ಚಿಕ್ಕಮಗಳೂರು: ಇಂಧನ ಬೆಲೆ ಹೆಚ್ಚಳ ವಿರೋಧಿ ಸಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ನಗರದ ವಿವಿಧ ಪೆಟ್ರೋಲ್ ಬಂಕ್‌ಗಳ ಎದುರು ಪ್ರತಿಭಟನೆ ನಡೆಸಿ ಬೆಲೆ ಹೆಚ್ಚಳ ವಿರೋಧಿಸಿ ಆಕ್ರೋಶ ವ್ಯಕ್ತಪಡಿಸಿದರು.
ಶುಕ್ರವಾರ ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ, ಶಾಮನೂರು, ಆಂಜನೇಯ ಪೆಟ್ರೋಲ್ ಬಂಕ್, ಕೆ.ಎಂ. ರಸ್ತೆಯ ಎಬಿಸಿ ಮುಂಭಾಗದ ಪೆಟ್ರೋಲ್ ಬಂಕ್‌ಸೇರಿದಂತೆ ನಗರದ 16 ಕಡೆಗಳಲ್ಲಿ ಕಾರ್ಯಕರ್ತರು ತಟ್ಟೆ ಬಡಿದು ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಘೋಷಣೆ ಕೂಗಿದರು.
ಕೋವಿಡ್ ಲಾಕ್‌ಡೌನ್ ಸಂದರ್ಭದಲ್ಲಿ ಜನರು ಉದ್ಯೋಗವಿಲ್ಲದೆ ಆರ್ಥಿಕವಾಗಿ ನಷ್ಟಕ್ಕೆ ಒಳಗಾಗಿದ್ದಾರೆ. ಇದರ ನಡುವೆ ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲ ದರ ಏರಿಕೆ ಮಾಡಿರುವುದು ಖಂಡನೀಯ ಎಂದರು.
ಇಂಧನ ಬೆಲೆ ಏರಿಕೆಯಿಂದ ಜನರು ತತ್ತರಿಸಿ ಹೋಗಿದ್ದು, ಜನಸಾಮಾನ್ಯರ ಕಷ್ಟಗಳನ್ನು ಸರ್ಕಾರಕ್ಕೆ ತಿಳಿಸುವಲ್ಲಿ ರಾಜ್ಯದ ಸಂಸದರು, ಮತ್ತು ಜನಪ್ರತಿನಿಧಿ ಗಳು ವಿಫಲರಾಗಿದ್ದಾರೆ ಎಂದ ಅವರು, ಕೇಂದ್ರ ಮತ್ತು ರಾಜ್ಯ ಸರ್ಕಾರ ತಕ್ಷಣ ಇಂಧನ ಬೆಲೆಯನ್ನು ತಗ್ಗಿಸಬೇಕೆಂದು ಆಗ್ರಹಿಸಿದರು.
ಪೆಟ್ರೋಲ್‌ನ ಮೂಲ ಬೆಲೆ 35ರೂ. ಮಾತ್ರವಿದ್ದರೂ ಕೇಂದ್ರ ಸರ್ಕಾರ ಪ್ರತೀ ಲೀಟರ್‌ಗೆ 65 ರೂ. ತೆರಿಗೆ ವಿಧಿಸುವ ಮೂಲಕ ಬಡವರು ಮತ್ತು ಮಧ್ಯಮ ವರ್ಗದ ಜನರು ತತ್ತರಿಸುವಂತೆ ಮಾಡಿದೆ. ಇಂಧನ ಬೆಲೆ ಏರಿಕೆ ವಿರೋಧಿಸಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗೆಬೆಲೆ ಕೊಟ್ಟು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರುಇಂಧನ ಬೆಲೆಯನ್ನು ತಕ್ಷಣ ಇಳಿಸಬೇಕು. ಇಲ್ಲದಿದ್ದರೆ ಪ್ರತಿಭಟನೆಯನ್ನು ಇನಷ್ಟು ತೀವ್ರಗೊಳಿಸುವುದಾಗಿ ಎಚ್ಚರಿಸಿದರು.
ವಿವಿಧೆಡೆ ನಡೆದ ಪ್ರತಿಭಟನೆಯಲ್ಲಿ ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಎಂ. ಎಲ್. ಮೂರ್ತಿ, ವಿಧಾನ ಪರಿಷತ್ ಮಾಜಿ ಸದಸ್ಯೆ ಗಾಯತ್ರಿ ಶಾಂತೇಗೌಡ, ಕೆಪಿಸಿಸಿ ಜಿಲ್ಲಾ ಸಂಯೋಜಕ ಪವನ್, ಹಿರೇಮಗಳೂರು ಪುಟ್ಟಸ್ವಾಮಿ, ರೇಖಾ ಹುಲಿಪ್ಪಗೌಡ, ಡಾ|ವಿಜಯ್ ಕುಮಾರ್ ಪವನ್, ಚೇತನ್, ಪ್ರಸನ್ನ, ಆನಂದ್, ಕೋಟೆ ಮಂಜುನಾಥ್, ಯುವ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ರಾಹಿಲ್ ಷರೀಫ್, ಯುವ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಆದಿತ್ಯ, ಕಿಸಾನ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅರೇನಹಳ್ಳಿ ಪ್ರಕಾಶ್, ಬ್ಲಾಕ್ ಯುವಕಾಂಗ್ರೆಸ್ ಅಧ್ಯಕ್ಷ ಸುಬಾನ್, ರಫೀಕ್ ಅಹ್ಮದ್, ಪ್ರದೀಪ್, ಆಕಾಶ್, ತರೀಕೆರೆ ಸುಬಾನ್ ಭಾಗವಹಿಸಿದ್ದರು.