Advertisement

ಹೈಟೆಕ್‌ ಮಾರುಕಟ್ಟೆ ನಿರ್ಮಾಣದ ವಿರುದ್ಧ ಪ್ರತಿಭಟನೆ

06:47 AM Jul 06, 2019 | Team Udayavani |

ಅರಸೀಕೆರೆ: ಜಿಲ್ಲಾಡಳಿತ ಮತ್ತು ನಗರಸಭೆ ಆಡಳಿತ ಹೈಟೆಕ್‌ ಮಾರುಕಟ್ಟೆ ನಿರ್ಮಿಸುವುದರ ವಿರುದ್ಧ ಸಂತೆ ವ್ಯಾಪಾರಿಗಳು ಮನವಿ ಸಲ್ಲಿಸಿದರೂ ಯಾವುದೇ ರೀತಿಯಲ್ಲಿ ಸ್ಪಂದಿಸುತ್ತಿಲ್ಲ ಎಂದು ಕೆಲವು ಮಂದಿ ಸಂತೆ ವ್ಯಾಪಾರಿಗಳು ಶುಕ್ರವಾರ ಸಂತೆ ಮೈದಾನ ಆವರಣದಲ್ಲಿ ಪ್ರತಿಭಟನೆಯನ್ನು ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

Advertisement

ಪರ- ವಿರೋಧ: ನಗರದ ಸಂತೆ ಮೈದಾನದಲ್ಲಿ ಹೈಟೆಕ್‌ ವಾಣಿಜ್ಯ ಮಳಿಗೆಗಳ ನಿರ್ಮಾಣಕ್ಕೆ ನಗರಸಭೆ ಆಡಳಿತ ಮುಂದಾಗಿದ್ದು, ಇದಕ್ಕೆ ಜಿಲ್ಲಾಡಳಿತ ಹಸಿರು ನಿಶಾನೆ ನೀಡಿ ಕಟ್ಟಡ ಕಾಮಗಾರಿ ನಡೆಯುತ್ತಿದ್ದು ಸಾರ್ವಜನಿಕ ವಲಯದಲ್ಲಿ ಪರ ವಿರೋಧ ಚರ್ಚೆಗೆ ಕೂಡ ಗ್ರಾಸವಾಗಿದೆ.

ನಗರಸಭೆ ಅಧಿಕಾರಿಗಳು ಕಾಮಗಾರಿ ಪೂರ್ಣಗೊಳಿಸೇ ತೀರುವುದಾಗಿ ಹೇಳಿದ್ದು, ಸ್ವತಃ ಜಿಲ್ಲಾ ದಿಕಾರಿಗಳೇ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದು ಕೆಲವು ಸಂತೆ ವ್ಯಾಪಾರಿಗಳ ಅಸಮಾಧಾನಕ್ಕೆ ಕಾರಣವಾಗಿದೆ.

ಸಂಘಟನೆಗಳ ನೇತೃತ್ವ: ಈ ಹಿನ್ನೆಲೆಯಲ್ಲಿ ಜಿಲ್ಲಾ ರೈತ ಸಂಘದ ಸಂಚಾಲಕ ಕನಕೆಂಚೇನಹಳ್ಳಿ ಪ್ರಸನ್ನ ಕುಮಾರ್‌ ಹಾಗೂ ಕನ್ನಡ ಅಭಿಮಾನಿಗಳ ಸಂಘದ ಕಾರ್ಯದರ್ಶಿ ಎ.ಜಿ. ಯೋಗೀಶ್‌ ನೇತೃತ್ವದಲ್ಲಿ ಕೆಲವು ಮಂದಿ ಸಂತೆ ವ್ಯಾಪಾರಿಗಳು ಪ್ರತಿಭಟನೆ ನಡೆಸುವ ಮೂಲಕ ಸಂತೆ ಮೈದಾನದಲ್ಲಿ ವಾಣಿಜ್ಯ ಸಂಕೀರ್ಣಗಳ ನಿರ್ಮಾಣ ಬೇಡ ಮೊದಲಿನಂತೆ ಶುಕ್ರವಾರದ ಸಂತೆ ವ್ಯಾಪಾರಕ್ಕೆ ಅನುವು ಮಾಡಿಕೊಡುವಂತೆ ಒತ್ತಾಯಿಸಿದರು.

ಪರ್ಯಾಯ ವ್ಯವಸ್ಥೆ ಕಲ್ಪಿಸಿಲ್ಲ: ಈ ಸಂದರ್ಭದಲ್ಲಿ ಜಿಲ್ಲಾ ರೈತ ಸಂಘದ ಸಂಚಾಲಕ ಕನಕೆಂಚೇನಹಳ್ಳಿ ಪ್ರಸನ್ನ ಕುಮಾರ್‌ ಮಾತನಾಡಿ, ಸಂತೆ ವ್ಯಾಪಾರಕ್ಕೆ ಪರಿಹಾರ ವ್ಯವಸ್ಥೆ ಕಲ್ಪಿಸದೇ ಏಕಾಏಕಿ ವಾಣಿಜ್ಯ ಮಳಿಗೆಗಳ ನಿರ್ಮಾಣಕ್ಕೆ ಮುಂದಾಗಿರುವ ನಗರಸಭೆ ಕ್ರಮವನ್ನ ಖಂಡಿಸಿದರಲ್ಲದೇ ರೈತರು ವ್ಯಾಪಾರಿಗಳು ಹಾಗೂ ಗ್ರಾಹಕರ ಹಿತ ದೃಷ್ಟಿಯಿಂದ ವಾಣಿಜ್ಯ ಮಳಿಗೆ ಕಾಮಗಾರಿ ಪೂರ್ಣಗೊಳ್ಳುವವರೆಗೂ ಸಂತೆ ವ್ಯಾಪಾರಕ್ಕೆ ಪರಿಯಾಯ ವ್ಯವಸ್ಥೆ ಕಲ್ಪಿಸಬೇಕು. ಕಾಮಗಾರಿ ಪೂರ್ಣಗೊಂಡ ರಿಯಾಯಿತಿ ದರದಲ್ಲಿ ಸಂತೆ ವ್ಯಾಪಾರಿಗಳಿಗೆ ಮಳಿಗೆಗಳನ್ನು ನೀಡಬೇಕು ಎಂದು ಒತ್ತಾಯಿಸಿದರು.

Advertisement

ವ್ಯಾಪಾರಿಗಳಿಗೆ ಮಾರಕ: ಕನ್ನಡ ಅಭಿಮಾನಿಗಳ ಸಂಘದ ಕಾರ್ಯದರ್ಶಿ ಎ.ಜಿ.ಯೋಗೀಶ್‌ ಮಾತನಾಡಿ, ರೈತರು ಸಣ್ಣ ಪುಟ್ಟ ವ್ಯಾಪಾರಸ್ಥರ ಪಾಲಿಗೆ ನಗರಸಭೆ ತೆಗೆದುಕೊಂಡಿರುವ ನಿಲುವು ಮಾರಕವಾಗಿದೆ. ಕಳೆದ ಐದು ದಶಕಗಳಿಂದ ಸಂತೆ ನಡೆಯುತ್ತಿದ್ದು ಸಂತೆ ವ್ಯಾಪಾರ ಸ್ಥಗಿತಗೊಳಿಸಿ ಹೈಟೆಕ್‌ ಮಾರುಕಟ್ಟೆ ನಿರ್ಮಾಣಕ್ಕೆ ಸಾರ್ವಜನಿಕರ ವಿರೋಧದ ನಡುವೆಯೂ ನಗರಸಭೆ ಮುಂದಾಗಿರುವುದು ಅನುಮಾನಕ್ಕೆ ಕಾರಣವಾಗಿದೆ ಎಂದು ದೂರಿದರು.

ರೈತರ, ಸಂತೆವ್ಯಾಪಾರಿಗಳ ಹಾಗೂ ಸಾರ್ವಜನಿಕರ ಪರವಾಗಿ ಹೋರಾಟ ನಡೆಯಲಿದೆ ಎಂದು ಹೇಳಿದರು. ಪ್ರತಿಭಟನೆಯಲ್ಲಿ ಸಂತೆ ವ್ಯಾಪಾರಿಗಳಾದ ಸಂತೋಷ್‌, ರಾಮಾಚಾರಿ, ಗೋವಿಂದಪ್ಪ, ಮೀನಾಕ್ಷಮ್ಮ, ಕರಿಯಾಬೋವಿ, ರಂಗಪ್ಪ, ವೆಂಕಟೇಶ್‌, ಕೃಷ್ಣಮೂರ್ತಿ, ಮಹೇಶ್‌, ಮತ್ತಿತರರು ಪಾಲ್ಗೊಂಡಿದ್ದರು.

ರೈತರು, ಸಂತೆ ವ್ಯಾಪಾರಿಗಳು ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಸಂತೆ ಮೈದಾನದಲ್ಲಿ ವಾಣಿಜ್ಯ ಮಳಿಗೆಗಳನ್ನು ನಿರ್ಮಿಸಿ ಸಂತೆ ವ್ಯಾಪಾರಿಗಳಿಗೆ ಕೊಡುವ ಉದ್ದೇಶ ನಗರಸಭೆಯದ್ದಾಗಿದೆ. ಇದಕ್ಕೆ ಜಿಲ್ಲಾಧಿಕಾರಿಗಳೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
-ಪರಮೇಶ್ವರಪ್ಪ, ನಗರಸಭೆ ಆಯುಕ್ತ

Advertisement

Udayavani is now on Telegram. Click here to join our channel and stay updated with the latest news.

Next