Advertisement
ಸದನದಲ್ಲಿ ಇಂದಿನಿಂದ ಅಹೋರಾತ್ರಿ ಧರಣಿ ನಡೆಸುವುದಕ್ಕೆ ಕಾಂಗ್ರೆಸ್ ಸಿದ್ಧತೆ ನಡೆಸಿದೆ. ಹೀಗಾಗಿ ಪರಿಷತ್ ಹಾಗು ವಿಧಾನಸಭೆ ಸದಸ್ಯರಿಗೆ ರಾತ್ರಿ ಮಲಗುವುದಕ್ಕೆ ಅಗತ್ಯವಾದ ಹಾಸಿಗೆ- ದಿಂಬುಗಳನ್ನು ತರಿಸುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೂಚನೆ ನೀಡಿದ್ದಾರೆ. ಜತೆಗೆ ಭೋಜನ ವ್ಯವಸ್ಥೆಗೂ ಸೂಚನೆ ನೀಡಲಾಗಿದೆ.
ಆದರೆ ಕಾಂಗ್ರೆಸ್ ನ ಈ ಕಾರ್ಯ ತಂತ್ರಕ್ಕೆ ಅವಕಾಶ ನೀಡದೇ ಇರಲು ಬಿಜೆಪಿ ಯೋಜನೆ ರೂಪಿಸಿದೆ. ಮಧ್ಯಾಹ್ನ ಮೂರು ಗಂಟೆಯ ನಂತರವೂ ಕಾಂಗ್ರೆಸ್ ಪ್ರತಿಭಟನೆ ಮುಂದುವರಿಸಿದರೆ ಅನಿರ್ದಿಷ್ಟಾವಧಿಯವರೆಗೆ ಸದನ ಮುಂದೂಡಲು ಸ್ಪೀಕರ್ ಚಿಂತನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಅಹೋರಾತ್ರಿ ಧರಣಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ರಮೇಶ್ ಕುಮಾರ್‌ವಿರೋಧ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗುತ್ತಿದೆ.