Advertisement

ಕೈ ಕಚೇರಿ ಮುಂದೆ ಪ್ರತಿಭಟನೆ : ಬಿಜೆಪಿ ವಿರುದ್ಧ ವಾಗ್ಧಾಳಿ

06:30 AM Dec 30, 2017 | Team Udayavani |

ಬೆಂಗಳೂರು: ಮಹದಾಯಿ ವಿಚಾರದಲ್ಲಿ ಬಿಜೆಪಿ ನಾಯಕರು ಕಾಂಗ್ರೆಸ್‌ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದನ್ನು ತೀವ್ರವಾಗಿ ಖಂಡಿಸಿರುವ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌, ಮಹದಾಯಿ ವಿಚಾರವನ್ನು ಬಿಜೆಪಿ
ರಾಜಕೀಯಕ್ಕೆ ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿದರು.

Advertisement

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ನಾಯಕರು ಕಾಂಗ್ರೆಸ್‌ ಕಚೇರಿ ಮುಂದೆ ಬಂದು ಪ್ರತಿಭಟನೆ
ಮಾಡುವ ಅಗತ್ಯ ಏನಿತ್ತು. ರಾಜಕೀಯ ದುರುದ್ದೇಶದಿಂದ ಕಾಂಗ್ರೆಸ್‌ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ. ಗೋವಾ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆಯುವ ಬದಲು ಯಡಿಯೂರಪ್ಪಗೆ ಪತ್ರ ಬರೆದಿದ್ದು ಯಾಕೆ ? ಇದರಿಂದಲೇ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಗೊತ್ತಾಗುತ್ತದೆಂದು ದೂರಿದರು. ನೀರಿನ ಸಮಸ್ಯೆ ಬಗೆಹರಿಸಲು ಯಡಿಯೂರಪ್ಪ ಮುಂದಾಗಿರುವುದು ಒಳ್ಳೆಯ ಬೆಳವಣಿಗೆ ಈ ಬಗ್ಗೆ ಯಡಿಯೂರಪ್ಪ ಪ್ರಧಾನಿ ನರೇಂದ್ರ ಮೋದಿ ಜೊತೆಗೂ ಚರ್ಚಿಸಬೇಕಿತ್ತು.

ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿಗೂ ಪತ್ರ ಬರೆದಿದ್ದರು. ಬಿಜೆಪಿಯವರಿಗೆ ನೀರು ಕೊಡಿಸಬೇಕೆಂಬ ಉದ್ದೇಶವಿಲ್ಲ. ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳಬೇಕೆಂಬುವುದಷ್ಟೇ ಅವರ ಉದ್ದೇಶ. ಮೊದಲು ಗೋವಾ ಮುಖ್ಯಮಂತ್ರಿ ಒಂದು
ತೀರ್ಮಾನಕ್ಕೆ ಬರಲಿ, ನಂತರ ಗೋವಾ ಕಾಂಗ್ರೆಸ್‌ ಸ್ಪಷ್ಟ ತೀರ್ಮಾನ ಕೈಗೊಳ್ಳಲಿದೆ ಎಂದು ವೇಣುಗೋಪಾಲ್‌
ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next