Advertisement

ನೂಪುರ್ ಹೇಳಿಕೆ ವಿರೋಧಿಸಿ ಪ್ರತಿಭಟನೆ: ರಾಜ್ಯದೆಲ್ಲೆಡೆ ಖಾಕಿ ಕಣ್ಗಾವಲು

10:26 AM Jun 11, 2022 | Team Udayavani |

ಬೆಂಗಳೂರು: ಪ್ರವಾದಿ ವಿರುದ್ಧ ಹೇಳಿಕೆ ನೀಡಿರುವ ನೂಪುರ್ ಶರ್ಮಾ ಬಂಧನಕ್ಕೆ ಆಗ್ರಹಿಸಿ ಮುಸ್ಲಿಂ‌‌ ಸಂಘಟನೆಗಳು‌ ಅಲ್ಲಲ್ಲಿ ಪ್ರತಿಭಟನೆಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಖಾಕಿ ಕಣ್ಗಾವಲು ಹೆಚ್ಚಿಸಲಾಗಿದೆ.

Advertisement

ದೇಶದ ಎಲ್ಲ ರಾಜ್ಯಗಳಲ್ಲೂ ಹಿಂಸಾತ್ಮಕ ಪ್ರತಿಭಟನೆ ನಡೆಯಬಹುದು ಎಂದು ಕೇಂದ್ರ ಗೃಹ ಇಲಾಖೆ ಎಚ್ಚರಿಕೆ ನೀಡಿರುವ ಹಿನ್ನೆಲೆಯಲ್ಲಿ ಸಿಎಂ‌ ಬಸವರಾಜ್ ಬೊಮ್ಮಾಯಿ‌ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಣಯ ತೆಗೆದುಕೊಳ್ಳಲಾಗಿದೆ. ಗೃಹ ಸಚಿವ ಜ್ಞಾನೇಂದ್ರ, ಗೃಹ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯೆಲ್, ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್, ಬೆಂಗಳೂರು ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಸೇರಿದಂತೆ ಹಿರಿಯ ಅಧಿಕಾರಿಗಳು ಈ ಸಭೆಯಲ್ಲಿ ಭಾಗಿಯಾಗಿದ್ದರು.

ಇದನ್ನೂ ಓದಿ:ಪರಿಷತ್ ನ ನಾಲ್ಕು ಕ್ಷೇತ್ರಗಳಲ್ಲೂ ನಮ್ಮವರಿಗೆ ಗೆಲುವು: ಸಿಎಂ ಬೊಮ್ಮಾಯಿ ವಿಶ್ವಾಸ

ವಿಶೇಷವಾಗಿ ಬೆಂಗಳೂರು ನಗರದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗಬಹುದು ಎಂದು ಬಿಗಿ ಕ್ರಮ ಕೈಗೊಳ್ಳಲಾಗಿದೆ. ಈ ಬಗ್ಗೆ ಎಸ್ ಡಿಪಿಐ ನೀಡಿದ್ದ ಪ್ರತಿಭಟನೆಯನ್ನು ಸೋಮವಾರಕ್ಕೆ ಮುಂದೂಡಲಾಗಿದೆ. ಇಂದು ಕರೆ ನೀಡಿದ್ದ ಪ್ರತಿಭಟನೆಗೆ ಅನುಮತಿ ಪೊಲೀಸರು ನಿರಾಕರಿಸಿದ್ದಾರೆ. ರಾಜ್ಯದ ಉಳಿದ ಜಿಲ್ಲೆಗಳಲ್ಲೂ ಭದ್ರತೆಗೆ ಧಕ್ಕೆ ಇರುವ ಕಡೆ ಪ್ರತಿಭಟನೆಗೆ ಅನುಮತಿ ಕೊಡದೇ ಇರುವ ಬಗ್ಗೆ ಪೊಲೀಸರು ಚಿಂತನೆ ನಡೆಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next