ಹುಮಾನಾಬಾದ್: ಜ್ಞಾನವಾಪಿ ವಿಷಯದ ಕುರಿತು ಸುದ್ದಿವಾಹಿನಿಯ ಚರ್ಚೆಯಲ್ಲಿ ನೂಪುರ್ ಶರ್ಮಾ ಅವರು ಪ್ರವಾದಿ ಮೊಹಮ್ಮದ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವುದನ್ನು ಖಂಡಿಸಿ ಇಲ್ಲಿನ ಯುವಕರ ಗುಂಪೊಂದು ರಸ್ತೆಯಲ್ಲಿ ಪೋಸ್ಟರ್ ಗಳನ್ನು ಅಂಟಿಸಿ ವಿವಾದಿತ ಹೇಳಿಕೆ ನೀಡಿದವರನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ.
ಹುಮಾನಾಬಾದ್ ಪಟ್ಟಣದ ಮುಖ್ಯರಸ್ತೆಯಲ್ಲಿ ಯುವಕರ ಗುಂಪೊಂದು ನೂಪುರ್ ಶರ್ಮಾ ಮತ್ತು ನವೀನ್ ಜಿಂದಾಲ್ ಅವರ ಚಿತ್ರಗಳು ಹಾಕಿದ ಪೋಸ್ಟರ್ ನಲ್ಲಿ ಅವರನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ. ಅಲ್ಲದೆ, ಅವರನ್ನು ಅವಮಾನಿಸುವ ನಿಟ್ಟಿನಲ್ಲಿ ರಸ್ತೆಯಲ್ಲಿ ಪೋಸ್ಟರ್ ಗಳನ್ನು ಜನರು ತುಳಿದುಕೊಂಡು ನಡೆಯಬೇಕೆಂಬ ನಿಟ್ಟಿನಲ್ಲಿ ಅಂಟಿಸಲಾಗಿದೆ ಎಂಬುವುದು ತಿಳಿದುಬಂದಿದೆ.
ಇದನ್ನೂ ಓದಿ: ಚರಂಡಿ ವಿಚಾರಕ್ಕೆ ಜಗಳ: ಮನೆಗೆ ನುಗ್ಗಿದ ಗುಂಪಿನಿಂದ ಯುವಕನ ಕೊಲೆ
ಈ ಮಧ್ಯೆ ಕೆಲ ಹಿಂದೂ ಯುವಕರು ಕೂಡ ಅದನ್ನು ಪ್ರಶ್ನಿಸಿದ ಘಟನೆ ಕೂಡ ನಡೆದಿದೆ. ಘಟನೆಯ ಮಾಹಿತಿ ತಿಳಿದ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ನಿಯಂತ್ರಿಸುವ ಕೆಲಸ ಮಾಡಿದ್ದಾರೆ. ಅಲ್ಲದೆ ರಸ್ತೆಯಲ್ಲಿ ಅಂಟಿಸಿದ ಪೋಸ್ಟರ್ ಗಳನ್ನು ತೆರವುಗೊಳಿಸುವ ಕೆಲಸ ಕೊಡ ಮಾಡಿದ್ದಾರೆ.
Related Articles
ಡಿವೈಎಸ್ಪಿ ಸೋಮಲಿಂಗ ಕುಂಬಾರ, ಸಂಚಾರ ಪಿಎಸ್ಐ ಬಸವರಾಜ ಸ್ಥಳಕ್ಕೆ ಭೇಟಿನೀಡಿ ಮಾಹಿತಿ ಪಡೆದರು. ಯಾವುದೇ ಅಹಿತರ ಘಟನೆಗಳು ನಡೆಯದಂತೆ ಪಟ್ಟಣದಲ್ಲಿ ಸಂಚಾರ ನಡೆಸಿದ್ದಾರೆ. ಸದ್ಯ ಪಟ್ಟಣದಲ್ಲಿ ಬೂದಿ ಮುಚ್ಚಿದ ಕೆಂಡದಂತೆ ಪರಿಸ್ಥಿತಿ ಇದೆ.