ಮಂಗಳೂರು: ಮಂಗಳೂರು ವಿಶ್ವ ವಿದ್ಯಾಲಯದ ವಿದ್ಯಾರ್ಥಿ ಪರಿಷತ್ ಕಾರ್ಯಕ್ರಮಕ್ಕೆ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಅವರನ್ನು ಅಥಿತಿಯಾಗಿ ಆಹ್ವಾನಿಸಿರುವುದನ್ನು ಖಂಡಿಸಿ ವಿವಿ ಮುಖ್ಯ ದ್ವಾರದ ಬಳಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯ ವಿದ್ಯಾರ್ಥಿಗಳು ಬುಧವಾರ ಪ್ರತಿಭಟನೆ ನಡೆಸಿದ್ದಾರೆ.
ಪ್ರತಿಭಟನೆಯ ಹಿನ್ನಲೆಯಲ್ಲಿ ಪೋಲೀಸ್ ಭದ್ರತೆ ಹಾಕಿದ್ದು, ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ವಿವಿ ಪ್ರವೇಶ ದ್ವಾರದಲ್ಲೇ ತಡೆದು ನಿಲ್ಲಿಸಿದ್ದಾರೆ.
ಇದನ್ನೂ ಓದಿ:ಊಟಕ್ಕೆ ಕರೆಸಿಕೊಂಡು ಯುವತಿ ಮೇಲೆ ಗ್ಯಾಂಗ್ ರೇಪ್ : ರಾಷ್ಟ್ರಮಟ್ಟದ ನಾಲ್ವರು ಈಜು ಪಟುಗಳ ಬಂಧನ
ಕೋಮು ದ್ವೇಷದ ಭಾಷಣ ಮಾಡುವ ಆರ್ ಎಸ್ ಎಸ್ ಮುಖಂಡ ಪ್ರಭಾಕರ್ ಭಟ್ ಅವರನ್ನು ಯಾವುದೇ ಕಾರಣಕ್ಕೂ ಕಾರ್ಯಕ್ರಮದಲ್ಲಿ ಭಾಗಿಯಾಗಲು ಅವಕಾಶ ಕೊಡಬಾರದು. ವಿದ್ಯೆ ನೀಡಬೇಕಾದ ಕೇಂದ್ರದಲ್ಲಿ ಕೋಮು ಸಾಮರಸ್ಯ ಕದಡುವ ಕಾರ್ಯ ಮಾಡುತ್ತಿದ್ದಾರೆ ಎಂದು ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದ್ದಾರೆ.
ವಿದ್ಯಾರ್ಥಿ ಪರಿಷತ್ ಉದ್ಘಾಟನೆ
ಪ್ರತಿಭಟನೆಯ ನಡುವೆಯೂ ಮಂಗಳೂರು ವಿವಿಯ ಕ್ರೀಡಾಂಣದಲ್ಲಿ ಏರ್ಪಡಿಸಲಾದ ವಿದ್ಯಾರ್ಥಿ ಪರಿಷತ್ ಉದ್ಘಾಟನೆ ನಿರಾಂತಕವಾಗಿ ನಡೆಯಿತು.
ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರ ನೆಲೆಯಲ್ಲಿ ಕಲ್ಕಡ್ಕ ಭಟ್ ಭಾಗವಹಿಸಿ ವಿವಿ ವಿದ್ಯಾರ್ಥಿ ಪರಿಷತ್ ಉದ್ಘಾಟನೆ ನಡೆಸಿದರು. ಮಂಗಳೂರು ವಿವಿ ಕುಲಪತಿ ಪ್ರೊ.ಸುಬ್ರಹ್ಮಣ್ಯ ಯಡಪಡಿತ್ತಾಯ ಸೇರಿದಂತೆ ಗಣ್ಯ ಅತಿಥಿಗಳು ಭಾಗವಹಿಸಿದರು.