Advertisement
ಅಂಗನವಾಡಿ ಕಾರ್ಯಕರ್ತೆಯರಿಗೆ 10,000 ಹಾಗೂ ಸಹಾಯಕರಿಗೆ 5 ಸಾವಿರ ಪಿಂಚಣಿ ನೀಡಬೇಕು. ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರನ್ನು ಕಾರ್ಮಿಕರೆಂದು ಪರಿಗಣಿಸಬೇಕು. ಕೇಂದ್ರ ಸರ್ಕಾರ 7ನೇ ವೇತನ ಆಯೋಗದಲ್ಲಿರುವ 21 ಸಾವಿರ ರೂ. ಕನಿಷ್ಠ ವೇತನ ನಿಗದಿಪಡಿಸಬೇಕು ಎಂದು ಆಗ್ರಹಿಸಿದರು.
Related Articles
Advertisement
ಕಾರ್ಮಿಕ ವಿರೋಧಿ ಕಾರ್ಮಿಕ ಸಂಹಿತೆ ಹಿಂಪಡೆಯಬೇಕು. ಶಿಕ್ಷಣ ಮತ್ತು ಸಾರ್ವಜನಿಕ ಉದ್ದಿಮೆಗಳನ್ನು ಖಾಸಗೀಕರಣಗೊಳಿಸಬಾರದು. ಗ್ರಾಮ ಪಂಚಾಯಿತಿ ನೌಕರರ ವಾರ್ಷಿಕ 382 ಕೋಟಿ ರೂ. ಬಾಕಿ ಬಿಡುಗಡೆ ಮಾಡಬೇಕು. 21 ಸಾವಿರ ರೂ. ಕನಿಷ್ಠ ವೇತನ ನಿಗದಿಪಡಿಸಬೇಕು. ಎಲ್ಲರಿಗೂ ಪಿಂಚಣಿ ನೀಡಬೇಕು. ಪಂಚಾಯತ್ ರಾಜ್ ಸಂಸ್ಥೆಗಳಿಗೆ ಅನುದಾನ ಕಡಿತಗೊಳಿಸಬಾರದು. ಅಂಗನವಾಡಿ ಕೇಂದ್ರಗಳ ಕಾರ್ಯಕರ್ತೆಯರಿಗೆ ಸೇವಾ ನಿಯಮಾವಳಿ ರಚಿಸಬೇಕು. ಕೇಂದ್ರ ಸರ್ಕಾರ ಕಡಿತ ಮಾಡಿರುವ ಹಣ ವಾಪಸ್ ಕೊಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿದರು.
ಸಿಐಟಿಯು ಜಿಲ್ಲಾ ಮುಖಂಡ ಜಿ.ವಿ. ಕುಲಕರ್ಣಿ ಮಾತನಾಡಿ, ಸರ್ಕಾರ ಕೋವಿಡ್ ಸಂಕಷ್ಟದ ನೆಪ ಮಾಡಿಕೊಂಡು ಕಾರ್ಮಿಕ ಕಾನೂನುಗಳನ್ನು ತಿದ್ದುಪಡಿ ಮಾಡಲು ಹೊರಟಿದೆ. ರೈತ ವಿರೋಧಿ ಕಾನೂನುಗಳನ್ನು ಜಾರಿಗೊಳಿಸಲು ಮುಂದಾಗಿದೆ. ರಾಜ್ಯಕ್ಕೆ ಬರಬೇಕಾದ ಜಿಎಸ್‌ಟಿ ಪಾಲು ಬರುತ್ತಿಲ್ಲ. ಮೋದಿ ಸರ್ಕಾರ ಕಾರ್ಮಿಕ, ರೈತ ಮತ್ತು ಜನಸಾಮಾನ್ಯರ ವಿರೋಧಿ ನೀತಿ ಅನುಸರಿಸುತ್ತಿದ್ದು, ಕೂಡಲೇ ಇಂತಹ ನೀತಿಯಿಂದ ಹಿಂದೆ ಸರಿಯಬೇಕು ಎಂದು ಆಗ್ರಹಿಸಿದರು.
ಮುಖಂಡ ನಾಗೇಶ ಸಾತೇರಿ ಮಾತನಾಡಿದರು. ಮುಖಂಡರಾದ ವೈ.ಬಿ. ಶೀಗಿಹಳ್ಳಿ, ಮೀನಾಕ್ಷಿ ಕೊಟಗಿ, ಸುಜಾತಾ ಬೆಳಗಾವಕರ ಸೇರಿದಂತೆ ಇತರರು ಇದ್ದರು.