ಹಾಸನ: ಕೇಂದ್ರ ಸರ್ಕಾರದ ಕಾರ್ಮಿಕ, ರೈತ ಮತು ¤ ಖಾಸಗೀಕರಣ ನೀತಿ ವಿರೋಧಿಸಿ ರೈತ ಮತ್ತು ಕಾರ್ಮಿಕ ಸಂಘಟನೆಗಳ ಮುಖಂಡರು ಗುರುವಾರ ಪ್ರತಿಭಟನೆ ನಡೆಸಿದರು.
ಕಾನೂನುಗಳ ತಿದ್ದುಪಡಿ ವಿರೋಧಿಸಿ ಹಾಗೂ ಕನಿಷ್ಠ ವೇತನ ನೀಡುವಂತೆ ಮತ್ತು ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸಿಐಟಿಯು ನೇತೃತ್ವದಲ್ಲಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ (ಜೆಸಿಟಿಯು), ಅಖೀಲ ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿ, ವಿದ್ಯಾರ್ಥಿ, ಯುವಜನ, ದಲಿತ, ಮಹಿಳಾ, ಕನ್ನಡ ಮತ್ತು ಅಲ್ಪಸಂಖ್ಯಾತ ಸಂಘಟನೆಗಳಿಂದಗುರುವಾರದಂದುಕರೆಯಲಾಗಿದ್ದ ಅಖೀಲ ಭಾರತ ಮುಷ್ಕರದ ಅಂಗವಾಗಿ ಪ್ರತಿಭಟನಾ ಮೆರವಣಿಗೆ ನಂತರ ಸಭೆ ನಡೆಸಿ ಮನವಿ ಮಾಡಲಾಯಿತು. ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ಆನಂತರ ಬಹಿರಂಗಸಭೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಕೋವಿಡ್ ಸಾಂಕ್ರಾಮಿಕ ರೋಗದಿಂದ ದೇಶದಲ್ಲಿ ಅನಿರೀಕ್ಷಿತವಾಗಿ ಅವೈಜ್ಞಾನಿಕ ಲಾಕ್‌ಡೌನ್ ಮಾಡಲಾಯಿತು. ಮೊದಲೇ ಸಂಕಷ್ಟದಲ್ಲಿರುವ ಕಾರ್ಮಿಕರ ಹಿತ ಕಾಪಾಡಬೇಕಾಗಿದ್ದ ಸರ್ಕಾರ, ದೇಶದ ಆರ್ಥಿಕಸಾರ್ವಭೌಮತೆಗೆ ಧಕ್ಕೆ ತರುವ, ಅನ್ನದಾತ ರೈತರು ಮತ್ತು ಕಾರ್ಮಿಕರನ್ನು ಪೂರ್ಣ ಗುಲಾಮಗಿರಿಗೆ ತಳ್ಳುವ ಸರ್ವಾಧಿಕಾರಿ ಧೋರಣೆ ತಳೆದಿದೆ ಎಂದು ರೈತ ಹಾಗೂ ಕಾರ್ಮಿಕ ಸಂಘಟನೆಗಳು ಆರೋಪಿಸಿದವು.
ಕಾರ್ಮಿಕಸಂಘಟನೆಗಳು,ಸ್ವತಂತ್ರಸಂಘಟನೆಗಳು ಎಲ್‌ಐಸಿ, ಬ್ಯಾಂಕ್, ರಕ್ಷಣಾ ವಲಯ, ರೈಲ್ವೆ, ಬಿಎಸ್ ಎನ್‌ಎಲ್, ರಾಜ್ಯ ಮತು ¤ ಕೇಂದ್ರ ಸೇವೆ ಮುಂತಾದ ಅಖೀಲ ಭಾರತ ಸಂಘಟನೆಗಳು, ಕಾರ್ಮಿಕರು, ನೌಕರರು ಅಸಂಘಟಿತ ಕ್ಷೇತ್ರದ ಕಾರ್ಮಿಕರಾದ ಕಟ್ಟಡ, ಹಾಸ್ಟೆಲ್, ಹಮಾಲಿ, ಬೀಡಿ, ತೋಟಗಾರಿಕೆ, ಗುತ್ತಿಗೆ ಕಾರ್ಮಿಕರು, ಪಂಚಾಯ್ತಿ ನೌಕರರು, ಬೀದಿ ಬದಿ ವ್ಯಾಪಾರಸ್ಥರು, ಮನೆ ಕೆಲಸಗಾರರು, ಆಟೋ, ಟ್ಯಾಕ್ಸಿ, ಸಾರಿಗೆಯಲ್ಲಿ ಕಾರ್ಯನಿರ್ವಹಿಸುವ ನೌಕರರು, ಅಂಗನವಾಡಿ, ಬಿಸಿಯೂಟ, ಆಶಾ, ನೌಕರರು ಮತ್ತು ವಿದ್ಯಾರ್ಥಿ, ಯುವಜನ, ಮಹಿಳಾ, ರೈತ ಸಂಘಟನೆಗಳು ಜೊತೆಗೂಡಿ ಸಂವಿಧಾನಿಕ ಹಕ್ಕುಗಳಿಗಾಗಿ ಕೇಂದ್ರ ಸರ್ಕಾರದ ವಿರುದ್ಧಹೋರಾಟ ನಡೆಸು ತ್ತಿದ್ದೇವೆಎಂದು ಪ್ರತಿಭಟನಾಕಾರರು ಹೇಳಿದರು.
ಸಿಐಟಿಯು ಜಿಲ್ಲಾಧ್ಯಕ್ಷ ಧರ್ಮೇಶ್, ದಲಿತ ಮುಖಂಡರಾದ ಎಚ್.ಕೆ.ಸಂದೇಶ್, ಎಐಟಿ ಯುಸಿಯ ಮುಖಂಡ ಎಂ.ಸಿ.ಡೋಂಗ್ರೆ, ಕೆಪಿಆರ್‌ಎಸ್ ಜಿಲ್ಲಾಧ್ಯಕ್ಷ ಎಚ್.ಆರ್.ನವೀನ್‌ಕುಮಾರ್, ರೈತ ಮುಖಂಡ ಕುಮಾರ್, ಅರಂವಿದ್, ರಾಜ್ಯ ರಸ್ತೆ ಸಾರಿಗೆ ನೌಕರರ ಸಂಘದ ಮಂಜುನಾಥ್,ಕರಿಯಪ್ಪ, ರಂಗಸ್ವಾಮಿ, ರಾಜ್ಯ ರೈತ ಸಂಘದ ಮುಖಂಡಆನೆಕೆರೆ ರವಿ, ಅಂಗನವಾಡಿ, ಬಿಸಿಯೂಟ ನೌಕರರು, ಆಶಾ ಕಾರ್ಯಕರ್ತೆಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.