Advertisement

ಪ್ರಧಾನಿ ಮೋದಿ-ಸಿಎಂ ಯಡಿಯೂರಪ್ಪಗಿಲ್ಲ ರೈತ ಪರ ಕಾಳಜಿ

03:44 PM Sep 29, 2020 | Suhan S |

ಸಿಂಧನೂರು: ಕೇಂದ್ರ ಮತ್ತು ರಾಜ್ಯ ಸರ್ಕಾರ  ಸುಗ್ರೀವಾಜ್ಞೆ ಮೂಲಕ ರೈತ ಮತ್ತು ಕಾರ್ಮಿಕ ವಿರೋಧಿ  ಕಾಯ್ದೆ ಜಾರಿ ವಿರೋಧಿಸಿ ರೈತ ಸಂಘಟನೆ ಸೇರಿ ವಿವಿಧ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್‌ ಸಿಂಧನೂರಲ್ಲಿ ಯಶಸ್ವಿಯಾಯಿತು. ನಗರದಲ್ಲಿ ಪ್ರಗತಿಪರ ಸಂಘಟನೆಗಳ ಒಕ್ಕೂಟ ಹಾಗೂ ರೈತ ಪರ ಸಂಘಟನೆಗಳ ಸಮನ್ವಯ ಸಮಿತಿ ಸೇರಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

Advertisement

ಸಾಮ್ರಾಜ್ಯಶಾಹಿ ವಿರೋಧಿ  ಒಕ್ಕೂಟ ಅಧ್ಯಕ್ಷ ಸಂಚಾಲಕ ಚಂದ್ರಶೇಖರ ಗೊರೇಬಾಳ ಮಾತನಾಡಿ, ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ ಹಾಗೂ ವಿದ್ಯುತ್‌ ಕಾಯ್ದೆಗಳಿಗೆ ತಿದ್ದುಪಡಿ ಮಾಡಿದ್ದು, ಇವು ರೈತ ಮತ್ತು ಕಾರ್ಮಿಕರಿಗೆ ಮರಣ ಶಾಸನಗಳಾಗಿವೆ. ಪ್ರಧಾನಿ ಮೋದಿ, ಸಿಎಂ ಯಡಿಯೂರಪ್ಪಗೆ ರೈತರ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ. ಬದಲಾಗಿ ಕಾರ್ಪೋರೇಟ್‌ ಕಂಪನಿಗಳ ಪರ ಕೆಲಸ ಮಾಡುತ್ತಿದ್ದಾರೆ ಎಂದು ದೂರಿದರು.

ಮಾಜಿ ಶಾಸಕ ಹಂಪನಗೌಡ ಬಾದರ್ಲಿ ಮಾತನಾಡಿ, ಸರ್ಕಾರ ರೈತರು, ಕಾರ್ಮಿಕರ ಪರ ಕಾನೂನು ಜಾರಿಗೆ ಮುಂದಾಗಬೇಕು ಎಂದು ಆಗ್ರಹಿಸಿದರು.

ವರ್ತಕರ ಸಂಘದ ಕಾರ್ಯದರ್ಶಿಪೂಜಪ್ಪ ಪೂಜಾರಿ, ಗೊಬ್ಬರ ಮತ್ತು ಕ್ರಿಮಿನಾಶಕ ವ್ಯಾಪಾರಿಗಳ ಸಂಘ ಅಧ್ಯಕ್ಷ ಎನ್‌.ಭೀಮನಗೌಡ ಗೊರೇಬಾಳ, ಬಸವರಾಜ ಬಾದರ್ಲಿ, ಮಹಾದೇವ ಧುಮತಿ, ನಾರಾಯಣ ಬೆಳಗುರ್ಕಿ, ಸಮ್ಮದ್‌ ಚೌದ್ರಿ, ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next