Advertisement

ವಿದ್ಯುತ್‌ ದರ ಏರಿಕೆ ಖಂಡಿಸಿ ಪ್ರತಿಭಟನೆ

02:41 PM Jun 06, 2023 | Team Udayavani |

ಮೈಸೂರು: ವಿದ್ಯುತ್‌ ದರ ಏರಿಕೆ ಖಂಡಿಸಿ ನಗರ ಮತ್ತು ಗ್ರಾಮಾಂತರ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಜಿಲ್ಲಾ ಪಂಚಾಯಿತಿ ಕಚೇರಿ ಎದುರು ಸೋಮ ವಾರ ಶಾಸಕ ಟಿ.ಎಸ್‌. ಶ್ರೀವತ್ಸ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.

Advertisement

ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌, ಇಂಧನ ಸಚಿವ ಕೆ.ಜೆ. ಜಾರ್ಜ್‌ಗೆ ಧಿಕ್ಕಾರ ಕೂಗಿದರು. 200 ಯೂನಿಟ್‌ ವಿದ್ಯುತ್‌ ಉಚಿತ ಕೊಡುವುದಾಗಿ ಹೇಳಿ 80 ಯೂನಿಟ್‌ ಕೊಟ್ಟಿದ್ದಾರೆ. ಈ ಮೋಸವನ್ನು ನಿಲ್ಲಿಸುವಂತೆ ಆಗ್ರಹಿಸಿದರು.

ಗೋಹತ್ಯೆ ನಿಷೇಧ ಕಾಯ್ದೆ ಮುಂದುರಿಸಬೇಕು. ಹಾಲಿನ ಪ್ರೋತ್ಸಾಹ ಧನ ಕಡಿತಕ್ಕೆ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.

ವಿದ್ಯುತ್‌ ದರ ಹೆಚ್ಚಿಸದಿರುವಂತೆ ಭಿತ್ತಿಪತ್ರ ಪ್ರದರ್ಶಿಸಿಸಿ ಗಮನಸೆಳೆದರು. ಶಾಸಕ ಶ್ರೀವತ್ಸ ಮಾತನಾಡಿ, ಚುನಾವಣೆ ಪೂರ್ವದಲ್ಲಿ ಬಜರಂಗದಳ ನಿಷೇಧಿಸುವುದಾಗಿ ಘೋಷಿಸಿದರು. ಅಧಿಕಾರಕ್ಕೆ ಬಂದ ಬಳಿಕ ಹಿಂದೂಗಳು ವಿಶೇಷವಾಗಿ ಪೂಜೆ ಮಾಡುವ ಗೋ ರಕ್ಷಣೆ ಕಾಯಿದೆ ಹಿಂಪಡೆಯುವ ಮಾತುಗಳನ್ನಾಡುತ್ತಿದ್ದಾರೆ. ಕಾಂಗ್ರೆಸ್‌ ಗ್ಯಾರಂಟಿಯಲ್ಲಿ 200 ಯೂನಿಟ್‌ ವಿದ್ಯುತ್‌ ಉಚಿತವಾಗಿ ನೀಡುವುದಾಗಿ ವಾಗ್ಧಾನ ನೀಡಿದ್ದರು. ಚುನಾವಣಾ ಭಾಷಣ ದಲ್ಲಿ ಸಿದ್ದರಾಮಯ್ಯ ಅವರು ನಂಗೂ, ನಿಂಗೂ ಫ್ರೀ ಎನ್ನುತ್ತಿದ್ದರು. ಈಗ ನಿಯಮ ತರುತ್ತಿ ದ್ದಾರೆ. ಇದು ಹೇಳುವುದೊಂದು ಮಾಡುವುದೊಂದು ಎಂಬಂತಾಗಿದೆ ಎಂದು ಟೀಕಿಸಿದರು.

ಬಿಜೆಪಿ ವಕ್ತಾರ ಎಂ.ಜಿ.ಮಹೇಶ್‌ ಮಾತ ನಾಡಿ, ಜನಾದೇಶ ಕೊಟ್ಟ ಮತದಾರರಿಗೆ ಕಾಂಗ್ರೆಸ್‌ ಸರ್ಕಾರ ಮೋಸ ಮಾಡಿದೆ. ವ್ಯಾಪಾರ‌ಸ್ಥರು ಗ್ರಾಹಕರಿಗೆ ಟೋಪಿ ಹಾಕುವಂತೆ ಜನರಿಗೆ ಟೋಪಿ ಹಾಕಿದೆ. ದೇಶದ ಇತರ ರಾಜ್ಯಗಳಲ್ಲಿರುವ ಕಾಂಗ್ರೆಸ್‌ ಸರ್ಕಾರಗಳು ಗ್ಯಾರಂಟಿ ಭರವಸೆಯನ್ನು ಈಡೇರಿಸಿಲ್ಲ ಎಂದು ಆಕ್ರೋಶ ಹೊರಹಾಕಿದರು.

Advertisement

ಪ್ರತಿಭಟನೆಯಲ್ಲಿ ಮಾಜಿ ಶಾಸಕ ಎಲ್‌. ನಾಗೇಂದ್ರ, ಮುಖಂಡರಾದ ಕವೀಶ್‌ ಗೌಡ, ಬಿಜೆಪಿ ಗ್ರಾಮಾಂತರ ಅಧ್ಯಕ್ಷೆ ಮಂಗಳಾ ಸೋಮಶೇಖರ್‌, ಗಿರಿಧರ್‌, ಜಯಪ್ರಕಾಶ್‌ (ಜೆಪಿ) ಮುಂತಾದವರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next