ಮುಂಡರಗಿ: ಪುರಸಭೆ ಆಡಳಿತದ ವಿಫಲತೆಯನ್ನು ಖಂಡಿಸಿ ವಿರೋಧ ಪಕ್ಷದ ಕಾಂಗ್ರೆಸ್ ಸದಸ್ಯರು ಪುರಸಭೆ ಎದುರು ಆಹೋರಾತ್ರಿ ಧರಣಿ ಸತ್ಯಾಗ್ರಹವನ್ನು ಆರಂಭಿಸಿದ್ದಾರೆ.
ಪುರಸಭೆಯಲ್ಲಿ 7 ತಿಂಗಳು ಗತಿಸಿದರೂ ಇದುವರೆಗೂ ಸಾಮಾನ್ಯ ಸಭೆ ನಡೆದಿಲ್ಲ. ನಿವೇಶನರಹಿತರಿಗೆ ನಿವೇಶನ ನೀಡದೇ ಇರುವುದು, ಪುರಸಭೆ ಅಧ್ಯಕ್ಷೆ ಕವಿತಾ ಉಳ್ಳಾಗಡ್ಡಿಯವರ ಪತಿ ಆಡಳಿತದಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ. ಸಾರ್ವಜನಿಕರ ಕೆಲಸಕ್ಕೆ ವಿಳಂಬವಾಗುತ್ತಿದೆ ಎನ್ನುವುದು ಪ್ರತಿಭಟನಾಕಾರರ ಆರೋಪ.
ಕಳೆದ ಹದಿನೈದು ದಿನಗಳ ಹಿಂದೆ ಈ ಎಲ್ಲಾ ಇಟ್ಟುಕೊಂಡು ಸದಸ್ಯರು ಧರಣಿ ಸತ್ಯಾಗ್ರಹ ನಡೆಸಿದಾಗ ಸಮಸ್ಯೆಗಳನ್ನು ಬಗೆಹರಿಸಲು ತಹಶೀಲ್ದಾರ 15 ದಿನಗಳ ಸಮಯ ಪಡೆದುಕೊಂಡು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿತ್ತು. ಆದರೆ ಬೇಡಿಕೆ ಈಡೇರದೆ ಇರುವ ಕಾರಣಕ್ಕೆ ಮತ್ತೆ ಪ್ರತಿಭಟನೆಯನ್ನು ನಡೆಸಲಾಗುತ್ತಿದೆ.
ಪ್ರತಿಭಟನಾ ಸ್ಥಳಕ್ಕೆ ತಹಶೀಲ್ದಾರ ಆಶಪ್ಪ ಪೂಜಾರ ಭೇಟಿ ನೀಡಿದ್ದಾರೆ. ಜಿಲ್ಲಾಧಿಕಾರಿ ಬರುವರೆಗೆ ಪ್ರತಿಭಟನೆ ನಿಲ್ಲಿಸುವುದಿಲ್ಲ ಎಂದು ಪ್ರತಿಭಟನಾನಿರತ ಪುರಸಭೆ ಸದಸ್ಯರ ಪಟ್ಟು ಹಿಡಿದಿದ್ದಾರೆ.