Advertisement

ಹಿಂದಿ ಹೇರಿಕೆ ಖಂಡಿಸಿ ಕಕಜವೇ ಪ್ರತಿಭಟನೆ

02:05 PM Apr 23, 2022 | Team Udayavani |

ರಾಮನಗರ: ಅನ್ಯ ಭಾಷೆಗಳ ರಾಜ್ಯಗಳ ಮೇಲೆ ಹಿಂದಿ ಭಾಷೆಯನ್ನು ಹೇರುವುದನ್ನು ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಕಸ್ತೂರಿ ಕರ್ನಾಟಕ ಜನಪರ ವೇದಿಕೆಯ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು. ನಗರದ ಐಜೂರು ವೃತ್ತದಲ್ಲಿ ಜಮಾಯಿಸಿದ ವೇದಿಕೆಯ ಕಾರ್ಯಕರ್ತರು ಹಿಂದಿ ಹೇರಿಕೆಯನ್ನು ವಿರೋಧಿಸಿದರು.

Advertisement

ಈ ವೇಳೆ ಮಾತನಾಡಿದ ವೇದಿಕೆಯ ರಾಜ್ಯಾಧ್ಯಕ್ಷ ರಮೇಶ್‌ಗೌಡ, ಹಿಂದಿ, ಕನ್ನಡ, ತಮಿಳು, ತೆಲುಗಿನಂತೆಯೇ ಇಂಗ್ಲಿಷನ್ನು ಕೂಡ ಭಾರತೀಯ ಭಾಷೆಯನ್ನಾಗಿ ಅಂಗೀಕರಿಸಿದ್ದೇವೆ ಎಂಬುದನ್ನು ಕೇಂದ್ರ ಸರ್ಕಾರ ಮರೆಯಬಾರದು. ಹೀಗಾಗಿ ಇಂಗ್ಲೀಷನ್ನು ಸಂಪರ್ಕ ಭಾಷೆಯನ್ನಾಗಿ ಬಳಸಲು ಅವಕಾಶ ನೀಡಬೇಕು ಎಂದರು. ಒಂದು ನಿರ್ದಿಷ್ಟ ಸಿದ್ಧಾಂತ ಮತ್ತು ಪ್ರಭುತ್ವದ ರಾಜಕೀಯ ದುರ್ಬಳಕೆಗೆ ಒಂದು ಭಾಷೆಯನ್ನು ಹೇರುವುದು ಸರಿಯಲ್ಲ ಎಂದರು. ತ್ರಿ

ಭಾಷ ಸೂತ್ರ ಅಲ್ಲೇಕೆ ಅನ್ವಯವಾಗುತ್ತಿಲ್ಲ?: ಕೇಂದ್ರ ಸರ್ಕಾರ ಪ್ರತಿಪಾದಿಸುವ ತ್ರಿಭಾಷಾ ಸೂತ್ರವು ಹಿಂದಿ ಭಾಷಿಕ ಸೀಮೆಗಳಿಗೆ ಯಾಕೆ ಅನ್ವಯ ಆಗುತ್ತಿಲ್ಲ ಎಂದು ಅವರು ಪ್ರಶ್ನಿಸಿದರು. ಹಿಂದಿ ಭಾಷಿಕರು ಅಳವಡಿಸಿಕೊಂಡಿರುವ ಮೂರನೆಯ ಭಾಷೆ ಯಾವುದು ಎಂಬ ಪ್ರಶ್ನೆಗಳನ್ನು ದಕ್ಷಿಣ ಭಾರತೀಯರು ತಿರುಗಿ ಕೇಳಿದರೆ ಉತ್ತರ ಭಾರತದ ಬಳಿ ಏನು ಉತ್ತರವಿದೆ ಎಂದು ಟೀಕಿಸಿದರು.

ರಾಜ್ಯದಲ್ಲಿ ಇರುವ ಕನ್ನಡ ಶಾಲೆಗಳನ್ನು ಉಳಿಸುವಂತಹ ಕೆಲಸ ಮಾಡಬೇಕು. ಗಡಿಯನ್ನು ಅಭಿವೃದ್ಧಿ ಮಾಡಬೇಕು ಸೇರಿ ದಂತೆ ಇನ್ನಿತರ ಬೇಡಿಕೆಗಳನ್ನು ಈಡೇರಿಸ ಬೇಕು. ಬೇಡಿಕೆಗಳು ಈಡೇರಿಸುವವರೆಗೂ ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು ಎಂದು ಅವರು ಎಚ್ಚರಿಸಿದರು.

ಕನ್ನಡ ಭಾಷೆಗೆ ಅಪಾಯ: ಕಸ್ತೂರಿ ಕರ್ನಾಟಕ ಜನಪರ ವೇದಿಕೆಯ ರಾಮ ನಗರ ಜಿಲ್ಲಾಧ್ಯಕ್ಷ ಯೋಗೀಶ್‌ ಗೌಡ ಮಾತನಾಡಿ, ರಾಜ್ಯದಲ್ಲಿ ಆಡಳಿತ ನಡೆಸಿರುವ ಸರ್ಕಾರಗಳು ಕೇಂದ್ರದ ನೀತಿಗೆ ಶರಣಾಗಿವೆ. ಇದರಿಂದ ಕನ್ನಡ ಭಾಷೆಗೆ ಮತ್ತಷ್ಟು ಅಪಾಯ ಎದುರಾಗಲಿದೆ. ಕೇಂದ್ರ ಸರ್ಕಾರ ಹಿಂದಿ ಭಾಷೆ ಹೇರಿಕೆಯನ್ನು ಕೈ ಬಿಡಬೇಕು ಎಂದು ಆಗ್ರಹಿಸಿದರು.

Advertisement

ಪ್ರತಿಭಟನೆಯಲ್ಲಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆಯ ರಾಜ್ಯ ಉಪಾಧ್ಯಕ್ಷ ಬೆಂಕಿ ಶ್ರೀಧರ್‌, ರಂಜಿತ್‌ ಗೌಡ, ಮಂಡ್ಯ ಜಿಲ್ಲಾಧ್ಯಕ್ಷ ವಿ.ಸಿ.ಉಮಾಶಂಕರ್‌, ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಮಂಗಳಮ್ಮ, ಚಾಮರಾಜನಗರ ಜಿಲ್ಲಾಧ್ಯಕ್ಷ ಮಲ್ಲು, ರಾಯಚೂರು ಜಿಲ್ಲಾಧ್ಯಕ್ಷ ವೀರೇಶ್‌, ಕೋಲಾರ ಜಿಲ್ಲಾಧ್ಯಕ್ಷ ವೆಂಕಟೇಶ್‌, ಜಿಲ್ಲಾ ಉಪಾಧ್ಯಕ್ಷ ಭೂವಳ್ಳಿ ನಿಂಗೇಗೌಡ, ತಾಲೂಕು ಉಪಾಧ್ಯಕ್ಷರಾದ ಮಹೇಶ್‌, ಹನಿಯೂರು ಉಮಾಶಂಕರ್‌, ಚಕ್ಕೆರೆ ರಾಮೇಗೌಡ, ಚಿಕ್ಕೇನಹಳ್ಳಿ ಸಿದ್ದಪ್ಪಾಜಿ, ರಾಮಚಂದ್ರ, ಸುರೇಶ್‌ ಬಾಬು, ಅಜಯ್, ಪ್ರಿಯಕೃಷ್ಣ, ಮಂಗಳವಾರಪೇಟೆ ನಾಗೇಶ್‌, ಪುಟ್ಟಹೊನ್ನಪ್ಪ, ಕನ್ನಡಪರ ಹೋರಾಟಗಾರ ಬಾಬುಜಾನ್‌, ಮಹಿಳಾ ಹೋರಾಟಗಾರ್ತಿ ಅಂಚಿಪುರ ಜಯಲಕ್ಷ¾ಮ್ಮ, ನಾಗರತ್ನ , ಬೇವೂರು ಮಂಡ್ಯ ಕಲಾವತಿ, ತಸ್ಮಿಯಬಾನು, ರಾಜಮ್ಮ, ಮಂಗಳಮ್ಮ ಹಾಗೂ ವೇದಿಕೆಯ ಎಲ್ಲ ಪದಾಧಿಕಾರಿಗಳು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next