Advertisement

ಭೂ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆ

04:15 PM Sep 19, 2020 | Suhan S |

ಕೆ.ಆರ್‌.ನಗರ: ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ತಂದಿರುವುದನ್ನು ಖಂಡಿಸಿ ರೈತರು, ದಲಿತ ಸಂಘಟನೆ ಹಾಗೂ ಕಾರ್ಮಿಕ ಸಂಘಟನೆಗಳ ಮುಖಂಡರು ಪ್ರತಿಭಟನೆ ನಡೆಸಿದರು.

Advertisement

ತಾಪಂ ಕಚೇರಿ ಮುಂದೆ ಕೆಲ ಕಾಲ ಪ್ರತಿಭಟನೆ ನಡೆಸಿದ ಅವರು, ಕರ್ನಾಟಕ ಭೂಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ,ಕಾರ್ಮಿಕರ ಹಕ್ಕುಗಳನ್ನು ದಮನ ಮಾಡುವ ಕೈಗಾರಿಕಾ ವ್ಯಾಜ್ಯಗಳು ಮತ್ತು ಇತರೆ ಕಾಯ್ದೆಗಳ ತಿದ್ದುಪಡಿಗೆ ರಾಜ್ಯ ಸರಕಾರ ಹೊರಟಿದೆ. ಈ ಮೂರು ಸುಗ್ರೀವಾಜ್ಞೆಗಳು ರಾಜ್ಯದ ರೈತಾಪಿ ಹಾಗೂ ಕಾರ್ಮಿಕ, ಜನಸಮೂಹಗಳ ಮೇಲೆ ದುಷ್ಪರಿಣಾಮ ಬೀರಲಿವೆ ಎಂದು ಕಿಡಿಕಾರಿದರು.

ಸಾರ್ವಭೌಮತ್ವ, ಸ್ವಾತಂತ್ರ್ಯ, ಸಮಾನತೆ, ಒಕ್ಕೂಟ ವ್ಯವಸ್ಥೆ, ಸಾಮಾಜಿಕ ನ್ಯಾಯ, ಪ್ರಜಾಪ್ರಭುತ್ವ, ಸಾಂವಿಧಾನಿಕ ಮೂಲಭೂತ ಆಶಯ ಮತ್ತು ತತ್ವಗಳಿಗೆ ವಿರುದ್ಧ ವಾಗಿರುವ ಈ ಕಾಯ್ದೆಗಳು ಆರ್ಥಿಕ ಅಸಮತೋಲನಕ್ಕೆ ಕಾರಣವಾಗಲಿವೆ. ಹೀಗಾಗಿ ಇವುಗಳನ್ನು ಹಿಂದಕ್ಕೆ ಪಡೆಯಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ರೈತ ಸಂಘದ ಅಧ್ಯಕ್ಷ ಎಂ.ಜೆ. ಮಲ್ಲೇಶ್‌, ತಾಲೂಕು ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಸಿ.ಕೆ.ರವೀಂದ್ರ, ಅಖೀಲ ಕರ್ನಾಟಕ ಕಬ್ಬು ಬೆಳೆಗಾರರ ಸಂಘದ ರಾಜ್ಯ ಪ್ರಧಾನಕಾರ್ಯದರ್ಶಿ ಸುನಯ್‌ಗೌಡ, ರೈತಸಂಘದ ತಾಲೂಕು ಪ್ರಧಾನ ಕಾರ್ಯದರ್ಶಿ ಕುಚೇಲ, ಲೋಕೇಶ್‌, ನಟರಾಜ್‌, ತಾಲೂಕು ದಲಿತ ಸಂಘರ್ಷ ಸಮಿತಿ ಅಧ್ಯಕ್ಷ ಮೂರ್ತಿ, ಜಿಲ್ಲಾ ಸಂಘಟನಾ ಸಂಚಾಲಕ ಚಂದ್ರು, ಅ.ರ.ದ.ಸೇವಾ ದಳದ ಅಧ್ಯಕ್ಷ ಸಿಂಹಶಿವುಗೌಡ ಭಾರತೀಯ, ಕಾಳೇಗೌಡ, ಮಂಜುನಾಥ್‌, ಶಿವಣ್ಣ, ಜೇಂದ್ರ, ಬಿ.ಕೆ.ನಾಗರಾಜು, ಕುಮಾರ್‌, ರಾಮೇಗೌಡ ಇತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next