ಮೈಸೂರು: ಕೇಂದ್ರ ಸರ್ಕಾರದ ವಿವಾದಿತ ಕೃಷಿಕಾಯ್ದೆಗಳನ್ನು ವಿರೋಧಿಸಿ ಸಂಯುಕ್ತ ಕಿಸಾನ್‌ಮೋರ್ಚಾ ನೇತೃತ್ವದಲ್ಲಿ ವಿವಿಧ ರೈತ ಸಂಘಟನೆಗಳುಕರೆ ನೀಡಿದ್ದ ಭಾರತ್ ಬಂದ್‌ಗೆ ಮೈಸೂರಿನಲ್ಲೂ ರೈತಸಂಘಟನೆಗಳು ಪ್ರತಿಭಟನೆ ನಡೆಸುವ ಮೂಲಕ ಬೆಂಬಲ ನೀಡಿದವು.
ಜನಸಾಮಾನ್ಯರಿಗೆ ತೊಂದರೆಯಾಗದ ರೀತಿಯಲ್ಲಿ ಸಾಮೂಹಿಕ ನಾಯಕತ್ವದಲ್ಲಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ನಗರದ ಗನ್ ಹೌಸ್‌ಬಳಿ ಕೇಂದ್ರ ಸರ್ಕಾರದ ನೂತನ ಮೂರು ಕೃಷಿ ಕಾಯ್ದೆಗಳ ಅಣುಕು ಶವಯಾತ್ರೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ರಾಜ್ಯ ರೈತ ಸಂಘ ರಾಜ್ಯಾಧ್ಯಕ್ಷಬಡಗಲಪುರ ನಾಗೇಂದ್ರ ಮಾತನಾಡಿ, ಕೇಂದ್ರಸರ್ಕಾರ ಜಾರಿಗೊಳಿಸಿರುವ ಕೃಷಿ ತಿದ್ದುಪಡಿ ಕಾಯ್ದೆಯನ್ನು ಕೂಡಲೇ ಹಿಂತೆಗೆದುಕೊಳ್ಳಬೇಕು. ಈ ಮೂರು ಕಾಯ್ದೆಗಳು ರೈತರಿಗೆ ಮಾರಕವಾಗಿವೆ. ಈಕಾಯ್ದೆಗಳ ಮೂಲಕ ದೇಶದ ರೈತಾಪಿ ಕೃಷಿಯನ್ನುನಾಶ ಮಾಡಿ, ಕಂಪನಿ ಕೃಷಿಯನ್ನು ಜಾರಿಗೆ ತರುತ್ತಿರುವುದು ಮಾತ್ರವಲ್ಲದೆ, ಸಾರ್ವಜನಿಕ ಕ್ಷೇತ್ರ ವನ್ನು ಕೇಂದ್ರ ಸರ್ಕಾರ ಕಾರ್ಪೊರೇಟ್ ಕಂಪನಿಗಳಿಗೆ ಧಾರೆ ಎರೆಯುತ್ತಿದೆ ಎಂದು ಆರೋಪಿಸಿದರು.
ಪ್ರತಿಭಟನೆಯಲ್ಲಿ ರೈತ ಮುಖಂಡರಾದಹೊಸೂರು ಕುಮಾರ್, ಹೊಸಕೋಟೆ ಬಸವರಾಜು,ಕೆ.ಎಸ್.ಶಿವರಾಮು, ದಲಿತ ಸಂಘರ್ಷ ಸಮಿತಿಯಮುಖಂಡರು ಸೇರಿದಂತೆ ಹಲವರು ಪಾಲ್ಗೊಂಡಿದ್ದರು.
ಅಣಕು ಶವಯಾತ್ರೆ: ಐಕ್ಯ ಹೋರಾಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದಿಂದ ಶುಕ್ರವಾರ ಬೆಳಗ್ಗೆ ನಗರದ ಗನ್‌ಹೌಸ್ ಬಳಿಯ ಕುವೆಂಪು ಉದ್ಯಾನದ ಬಳಿಯಿಂದ ಪಾಠಶಾಲೆ ವೃತ್ತದವರೆಗೆಪ್ರತಿಭಟನಾಕಾರರು ಅರಬೆತ್ತಲೆಯಾಗಿ ಅಣಕುಶವಯಾತ್ರೆ ನಡೆಸಿ, ಕೇಂದ್ರ ಸರ್ಕಾರ ನೂತನ ಕೃಷಿ ಕಾಯಿದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿದರು.ಬಳಿಕ ಸಂಸ್ಕೃತ ಪಾಠಶಾಲೆ ವೃತ್ತದಲ್ಲಿ ಅಣಕು ಶವವನ್ನುಸುಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ರಾಜ್ಯ ಕಬ್ಬು ಬೆಳೆಗಾರರ
ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತ್‌ಕುಮಾರ್, ಶಿವಮೊಗ್ಗ ಕಿಸಾನ್ ಮಹಾ ಪಂಚಾಯ್ತಿ ಸಭೆಯಲ್ಲಿಮಾತನಾಡಿದ ರಾಷ್ಟ್ರೀಯ ರೈತ ಮುಖಂಡ ರಾಕೇಶ್‌ಟಿಕಾಯತ್ ಮೇಲೆ ಕ್ರಿಮಿನಲ್ ಮೊಕದ್ದಮೆದಾಖಲಿಸಿರುವುದು ಖಂಡನೀಯ ಎಂದರು.
ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಿರಗಾಸೂರು ಶಂಕರ್, ಮೈಸೂರು ತಾಲೂಕು ಅಧ್ಯಕ್ಷ ಗಳಿಗರ ಹುಂಡಿ ವೆಂಕಟೇಶ್, ಪ್ರಧಾನ ಕಾರ್ಯದರ್ಶಿ ಬರಡನಪುರ ನಾಗರಾಜ್, ಹಾಡ್ಯ ರವಿ ಇತರರಿದ್ದರು.