Advertisement

ಕೃಷಿ ಕಾಯ್ದೆ ತಿದ್ದುಪಡಿ ತಿರಸ್ಕರಿಸಲು ಆಗ್ರಹ

01:56 PM Feb 24, 2021 | Team Udayavani |

ಕೋಲಾರ: ಮುಂಬರುವ ರಾಜ್ಯ ಬಜೆಟ್‌ ಅಧಿವೇಶನದಲ್ಲಿ ರೈತ ವಿರೋಧಿ ಕೃಷಿ ಮಸೂದೆಗಳು ಹಾಗೂ ಕಾರ್ಮಿಕ ವಿರೋಧಿ ಸಂಹಿತೆಯ ತಿದ್ದುಪಡಿ ತಿರಸ್ಕರಿಸಬೇಕು ಎಂದು ಸಿಐಟಿಯು ಜಿಲ್ಲಾ ಸಮಿತಿ ನೇತೃತ್ವದಲ್ಲಿ ಮಂಗಳವಾರ ನಗರದ ತಹಶೀಲ್ದಾರ್‌ ಕಚೇರಿ ಮುಂದೆ ಧರಣಿ ನಡೆಸಿದರು.

Advertisement

ನಗರದ ಪ್ರವಾಸಿ ಮಂದಿರದಿಂದ ಮೆರವಣಿಗೆ ಮೂಲಕ ರಾಜ್ಯ ಮತ್ತು ಕೇಂದ್ರ ಸರ್ಕಾರದ ರೈತ, ಕಾರ್ಮಿಕ ನೀತಿಗಳ ವಿರುದ್ಧ ಘೋಷಣೆ ಕೂಗುತ್ತಾ ತಹಶೀಲ್ದಾರ್‌ ಕಚೇರಿಗೆ ಆಗಮಿಸಿದ ಕಾರ್ಯಕರ್ತರು ಜನಸಾಮಾನ್ಯರ ವಿರೋಧಿ ಕಾನೂನನ್ನು ಹಿಂಪಡೆಯಬೇಕು ಹಾಗೂ ಸಂಘಟಿತ ಅಸಂಘಟಿತ ಕಾರ್ಮಿಕರ ಬೇಡಿಕೆ ಈಡೇರಿಸಬೇಕು ಎಂದರು.

ಸಿಐಟಿಯು ಜಿಲ್ಲಾ ಗೌರವ ಅಧ್ಯಕ್ಷ ಗಾಂಧಿನಗರ ನಾರಾಯಣ ಸ್ವಾಮಿ ಮಾತನಾಡಿ, ದೇಶದಲ್ಲಿ 29 ಕಾನೂನುಗಳನ್ನು 4 ಸಂಹಿತೆಗಳನ್ನಾಗಿ ಮಾಡಿರುವ ಕೇಂದ್ರದ ಶಾಸನಗಳನ್ನು ರಾಜ್ಯ ಸರ್ಕಾರ ಜಾರಿ ಮಾಡಬಾರದು. 3 ಕೃಷಿ ಕಾನೂನುಗಳನ್ನುಹಿಂಪಡೆಯಬೇಕು, ವಿದ್ಯುತ್ಛಕ್ತಿ ಖಾಸಗೀಕರಣ ಕೈಬಿಡಬೇಕೆಂದುಒತ್ತಾಯಿಸಿದರು. ಅಭಿವೃದ್ಧಿ ಹೆಸರಿನಲ್ಲಿ ಬೆಮೆಲ್‌, ಎಲ್‌ಐಸಿ, ಬ್ಯಾಂಕ್‌ ಮತ್ತಿತರ ಸಾರ್ವಜನಿಕ ಉದ್ದಿಮೆಗಳ ಹಾಗೂ ಸೇವೆಗಳಖಾಸಗೀಕರಣದ ನೀತಿಗಳನ್ನು ಕೈಬಿಡಬೇಕು ಎಂದರು.

ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ ವಿಜಯಕೃಷ್ಣ ಮಾತನಾಡಿ, ಪ್ರತಿ ಜಿಲ್ಲೆಯಲ್ಲಿ ಕಾರ್ಮಿಕ ನ್ಯಾಯಾಲಯಗಳನ್ನು ಸ್ಥಾಪಿಸಬೇಕು ಅಂಗನವಾಡಿ, ಬಿಸಿಯೂಟ, ಮತ್ತು ಆಶಾ ಕಾರ್ಯಕರ್ತೆಯರ ಕೆಲಸ ಖಾಯಂ ಆಗಬೇಕು ಎಂದು ಒತ್ತಾಯಿಸಿದರು.

ಧರಣಿಯ ನೇತೃತ್ವವನ್ನು ಸಿಐಟಿಯು ಮುಖಂಡರಾದ ಎಂ.ಭೀಮರಾಜ್‌, ಕೇಶವರಾವ್‌, ಆಶಾ, ಮಂಜುಳಮ್ಮ, ಜಯಲಕ್ಷ್ಮೀ, ಲೋಕೇಶ್ವರಿ, ಆರೋಗ್ಯನಾಥನ್‌, ನಾರಾಯಣಪ್ಪ, ಗುಲಾಜರ್‌, ವೆಂಕಟರಾಮೇಗೌಡ, ವೆಂಕಟಲಕ್ಷ್ಮಮ್ಮ ಮುಂತಾ ದವರು ವಹಿಸಿದ್ದರು.

Advertisement

ಕಾಡಾನೆಗಳ ದಾಳಿಗೆ ರೈತ ಬಲಿ :

ಬಂಗಾರಪೇಟೆ: ಕಾಡಾನೆ ಹಿಂಡು ದಾಳಿಗೆ ರೈತನೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲೂಕಿನ ಕಾಮ ಸಮುದ್ರ ಹೋಬಳಿಯ ಬತ್ತಲಹಳ್ಳಿ ಗ್ರಾಮದಲ್ಲಿ ನಡೆದಿದೆ. ತಾಲೂಕಿನ ಭತ್ತಲಹಳ್ಳಿ ಗ್ರಾಮದ ಹೊರ ವಲಯದ ತೋಟದ ಬಳಿ ಸೋಮವಾರ ರಾತ್ರಿ 11 ಗಂಟೆಸಮಯದಲ್ಲಿ ಈ ಘಟನೆ ನಡೆದಿದ್ದು, ವೆಂಕಟೇಶಪ್ಪ (53) ರೈತ ಆನೆ ದಾಳಿಯಿಂದ ಮೃತಪಟ್ಟಿದ್ದಾನೆ.

ರಾತ್ರಿ ಊಟ ಮಾಡಿ ತೋಟದ ಬಳಿ ಕಾವಲಿಗೆಂದು ತೆರಳುತ್ತಿದ್ದ ವೇಳೆ ಕಾಡಾನೆ ಹಿಂಡು ದಾಳಿ ಮಾಡಿದ್ದು, ತಲೆ ಸಂಪೂರ್ಣವಾಗಿ ನಜ್ಜಗುಜ್ಜಾದ್ದು, ರೈತ ವೆಂಕಟೇಶಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಕಳೆದ 6 ತಿಂಗ ಳಲ್ಲಿ ಕಾಡಾನೆಗಳ ಹಿಂಡು ದಾಳಿಗೆ 3 ಜನರನ್ನ ಬಲಿ ಪಡೆ ದಿರುವ ಕಾಡಾನೆಗಳ ದಾಳಿಯಿಂದ ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ

ಆತಂಕ ಹೆಚ್ಚಾಗಿದೆ. ಕಳೆದ ಮೂರು ತಿಂಗಳಿ ನಿಂದ ಗಡಿಯಲ್ಲಿಬೀಡು ಬಿಟ್ಟಿರುವ ಕಾಡಾನೆ ಹಿಂಡು ಕಾಮಸಮುದ್ರ ಹಾಗೂ ಬೂದಿಕೋಟೆ ಹೋಬಳಿಯ ಜನರ ನಿದ್ದೆಗೆಡಿಸಿದೆ. ಕಾಡಾನೆ ದಾಳಿಗೆ ಪರಿಹಾರ ಕಂಡುಕೊಕೊಳ್ಳದ ಅರಣ್ಯ ಇಲಾಖೆ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next