Advertisement

ಹೆಬ್ಬಾಳ್ಕರ್‌ ವಿರುದ್ಧ ಆಕ್ರೋಶ :ವಾಟಾಳ್‌ ಸೇರಿ ಹಲವರು ವಶಕ್ಕೆ 

01:44 PM Sep 02, 2017 | |

ಬೆಳಗಾವಿ: ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರು ನೀಡಿರುವ ಕನ್ನಡ ವಿರೋಧಿ ಹೇಳಿಕೆ ಖಂಡಿಸಿ ಕನ್ನಡ ಚಳುವಳಿ ವಾಟಾಳ್‌ ನಾಗರಾಜ್‌ ನೇತೃತ್ವದಲ್ಲಿ ಶನಿವಾರ ಬೆಳಗಾವಿಯಲ್ಲಿ ಬೃಹತ್‌ ಪ್ರತಿಭಟನೆ ನಡೆಸಲಾಯಿತು. 

Advertisement

ಪ್ರತಿಭಟನೆಯಲ್ಲಿ ಸಾ.ರಾ.ಗೋವಿಂದ್‌ ಸೇರಿದಂತೆ ಕನ್ನಡ ಸಂಘಟನೆಗಳ ನೂರಾರು ಮಂದಿ ಭಾಗಿಯಾಗಿದ್ದರು. ಪೊಲೀಸರು ಪ್ರತಿಭಟನಾ ನಿರತರನ್ನು ವಶಕ್ಕೆ ಪಡೆದರು.

ನಾಡದ್ರೋಹಿ ಕೃತ್ಯ ಎಸಗಿರುವ ಲಕ್ಷ್ಮೀ ಹೆಬ್ಬಾಳ್ಕರ್‌ ಅವರ ಹೆಸರನ್ನು ಮತ ಪಟ್ಟಿಯಿಂದ ತೆಗೆದು ಹಾಕಬೇಕು ಎಂದು ಒತ್ತಾಯಿಸಿದರು.ಲಕ್ಷ್ಮೀ ಹೆಬ್ಬಾಳ್ಕರ್‌ ವಿರುದ್ಧ ಕ್ರಮ ಕೈಗೊಳ್ಳದೆ ಹೋದರೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು. 

Advertisement

Udayavani is now on Telegram. Click here to join our channel and stay updated with the latest news.

Next