Advertisement

Mangaluru: ವಾಣಿಜ್ಯ ವಾಹನಗಳಿಗೆ ಪ್ಯಾನಿಕ್ ಬಟನ್, GPS ಅಳವಡಿಕೆ ವಿರೋಧಿಸಿ ಪ್ರತಿಭಟನೆ

01:02 PM Jul 23, 2024 | Team Udayavani |

ಮಂಗಳೂರು: ಕೇಂದ್ರ ಸಾರಿಗೆ ಇಲಾಖೆಯ ಆದೇಶದಂತೆ ರಾಜ್ಯ ಸಾರಿಗೆ ಇಲಾಖೆಯು ವಾಣಿಜ್ಯ ವಾಹನಗಳಿಗೆ ಪ್ಯಾನಿಕ್ ಬಟನ್ ಮತ್ತು ಜಿಪಿಎಸ್ ಅಳವಡಿಕೆಗೆ
ಆಗ್ರಹಿಸುತ್ತಿರುವುದು ಅವೈಜ್ಞಾನಿಕ ಎಂದು ವಿರೋಧಿಸಿ ಮಂಗಳವಾರ ಮಂಗಳೂರಿನ ಮಿನಿ ವಿಧಾನಸೌಧ ಮುಂಭಾಗ ದ.ಕ. ಜಿಲ್ಲಾ ಟ್ಯಾಕ್ಸಿಮೆನ್ಸ್ ಮತ್ತು ಮ್ಯಾಕ್ಸಿ ಕ್ಯಾಬ್ ಸಂಘದ ವತಿಯಿಂದ ಪ್ರತಿಭಟನೆ ನಡೆಯಿತು.

Advertisement

ಜಿಲ್ಲಾ ಟ್ಯಾಕ್ಸಿಮೆನ್ಸ್ ಮತ್ತು ಮ್ಯಾಕ್ಸಿ ಕ್ಯಾಬ್ ಸಂಘದ ಅಧ್ಯಕ್ಷ ಆನಂದ ಕೆ. ಮಾತನಾಡಿ, ಈ ಸಾಧನಗಳ ಅಳವಡಿಕೆಯ ಆದೇಶ ಗೊಂದಲಮಯವಾಗಿದೆ. ಇದು ಟ್ಯಾಕ್ಸಿ ಮತ್ತು ಮ್ಯಾಕ್ಸಿಕ್ಯಾಬ್ ಚಾಲಕ ಮಾಲಕರ ಉದ್ಯೋಗದ ಮೇಲೆ ಹೆಚ್ಚುವರಿ ಹೊರೆಯಾಗಿದೆ. ರಾಜ್ಯ ಸರಕಾರ ಈ ಸಾಧನ ಅಳವಡಿಸಲು 7,590 ರೂ. ಗಳನ್ನುನಿಗದಿಪಡಿಸಿದ್ದರೂ ರಾಜ್ಯದ ಎಲ್ಲ ಸಾರಿಗೆ ಕಚೇರಿಗಳಲ್ಲಿ 13,000 ರೂ.ನಿಂದ 15,000 ರೂ.ವರೆಗೆ ಪಡೆಯಲಾಗುತ್ತಿದೆ. ಇದು ವಾಹನ ಚಾಲಕ ಮಾಲಕರಿಗೆ ಮಾಡುತ್ತಿರುವ ಅನ್ಯಾಯ ಎಂದರು.

ಸ್ಥಳಕ್ಕೆ ಆಗಮಿಸಿ ಮನವಿ ಸ್ವೀಕರಿಸಿದ ಮಂಗಳೂರು ಆರ್ಟಿಒ ಶ್ರೀಧರ್‌ ಮಲ್ಲಾಡ್‌ ಮಾತನಾಡಿ, ಚಾಲಕರ ಮನವಿಯನ್ನು ಮೇಲಾಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದರು.

ಸಂಘದ ಗೌರವಾಧ್ಯಕ್ಷ ದಿನೇಶ್ ಕುಂಪಲ, ಕಮಲಾಕ್ಷ, ಶರತ್, ಮನೋಜ್, ಬೋಜಣ್ಣ, ಶುಭಕರ ಶೆಟ್ಟಿ, ಉದಯ್ ಕುಮಾರ್, ಲೋಕೇಶ್ ಗೌಡ ಸಹಿತ ನೂರಾರು ಸಂಖ್ಯೆಯ ಚಾಲಕರು ಇದ್ದರು.

Advertisement

ಇದನ್ನೂ ಓದಿ: Budget 2024: 30 ಲಕ್ಷ ಯುವಕರಿಗೆ 1 ತಿಂಗಳ ಪಿಎಫ್‌ , ಸೂರ್ಯ ಘರ್‌ ಉಚಿತ ವಿದ್ಯುತ್‌ ಯೋಜನೆ

Advertisement

Udayavani is now on Telegram. Click here to join our channel and stay updated with the latest news.

Next