Advertisement

Protest: ಲೋಡ್‌ ಶೆಡ್ಡಿಂಗ್‌ ಖಂಡಿಸಿ ಧರಣಿ

03:54 PM Oct 26, 2023 | Team Udayavani |

ಮಂಡ್ಯ: ಅನಧಿಕೃತ ಲೋಡ್‌ ಶೆಡ್ಡಿಂಗ್‌ ಜಾರಿಗೊಳಿಸಿ ಕೃಷಿ ಪಂಪ್‌ ಸೆಟ್‌ ಗಳಿಗೆ ಸಮರ್ಪಕ ವಿದ್ಯುತ್‌ ಪೂರೈಸದ ರಾಜ್ಯ ಸರ್ಕಾರದ ವಿರುದ್ಧ ರೈತರು ಪ್ರತಿಭಟನೆ ನಡೆಸಿದರು. ನಗರದ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮದ ಕಾರ್ಯನಿರ್ವಾಹಕ ಎಂಜಿನಿಯರ್‌ ಕಚೇರಿ ಮುಂಭಾಗ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ರೈತರು ಪ್ರತಿಭಟನಾ ಧರಣಿ ನಡೆಸಿದರು.

Advertisement

ಮಳೆ ಕೊರತೆ ಹಾಗೂ ಬರ ಪರಿಸ್ಥಿತಿಯಿಂದ ಈಗಾಗಲೇ ರೈತರ ಬದುಕು ಸಂಕಷ್ಟ ದಲ್ಲಿದ್ದು, ಸರ್ಕಾರ ಅನಿಯಮಿತ ವಾಗಿ ವಿದ್ಯುತ್‌ ಕಡಿತ ಮಾಡುತ್ತಿರುವುದರಿಂದ ಬೆಳೆದು ನಿಂತಿರುವ ಬೆಳೆಗಳಿಗೆ ನೀರು ಪೂರೈಸಲು ಸಾಧ್ಯವಾಗುತ್ತಿಲ್ಲ. ರಾತ್ರಿ ವೇಳೆ ಕಾಡು ಪ್ರಾಣಿಗಳ ಹಾವಳಿ ಹೆಚ್ಚಾಗಿದ್ದು, ರೈತರು ಜಮೀನಿನತ್ತ ಹೋಗಲು ಹೆದರುವ ಪರಿಸ್ಥಿತಿ ನಿರ್ಮಾಣ ವಾಗಿದೆ. ಇದರಿಂದ ಕಬ್ಬು ಮತ್ತು ಭತ್ತದ ಬೆಳೆ ಒಣಗುತ್ತಿವೆ ಎಂದು ಹೇಳಿದರು.

ಪ್ರತಿನಿತ್ಯ ಏಳು ತಾಸು ತ್ರೀ ಫೇಸ್‌ ವಿದ್ಯುತ್‌ ಪೂರೈಕೆ ಮಾಡಲಾಗುತ್ತಿತ್ತು. ಆದರೆ ಕಾಂಗ್ರೆಸ್‌ ಸರ್ಕಾರ ಐದು ತಾಸಿಗೆ ಉಳಿಕೆ ಮಾಡಿದೆ. ಹಗಲು ಸರಬರಾಜು ಮಾಡುತ್ತಿದ್ದ ವಿದ್ಯುತ್‌ ಅನ್ನು ರಾತ್ರಿ ಪಾಳಿಗೆ ವರ್ಗಾಯಿಸಿದೆ. ಇದರಿಂದ ರೈತರಿಗೆ ಮತ್ತಷ್ಟು ತೊಂದರೆಯಾಗಿದೆ. ಪ್ರತಿನಿತ್ಯ ಎರಡು ತಾಸು ಕೂಡ ವಿದ್ಯುತ್‌ ನೀಡುತ್ತಿಲ್ಲ ಎಂದು ಹೇಳಿದರು. ಕೃಷಿ ಪಂಪ್‌ ಸೆಟ್‌ ಗಳಿಗೆ ಪ್ರತಿನಿತ್ಯ ಹತ್ತು ತಾಸು ತ್ರೀ ಫೇಸ್‌ ವಿದ್ಯುತ್‌ ಪೂರೈಕೆ ಮಾಡಬೇಕು, ಹಗಲು ಹೊತ್ತು ಹೆಚ್ಚಿನ ತಾಸು ವಿದ್ಯುತ್‌ ಸರಬರಾಜು ಮಾಡಬೇಕು ಎಂದು ಒತ್ತಾಯಿಸಿದರು.

ರೈತ ಸಂಘದ ಶಿವಳ್ಳಿ ಚಂದ್ರು, ಜವರೇಗೌಡ, ಚಿಕ್ಕ ಮಂಡ್ಯ ನಾಗರಾಜು. ರಾಮಲಿಂಗೈಗೌಡ, ಸಣ್ಣಪ್ಪ, ಕರುನಾಡ ಸೇವಕರು ಸಂಘಟನೆಯ ಎಂ.ಬಿ. ನಾಗಣ್ಣಗೌಡ, ರಾಮಚಂದ್ರ ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next