Advertisement

ಕಾಪು: ಮೋದಿ ಸರಕಾರದ ಬೆಲೆಯೇರಿಕೆ ನೀತಿ ಖಂಡಿಸಿ ಪ್ರತಿಭಟನೆ, ಮನವಿ ಸಲ್ಲಿಕೆ

12:02 PM Jul 09, 2020 | keerthan |

ಕಾಪು: ಕೇಂದ್ರ ಸರಕಾರದ ನಿರಂತರ ಬೆಲೆಯೇರಿಕೆ ನೀತಿಯನ್ನು ಖಂಡಿಸಿ ಕಾಪು ಬ್ಲಾಕ್ ಕಾಂಗ್ರೆಸ್‌ ವತಿಯಿಂದ ಗುರುವಾರ ಕಾಪುವಿನಲ್ಲಿ ಸಾಂಕೇತಿಕ ಪ್ರತಿಭಟನೆ ನಡೆಯಿತು.

Advertisement

ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಮಾತನಾಡಿ, ಕೇಂದ್ರದ ಮೋದಿ ಸರಕಾರ ಜನರನ್ನು ಬೀದಿಗೆ ತಂದು ನಿಲ್ಲಿಸಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ಮಾರುಕಟ್ಟೆ ದರ ಕುಸಿದಿದ್ದರೂ ದೇಶದಲ್ಲಿ ಪೆಟ್ರೋಲ್ – ಡೀಸೆಲ್ ದರ ದಿನದಿಂದ ದಿನಕ್ಕೆ ಏರುತ್ತಲೇ ಹೋಗುತ್ತಿದೆ. ಇದರ ವಿರುದ್ಧ ಜನರಲ್ಲಿ ಜನಜಾಗೃತಿ ಮೂಡಿಸಿ, ತಹಶೀಲ್ದಾರ್ ಅವರ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಗುತ್ತಿದೆ ಎಂದರು.

ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕೆಪಿಸಿಸಿ ಕಾರ್ಯದರ್ಶಿ ಎಂ.ಎ. ಗಫೂರ್, ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನ್ ಚಂದ್ರ ಸುವರ್ಣ, ಪಕ್ಷದ ಮುಖಂಡರಾದ ನವೀನ್ ಚಂದ್ರ ಜೆ. ಶೆಟ್ಟಿ, ವೈ.‌ ಸುಕುಮಾರ್, ಹರೀಶ್ ಶೆಟ್ಟಿ ಪಾಂಗಾಳ, ಸರಸು ಡಿ. ಬಂಗೇರ, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ವಿಶ್ವಾಸ್ ಅಮೀನ್, ಪ್ರವೀಣ್ ಶೆಟ್ಟಿ ಕೊರಂಗ್ರಪಾಡಿ, ಮಹಮ್ಮದ್ ಸಾಧಿಕ್, ತಾ.ಪಂ. ಸದಸ್ಯರು, ಪುರಸಭೆ ಸದಸ್ಯರು, ಗ್ರಾ.ಪಂ. ಸದಸ್ಯರು ಹಾಗೂ ಪಕ್ಷದ ಬ್ಲಾಕ್, ಬೂತ್ ಮಟ್ಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next