Advertisement

ಕೇಂದ್ರ-ರಾಜ್ಯ ಸರ್ಕಾರ ವಿರುದ್ಧ ಆಕ್ರೋಶ

04:11 PM Jan 02, 2021 | Team Udayavani |

ದಾವಣಗೆರೆ; ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತ, ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿವೆ ಎಂದು ಆರೋಪಿಸಿಸೋಮವಾರ ಜಯದೇವ ವೃತ್ತದಲ್ಲಿ ಸಿಐಟಿಯು ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

Advertisement

ಕೇಂದ್ರ ಸರ್ಕಾರದ ರೈತ  ಮತ್ತು ಕಾರ್ಮಿಕ ವಿರೋಧಿ ಕಾಯ್ದೆಗಳ ಪ್ರತಿಗಳನ್ನುಹರಿದುಹಾಕುವ ಮೂಲಕ ಹೊಸ ವರ್ಷದದಿನವನ್ನು ಆಚರಿಸಿದರು. “ಕಾರ್ಮಿಕಹಕ್ಕುಗಳನ್ನು ಉಳಿಸುತ್ತೇವೆ, ರೈತರ ಬದುಕನ್ನುರಕ್ಷಿಸುತ್ತೇವೆ, ಕಾರ್ಪೋರೇಟ್‌ ಹಿಡಿತದಿಂದ ದೇಶವನ್ನು ಕಾಪಾಡುತ್ತೇವೆ’ ಎಂಬ ಪ್ರತಿಜ್ಞೆಯೊಂದಿಗೆ ಹೊಸ ವರ್ಷದ ದಿನವನ್ನುಸ್ವಾಗತಿಸಿದರು.

ಕೇಂದ್ರ ಸರ್ಕಾರ ಎಲ್ಲಾ ನಾಲ್ಕು ಕಾರ್ಮಿಕಸಂಹಿತೆಗಳನ್ನು ರದ್ದುಗೊಳಿಸಬೇಕು.ಮೂರು ಕೃಷಿ ಕಾನೂನುಗಳನ್ನು ವಾಪಸ್‌ ಪಡೆಯಬೇಕು.. ಎಲ್ಲಾ ರೀತಿಯ ಖಾಸಗೀಕರಣವನ್ನು ಕೂಡಲೇ ನಿಲ್ಲಿಸಬೇಕು. ಆದಾಯ ತೆರಿಗೆಯ ಮಿತಿಯಿಂದಹೊರಗಿರುವ ಎಲ್ಲಾ ಕುಟುಂಬಗಳಿಗೂಮಾಸಿಕ 7,500 ನಗದು ಹಣ ವರ್ಗಾವಣೆ ಮಾಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಬಡವರಿಗೆ ಪ್ರತಿಯೊಬ್ಬರಿಗೂ ಪ್ರತಿತಿಂಗಳು 10 ಕೆ.ಜಿ. ಆಹಾರ ಧಾನ್ಯಗಳನ್ನುಉಚಿತವಾಗಿ ನೀಡಬೇಕು. ಗ್ರಾಮೀಣಉದ್ಯೋಗ ಖಾತರಿ ಯೋಜನೆಯಡಿಯಲ್ಲಿವಾರ್ಷಿಕ 200 ದಿನಗಳ ಕೆಲಸ ಮತ್ತು ದಿನಕ್ಕೆ700 ರೂಪಾಯಿ ಕೂಲಿ ನೀಡಬೇಕು, ನಗರ ಪ್ರದೇಶಗಳಿಗೂ ಈ ಯೋಜನೆ ವಿಸ್ತರಿಸಬೇಕು.ಹೊಸ ಪಿಂಚಣಿ ಯೋಜನೆ ರದ್ದುಗೊಳಿಸಿ ಹಳೆ ಪಿಂಚಣಿ ವ್ಯವಸ್ಥೆ ಜಾರಿಗೆ ತರಬೇಕು. ಎಲ್ಲಾ ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ರಕ್ಷಣಾಯೋಜನೆಗಳನ್ನು ವಿಸ್ತರಿಸಬೇಕು. ಉಚಿತವಾಗಿಸಾರ್ವತ್ರಿಕ ಆರೋಗ್ಯ ರಕ್ಷಣೆಯನ್ನು ಎಲ್ಲರಿಗೂ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next