Advertisement

ತಹಶೀಲ್ದಾರ್‌ ಹತ್ಯೆ ಖಂಡಿಸಿ ಪ್ರತಿಭಟನೆ

06:26 AM Jul 11, 2020 | Lakshmi GovindaRaj |

ಚಿಕ್ಕಬಳ್ಳಾಪುರ: ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನಲ್ಲಿ ಭೂಮಿ ಸರ್ವೆ ಕಾರ್ಯಕ್ಕೆ ತೆರಳಿದ್ದ ತಹಶೀಲ್ದಾರ್‌ ಚಂದ್ರಮೌಳೇಶ್ವರರನ್ನು ದುಷ್ಕರ್ಮಿ ಯೊಬ್ಬ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಖಂಡಿಸಿ  ಶುಕ್ರವಾರ ಜಿಲ್ಲೆಯ ಸರ್ಕಾರಿ ನೌಕರರ ಸಂಘದ ಸದಸ್ಯರು ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಿ ತೀವ್ರವಾಗಿ ಖಂಡಿಸಿದರು.

Advertisement

ಜಿಲ್ಲಾ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಜಿ.ಹರೀಶ್‌ ಗಂಗಪ್ಪ ನೇತೃತ್ವದಲ್ಲಿ ವಿವಿಧ ಇಲಾಖೆಗಳ ನೌಕರರು ಪ್ರತಿಭಟನೆ ನಡೆಸಿ ಕೊಲೆ ಆರೋಪಿಯನ್ನು ಕಠಿಣ ಶಿಕ್ಷೆಗೆ ಗುರಿಪಡಿಸಬೇಕೆಂದು ಆಗ್ರಹಿಸಿ ಘೋಷಣೆ ಕೂಗಿದರು. ಕೊಲೆಗೀಡಾದ ತಹಶೀಲ್ದಾರ್‌ಗೆ ಪ್ರತಿಭ ಟನಾ ಸ್ಥಳದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಶ್ರದಾಜಲಿ ಅರ್ಪಿಸಿದರು.

ರಾಜ್ಯ ಸರ್ಕಾರ ಕೂಡಲೇ ಅಧಿಕಾರಿಗಳಿಗೆ ಸೂಕ್ತ ರಕ್ಷಣೆ ನೀಡುವ ಕಾನೂನು ರೂಪಿಸಬೇಕೆಂದ ನೌಕರರ ಸಂಘದ ಅಧ್ಯಕ್ಷ ಹರೀಶ್‌, ಹತ್ಯೆಯಾದ ತಹಶೀಲ್ದಾರ್‌ ಕುಟುಂಬಕ್ಕೆ ಗರಿಷ್ಠ ಪ್ರಮಾಣದ ಪರಿಹಾರ ನೀಡಬೇಕೆಂದರು. ಪ್ರತಿಭಟನೆಯಲ್ಲಿ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಎ.ನಾರಾಯಣಸ್ವಾಮಿ, ತಾಲೂಕು ಅಧ್ಯಕ್ಷ ರಾಮಶೇಷಪ್ಪ, ಸರ್ಕಾರಿ ನೌಕರರ ಸಂಘದ ಜಿಲ್ಲಾ ಕಾರ್ಯದರ್ಶಿ ಎ.ಎನ್‌.ನಾಗರಾಜ,

ಪದಾಧಿಕಾರಿ ಗಳಾದ ಸುನೀಲ್‌, ರಾಜೇಂದ್ರ, ಅರುಣ್‌, ಅಮರ್‌, ಎಸ್‌.ಎಂ.ಕೃಷ್ಣ, ನಜೀರ್‌, ರವಿಶಂಕರ್‌, ಅಶೋಕ್‌ ಸೇರಿದಂತೆ ಜಿಲ್ಲೆಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಇದ್ದರು. ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಜಿಲ್ಲಾಧಿಕಾರಿ  ಆರ್‌.ಲತಾ ಹಾಗೂ ಅಪರ ಜಿಲ್ಲಾಧಿಕಾರಿ ಆರತಿಗೆ ಪದಾಧಿಕಾರಿಗಳು ಮನವಿ ಸಲ್ಲಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next