ವತಿಯಿಂದ ತಾಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು.
Advertisement
ರಾಜ್ಯ ರೈತ ಸಂಘದ ಉಪಾಧ್ಯಕ್ಷ ವೆಂಕಟನಾರಾಯಣಪ್ಪ ಮಾತನಾಡಿ,ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಬಹುಮುಖ್ಯವಾದ ವಿದ್ಯುತ್ಕ್ಷೇತ್ರವನ್ನು ಖಾಸಗೀಕರಣಗೊಳಿಸುವ ನಿರ್ಧಾರಕ್ಕೆ ಸರ್ಕಾರಗಳು ಮುಂದಾಗಿದ್ದು, ರೈತರ ಪಂಪ್ ಸೆಟ್‌ಗಳಿಗೆ ಮೀಟರ್ ಅಳವಡಿಸಿ ದರ ನಿಗದಿಗೊಳಿಸಲು ತೀರ್ಮಾನಿಸಿದೆ. ಇದರಿಂದ ರೈತ ಸಮುದಾಯಕ್ಕೆ ತೊಂದರೆಯಾಗಲಿದ್ದು, ಈ ನಿರ್ಧಾರವನ್ನು ಖಂಡಿಸುತ್ತೇವೆ. ಇತ್ತೀಚೆಗೆ ಸರ್ಕಾರ ಕೃಷಿಗೆ ಸಂಬಂಧಪಟ್ಟಂತೆ ಮೂರು ಕಾಯ್ದೆ ಜಾರಿಗೆ ತಂದಿದ್ದು, ಈ ಕೃಷಿ ವ್ಯವಸ್ಥೆಯನ್ನು ಖಾಸಗೀಕರಣಗೊಳಿಸಿ ರೈತರು ಭೂಮಿ ಮಾರಿಕೊಂಡು ಒಕ್ಕಲೆಬ್ಬಿಸುವ ಕುತಂತ್ರವಾಗಿದೆ ಎಂದು ಕಿಡಿಕಾರಿದರು.
ಇಷ್ಟ ಬಂದ ರೀತಿ ಹಣವನ್ನು ಮೀಟರ್‌ಗಳ ಮೂಲಕ ಹಾಕಿ, ರೈತರನ್ನು ದಿವಾಳಿ ಮಾಡಲು ಸರ್ಕಾರ ಮುಂದಾಗಿದೆ. ವಿದ್ಯುತ್ ಖಾಸಗೀಕರಣ ಮಾಡಿದರೆ ಲಕ್ಷಾಂತರ ಬೆಸ್ಕಾಂ ನೌಕರರು ಉದ್ಯೋಗ ಕಳೆದುಕೊಳ್ಳಲಿದ್ದಾರೆ ಎಂದು ಹೇಳಿದರು. ಜಿಲ್ಲಾ ರೈತ ಸಂಘದ ಅಧ್ಯಕ್ಷ ಪ್ರಸನ್ನಕುಮಾರ್ ಮಾತನಾಡಿ,ಜಾಗತೀಕರಣಮತ್ತುಉದಾರೀಕರಣ ಹೆಸರಿನಲ್ಲಿ ಅಧಿಕಾರದ ಹಿಡಿದಂತಹಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಈ ದೇಶದ ಆಹಾರ ಭದ್ರತೆಯನ್ನು ಕಾಪಾಡಿಕೊಂಡು ಬಂದಿರುವ ರೈತ ಪ್ರತಿನಿಧಿಸುವ ಕೃಷಿ ಕ್ಷೇತ್ರ ಮತ್ತು ಇದಕ್ಕೆ
ಸಂಬಂಧಪಟ್ಟ ಇಲಾಖೆಯನ್ನು ಖಾಸಗಿ ಕಂಪನಿ ಮತ್ತು ಬಂಡವಾಳ ಶಾಹಿಗಳಿಗೆ ಹಸ್ತಾಂತರ ಮಾಡುತ್ತಿರುವ ನಿರ್ಧಾರವನ್ನು ರದ್ದುಪಡಿಸಬೇಕು. ಕೃಷಿ ಪಂಪ್ ಸೆಟ್‌ಗಳಿಗೆ ಮೀಟರ್ ಅಳವಡಿಸಲು ಹೊರಟಿರುವುದು ಅಪಾಯಕಾರಿ ಸಂಗತಿ ಎಂದರು.
Related Articles
Advertisement
ಪ್ರತಿಭಟನಾಕಾರರು ಜಿಲ್ಲಾಧಿಕಾರಿಕೆ.ಶ್ರೀನಿವಾಸ್ ಅವರಿಗೆ ಮನವಿ ಸಲ್ಲಿಸಿದರು. ರೈತ ಸಂಘದ ರಾಜ್ಯ ನಿರ್ದೇಶಕ ಕೆಂಚೇಗೌಡ, ದೇವನಹಳ್ಳಿ ತಾಲೂಕು ರೈತ ಸಂಘದ ಅಧ್ಯಕ್ಷ ಗಾರೆ ರವಿಕುಮಾರ್, ಕಾರ್ಯಾಧ್ಯಕ್ಷ ನಾರಾಯಣ ಸ್ವಾಮಿ, ಪ್ರಧಾನ ಕಾರ್ಯದರ್ಶಿ ಬಿದಲೂರು ರಮೇಶ್,ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷ ಹನುಮೇಗೌಡ, ಮುಖಂಡರಾದ ವಕೀಲ ಸಿದ್ದಾರ್ಥ, ಮುನಿಶಾಮಪ್ಪ, ಪ್ರಜಾ ವಿಮೋಚನಾ ಚಳವಳಿ ಸ್ವಾಭಿಮಾನ ರಾಜ್ಯಾಧ್ಯಕ್ಷ ಮುನಿ ಆಂಜಿನಪ್ಪ ಹಾಗೂ ರೈತ ಸಂಘದ ಪದಾಧಿಕಾರಿಗಳು ಹಾಜರಿದ್ದರು.