗ್ಗ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಶಿವಮೊಗ್ಗದಲ್ಲಿ ವಿವಿಧ ಮುಸ್ಲಿಂ ಸಂಘಟನೆಗಳಿಂದ ಪ್ರತಿಭಟನೆ ಆರಂಭ ನಡೆಸುತ್ತಿದ್ದು ಭಾರಿ ಸಂಖ್ಯೆಯಲ್ಲಿ ಜನರು ಸ್ಥಳದಲ್ಲಿ ಸೇರಿದ್ದಾರೆ.

Advertisement

ಪ್ರತಿಭಟನೆಯಲ್ಲಿ ಸುಮಾರು ಹತ್ತು ಸಾವಿರಕ್ಕೂ ಹೆಚ್ಚು ಮಂದಿ ಭಾಗಿಯಾಗಿದ್ದು, ರಾಷ್ಟ್ರ ಧ್ವಜಗಳನ್ನು ಹಿಡಿದು ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆ ನಡೆಸಲಾಗುತ್ತಿದೆ.

ಸಾರೆ ಜಹಾಸೆ ಅಚ್ಚಾ ಹಾಡನ್ನು ಹಾಡಿ ಪ್ರತಿಭಟನೆ ಆರಂಭವಾಗಿದ್ದು ಕಾಯ್ದೆ ವಿರೋಧಿ ಪ್ರತಿಭಟನೆ ಮುಂದುವರಿದಿದೆ. ಭದ್ರತೆಗಾಗಿ ಸ್ಥಳದಲ್ಲಿ ಮೂರು ಸಾವಿರ ಪೊಲೀಸರನ್ನು ನಿಯೋಜಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next