Advertisement

ಪ್ರಚೋದನಕಾರಿ ಭಾಷಣ: ಕಲ್ಲಡ್ಕ ಪ್ರಭಾಕರ ಭಟ್ ಬಂಧಿಸಲು ಆಗ್ರಹಿಸಿ ಎಸ್ ಡಿಪಿಐ ಪ್ರತಿಭಟನೆ

04:52 PM Nov 19, 2020 | sudhir |

ಉಳ್ಳಾಲ: ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಬೇಕೆಂದು ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಉಳ್ಳಾಲ ಪೋಲಿಸ್ ಠಾಣೆಗೆ ಮುತ್ತಿಗೆ ಹಾಕಲು ಉದ್ದೇಶಿಸಿತ್ತು.

Advertisement

ಈಗಾಗಲೇ ಪ್ರಭಾಕರ್ ಭಟ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದ ಎಸ್ ಡಿಪಿಐ ಆದರೆ ಪೊಲೀಸರು ಕ್ರಮ ತೆಗೆದುಕೊಂಡಿಲ್ಲ ಎಂದು ಆಗ್ರಹಿಸಿ ಮುತ್ತಿಗೆ ಹಾಕಲು ಗುರುವಾರ ಸಂಜೆ ಕರೆ ನೀಡಿತ್ತು.

ಎಸ್ ಡಿಪಿಐ ಪ್ರತಿಭಟನೆ ಹಿನ್ನಲೆಯಲ್ಲಿ ಅಹಿತಕರ ಘಟನೆಗಳು ನಡೆಯಂತೆ ಉಳ್ಳಾಲ ಠಾಣಾ ಎದುರು ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಈ ನಿಟ್ಟಿನಲ್ಲಿ ಪ್ರತಿಭಟನಾ ಸ್ಥಳವನ್ನು ಉಳ್ಳಾಲ ಠಾಣೆ ಎದುರುಗಡೆಯಿಂದ ಮಾಸ್ತಿಕಟ್ಟೆಗೆ ಶಿಫ್ಟ್ ಮಾಡಿ ಪ್ತತಿಭಟನೆ ನಡೆಸಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next