ಕಲಬುರಗಿ: ಕೋಮುವಾದ ಹಿಮ್ಮೆಟ್ಟಿಸಲು ಹಾಗೂ ಮಹಾಪುರುಷರ ಪ್ರತಿಮೆ ಭಗ್ನಗೊಳಿಸಿರುವ ಕ್ರಮ ಖಂಡಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಜಗತ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿತು.
ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿ, ತ್ರಿಪುರಾದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಲೆನಿನ್, ಪೆರಿಯಾರ್ ರಾಮಸ್ವಾಮಿ ಸೇರಿದಂತೆ ಅನೇಕ ಮಹಾನ್ ಪುರುಷರ ಪ್ರತಿಮೆಗಳನ್ನು ಭಗ್ನಗೊಳಿಸಿದ್ದು ಅಕ್ಷಮ್ಯ ಅಪರಾಧವಾಗಿದೆ ಎಂದು ಆರೋಪಿಸಿದರು.
ದೇಶದಲ್ಲಿ ಕೋಮುವಾದ ಹಿಮ್ಮೆಟ್ಟಿಸಿ ಒಂದು ಸುಂದರ ಸಮಾಜವನ್ನು ನಿರ್ಮಿಸಲು ಅನೇಕ ಪ್ರಗತಿಪರರು, ಕೋಮುವಾದ ವಿರೋಧಿಗಳು ಸೇರಿದಂತೆ ಸಾರ್ವಜನಿಕರು ಒಂದುಗೂಡಬೇಕೆಂದು ಆಗ್ರಹಿಸಿದರು.
ಪ್ರತಿಭಟನಾ ರ್ಯಾಲಿಯಲ್ಲಿ ರಾಜ್ಯ ಸಂಚಾಲಕ ಡಾ.ಮಲ್ಲೇಶಿ ಸಜ್ಜನ, ರಾಜ್ಯ ಸಂಘಟನಾ ಸಂಚಾಲಕ ಅರ್ಜುನ ಭದ್ರೆ,
ಜಿಲ್ಲಾ ಸಂಚಾಲಕ ಮಲ್ಲಿಕಾರ್ಜುನ ಖನ್ನಾ, ನಗರ ಸಂಚಾಲಕ ಶಿವಕುಮಾರ ಕೊರಳ್ಳಿ ಹಾಗೂ ಇತರರಿದ್ದರು.