Advertisement

ಹತ್ರಾಸ್‌ ಹತ್ಯಾಚಾರ ವಿರುದ್ಧ ಆಕ್ರೋಶ : ಯುವತಿ ಕುಟುಂಬಕ್ಕೆ ಪರಿಹಾರ ಒದಗಿಸಲು ಆಗ್ರಹ

12:18 PM Oct 08, 2020 | sudhir |

ರಾಣಿಬೆನ್ನೂರ: ಉತ್ತರ ಪ್ರದೇಶದ ಹಾಥರಸ್‌ನಲ್ಲಿ ದಲಿತ ವರ್ಗದ ಯುವತಿಯೊಬ್ಬಳ ಮೇಲೆ ಅಮಾನುಷ ರೀತಿಯಲ್ಲಿ ಸಾಮೂಹಿಕ ಅತ್ಯಾಚಾರ ನಡೆಸಿದ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿ ಅಖೀಲ ಕರ್ನಾಟಕ ವಾಲ್ಮೀಕಿ
ನಾಯಕ ಮಹಾಸಭಾದ ಪದಾಧಿಕಾರಿಗಳು ಮತ್ತು ವಾಲಿ¾ಕಿ ಸಮಾಜ ಹಾಗೂ ವಿವಿಧ ಸಮಾಜ ಮುಖಂಡರು ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಿ, ತಹಶೀಲ್ದಾರ್‌ ಮೂಲಕ ರಾಷ್ಟಪತಿಗೆ ಮನವಿ ಸಲ್ಲಿಸಿದರು.

Advertisement

ಇಲ್ಲಿನ ಬಸ್‌ ನಿಲ್ದಾಣದ ಎದುರು ರಸ್ತೆ ತಡೆ ನಡೆಸಿ ಟೈರ್‌ಗೆ ಬೆಂಕಿ ಹಚ್ಚಿ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಪ್ರತಿಭಟನೆ ನೇತೃತ್ವ ವಹಿಸಿದ್ದ ರೈತ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ರವಿಂದ್ರಗೌಡ ಪಾಟೀಲ ಮಾತನಾಡಿ, ಉತ್ತರ ಪ್ರದೇಶದ ಹಾಥರಸ್‌ನಲ್ಲಿ ದಲಿತ ವರ್ಗದ ಯುವತಿಯೊಬ್ಬಳ ಮೇಲೆ ಅಮಾನುಷ ರೀತಿಯಲ್ಲಿ ಅತ್ಯಾಚಾರ ನಡೆಸಿದ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ನೀಡಬೇಕು.

ಮೃತ ದೇಹವನ್ನು ಸುಟ್ಟು ಸಾಕ್ಷಿ ನಾಶಮಾಡಿದವರನ್ನು ಉಗ್ರ ಶಿಕ್ಷೆಗೆ ಗುರಿಪಡಿಸಬೇಕು. ಸಂತ್ರಸ್ಥ ಕುಟುಂಬಕ್ಕೆ ನ್ಯಾಯ
ಒದಗಿಸಿ ಕೊಡಬೇಕು ಎಂದು ಒತ್ತಾಯಿಸಿದರು. ವಾಲ್ಮೀಕಿ ಸಹಾಸಭಾದ ತಾಲೂಕು ಅಧ್ಯಕ್ಷ ಚಂ ದ್ರಣ್ಣ ಬೇಡರ, ಹನುಮಂತಪ್ಪ ಬ್ಯಾಲದಹಳ್ಳಿ, ಶಶಿಧರ ಬಸೇನಾಯ್ಕರ, ಹನುಮಂತಪ್ಪ ಚಳಗೇರಿ, ಭೀಮಣ್ಣ ಯಡಚಿ, ಸಣ್ಣತಮ್ಮಪ್ಪ ಬಾರ್ಕಿ, ನ್ಯಾಯವಾದಿ ನಾಗರಾಜ ಕುಡಪಲಿ, ನಾಗರಾಜ ತಳವಾರ, ದಿಳ್ಳೆಪ್ಪ ಸತ್ಯಪ್ಪನವರ, ಹರಿಹರಗೌಡ ಪಾಟೀಲ, ಸಾಕಮ್ಮ ನಾಯಕ, ರೂಪಾ ತಳವಾರ, ಗಿರಿಜವ್ವ ಬೊಮ್ಮಕ್ಕನವರ, ಹಾಲವ್ವ ಬೊಮ್ಮಕ್ಕನವರ, ರತ್ನವ್ವ ಹೊರಕೇರಿ, ಬಸಣ್ಣ ಕೊಂಗಿ, ಈರಪ್ಪ ಬಸೇಕಾಯಕರ, ಹಾಲೇಶ ಬಸೇನಾಯಕರ, ಹನುಮಂತಪ್ಪ ಮೀನಕಟ್ಟಿ, ಕೆಂಚಪ್ಪ ಮುಷ್ಟೂರನಾಯಕ, ಶ್ರೀನಿವಾಸ ನಲವಾಗಲ ಹಾಗೂ ವಿವಿಧ ಸಂಘಟನೆ ಪದಾಧಿಕಾರಿಗಳು ಇದ್ದರು.

ಇದನ್ನೂ ಓದಿ :ಹುಬ್ಬಳ್ಳಿಯಲ್ಲಿ ಮಂಜು ಕವಿದ ವಾತಾವರಣ: 25 ನಿಮಿಷ ಸುತ್ತಾಡಿ ಲ್ಯಾಂಡ್ ಆದ ವಿಮಾನ

ಹಾವೇರಿ: ಉತ್ತರ ಪ್ರದೇಶ ರಾಜ್ಯದ ಹತ್ರಾಸ್‌, ಬಲರಾಂಪುರ ಜಿಲ್ಲೆಯಲ್ಲಿ ನಡೆದ ಅತ್ಯಾಚಾರ ಖಂಡಿಸಿ ಮತ್ತು ಕೊಲೆ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡುವಂತೆ ಒತ್ತಾಯಿಸಿ ಸ್ವಯಂ ಸೇವಾ ಸಂಸ್ಥೆಗಳ ಒಕ್ಕೂಟ ಹಾಗೂ ಸಾಮಾಜಿಕ ಪರಿವರ್ತನ ಜನಾಂದೋಲನದ ವತಿಯಿಂದ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

Advertisement

ಒಕ್ಕೂಟದ ಕಾರ್ಯದರ್ಶಿ ಎಸ್‌.ಎಚ್‌. ಮಜೀದ್‌ ಮಾತನಾಡಿ, ದೇಶದಾದ್ಯಂತ ವಿದ್ಯಾರ್ಥಿನಿಯರ ಮತ್ತು ಮಹಿಳೆಯರ
ಮಕ್ಕಳ ಮೇಲೆ ಅತ್ಯಾಚಾರ, ದೌರ್ಜನ್ಯ, ದಬ್ಟಾಳಿಕೆ ಹಾಗೂ ಕ್ರೌರ್ಯದ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದನ್ನು
ತಡೆಯುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ, ಸಂಬಂಧಿಸಿದ ಇಲಾಖೆಗಳು ಸೂಕ್ತ ಕ್ರಮ ವಹಿಸಬೇಕಿದೆ.

ಇದನ್ನೂ ಓದಿ :ಪ್ರವಾಹಕ್ಕೆ ತುತ್ತಾಗಿ ಮನೆ ಕಳೆದುಕೊಂಡ ನೆರೆ ಸಂತ್ರಸ್ತರಿಗೆ ಪರಿಹಾರ ಕೊಡಿ

ನಾಗರಿಕ ಸಮಾಜ ತಲೆ ತಗ್ಗಿಸುವಂತಹ ಅಮಾನವೀಯ ಮತ್ತು ಕ್ರೂರವಾದ ಅತ್ಯಾಚಾರ ಮಾಡಿ ಕೊಲೆ ಮಾಡಿದ ಪ್ರಕರಣವು ಉತ್ತರ ಪ್ರದೇಶದ ಹತ್ರಾಸ್‌ ಹಾಗೂ ಬಲರಾಂಪುರದಲ್ಲಿ ನಡೆದಿದೆ. ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಮಾಡಿ, ಚಿತ್ರಹಿಂಸೆ ನೀಡಿ ಸಾಕ್ಷಿ ನಾಶಕ್ಕಾಗಿ ನಾಲಿಗೆಯನ್ನು ಕತ್ತರಿಸಿ ಕ್ರೂರವಾಗಿ ಕೊಲೆಗೆ ಯತ್ನ ಮಾಡಿರುವ ಈ ಪ್ರಕರಣವನ್ನು ಉತ್ತರ ಪ್ರದೇಶ ಸರ್ಕಾರ ಗಂಭೀರವಾಗಿ ಪರಿಗಣಿಸಿ ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ನೀಡಬೇಕು ಹಾಗೂ ಯುವತಿಯ ಕುಟುಂಬಕ್ಕೆ ಪರಿಹಾರ ಒದಗಿಸಬೇಕು ಎಂದು ಒತ್ತಾಯಿಸಿ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಾಮಾಜಿಕ ಕಾರ್ಯಕರ್ತೆ ಗೀತಾ ಪಾಟೀಲ್‌, ಸಾಮಾಜಿಕ ಪರಿವರ್ತನಾ ಜನಾಂದೊಲನದ ಸಂಚಾಲಕಿ ಹಸಿನಾ ಹೆಡಿಯಾಲ, ಒಕ್ಕೂಟದ ಖಜಾಂಚಿ ಮುತ್ತುರಾಜ ಮಾದರ, ಎಚ್‌. ಎಫ್‌. ಅಕ್ಕಿ ಹಾಗೂ ಸ್ವಯಂ ಸೇವಾಸಂಸ್ಥೆಯ
ಪ್ರತಿನಿಧಿಗಳು ಹಾಗೂ ಸಾಮಾಜಿಕ ಕಾರ್ಯಕರ್ತರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next