Advertisement
ಹೋರಾಟ ಅನಿವಾರ್ಯ: ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ರಾಮಕೃಷ್ಣ ಮಾತನಾಡಿ, ಕೋವಿಡ್ 19 ಸಂಕಷ್ಟದಲ್ಲಿ ಜನರು ಜೀವನ ನಡೆಸುವುದೇ ಕಷ್ಟವಾಗಿರುವಾಗ ಸರ್ಕಾರ ನಿರಂತರವಾಗಿ ತೈಲ ಬೆಲೆ ಹೆಚ್ಚಳ ಮಾಡುವ ಮೂಲಕ ಜನ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ ಎಂದು ದೂರಿದ ಅವರು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜನರ ಕಷ್ಟಗಳಿಗೆ ಸ್ಪಂದಿಸದಿದ್ದರೆ ಬೀದಿಗಿಳಿದು ಹೋರಾಟ ಅನಿವಾರ್ಯ ಎಂದು ಎಚ್ಚರಿಸಿದರು.
Related Articles
Advertisement
ಮುಂದಿನ ಪೀಳಿಗೆಗೆ ಉಳಿಗಾಲವಿಲ್ಲ:ಜಿಪಂ ಸದಸ್ಯ ಕೆಂಚಮಾರಯ್ಯ ಮಾತನಾಡಿ, ನಿರಂ ತರವಾಗಿ ತೈಲಬೆಲೆ ಹೆಚ್ಚಳವಾದರೂ ಜನ ಸಾಮಾನ್ಯರಿಗೆ ಅದು ತಿಳಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ನಡೆಸುವ ಮೂಲಕ ಬಿಜೆಪಿ ಕಾರ್ಯಕರ್ತರು ಬಡವರಿಗೆ ಆಗುತ್ತಿರುವ ಅನ್ಯಾಯವನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ. ಇದನ್ನು ದಿಟ್ಟವಾಗಿ ಎದುರಿಸದಿದ್ದರೆ ಬಡವರಿಗೆ ಉಳಿಗಾಲವಿಲ್ಲ.
ಕೇಂದ್ರದ ಅನ್ಯಾಯ ಜನಸಾಮಾನ್ಯರಿಗೆ ತಿಳಿಯಬೇಕೆಂದರೆ, ಅದರ ವೈಫಲ್ಯಗಳನ್ನು ಜನರ ಮುಂದೆ ಬಿಚ್ಚಿಡಬೇಕು ಎಂದರು. ಪ್ರತಿಭಟನೆಯಲ್ಲಿ ಮಾಜಿ ಶಾಸಕ ಎಸ್.ಷಫಿ ಅಹಮದ್, ಮುಖಂಡರಾದ ಆರ್. ನಾರಾಯಣ್, ಡಿ.ಟಿ.ವೆಂಕಟೇಶ್, ನರಸೀ ಯಪ್ಪ, ಪಾಲಿಕೆ ಸದಸ್ಯರಾದ ನೈಯಾಜ್, ಮಹೇಶ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾರುದ್ರೇಶ್ ಮೊದಲಾದವರು ಪಾಲ್ಗೊಂಡಿದ್ದರು.
ಬೆಲೆ ಹೆಚ್ಚಳ ಸಮಂಜಸವಲ್ಲ: ನಗರ ಪಾಲಿಕೆ ಮೇಯರ್ ಫರೀದಾ ಬೇಗಂ ಮಾತನಾಡಿ, ದೇಶವೇ ಆರೋಗ್ಯ ತುರ್ತು ಪರಿಸ್ಥಿತಿಯಲ್ಲಿ ಇರುವಂತಹ ಸಂದರ್ಭದಲ್ಲಿ ನಿರಂತರವಾಗಿ ತೈಲ ಬೆಲೆಗಳ ಹೆಚ್ಚಳ ಸಮಂಜಸವಲ್ಲ. ಇದನ್ನು ಜನಸಾಮಾನ್ಯರಿಗೆ ತಿಳಿಸುವ ಮೂಲಕ ಅವರಿಗೆ ಆಗುತ್ತಿರುವ ಅನ್ಯಾಯವನ್ನು ಮನವರಿಕೆ ಮಾಡಿಕೊಡುವ ಮೂಲಕ ಅವರನ್ನು ಎಚ್ಚರಿಸುವ ಕೆಲಸ ಕಾಂಗ್ರೆಸ್ ಸೇರಿದಂತೆ ಎಲ್ಲಾ ವಿರೋಧ ಪಕ್ಷಗಳು ಮಾಡಬೇಕಿದೆ ಎಂದರು.