Advertisement

ತೈಲ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ

05:40 AM Jun 22, 2020 | Lakshmi GovindaRaj |

ಚಾಮರಾಜನಗರ: ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆ ಏರಿಕೆ ಖಂಡಿಸಿ ಜಿಲ್ಲಾ ಕಾಂಗ್ರೆಸ್‌ ಸಮಿತಿ ಕಾರ್ಯಕರ್ತರು ಮಾಜಿ ಸಂಸದ ಧ್ರುವನಾರಾಯಣ ನೇತೃತ್ವದಲ್ಲಿ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ಜಿಲ್ಲಾಡಳಿತ  ಭವನದ ಎದುರು ಸೇರಿದ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾಜಿ ಸಂಸದ ಧ್ರುವನಾರಾಯಣ ಮಾತನಾಡಿ, ಇಡೀ ವಿಶ್ವವೇ ಕೋವಿಡ್‌ನಿಂದ ನಲುಗಿ ಹೋಗಿದೆ.

Advertisement

ಭಾರತವೂ ಎರಡು ತಿಂಗಳ ಕಾಲ ಕಠಿಣ ಲಾಕ್‌ಡೌನ್‌ನಿಂದ ತತ್ತರಿಸಿದ್ದು,  ಆರ್ಥಿಕತೆ ತೀವ್ರ ಕುಸಿದಿದೆ. ಇಂತಹ ಸಂದರ್ಭದಲ್ಲಿ ದೇಶದಲ್ಲಿ ಹಲವು ಕಾರ್ಖಾನೆಗಳು ವಾಹನಗಳು ಓಡಾಡದೇ ಪೆಟ್ರೋಲ್‌, ಡೀಸೆಲ್‌ ಬಳಕೆ ಕಡಿಮೆಯಾಗಿದೆ. ಅಲ್ಲದೇ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕುಸಿದಿದ್ದರೂ ಬಿಜೆಪಿ ಸರ್ಕಾರ ಪೆಟ್ರೋಲ್‌ ದರವನ್ನು ಏರಿಸುತ್ತಲೇ ಇದೆ ಎಂದು ಆಪಾದಿಸಿದರು.

ಮುಖ್ಯಮಂತ್ರಿ ಯಡಿಯೂರಪ್ಪ ಬಡವರ ಭೂಮಿಗಾಗಿ ಹೋರಾಟ ಮಾಡಿರುವ ನಿದರ್ಶನಗಳಿವೆ. ಆದರೆ, ರೈತ ವಿರೋಧಿ ಕಾನೂನುಗಳನ್ನು ಜಾರಿ ಮಾಡಲು  ಹೊರಟಿದ್ದಾರೆ. ರೈತ ವಿರೋಧಿ ನಿಲುವು ತೆಗೆದುಕೊಂಡಿರುವುದು ಅಕ್ಷಮ್ಯ ಅಪರಾಧ. ಎಪಿಎಂಸಿ ಖಾಸಗೀಕರಣ ಮಾಡಬಾರದು ಎಂದರು.

ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಪಿ.ಮರಿಸ್ವಾಮಿ, ಜಿಪಂ ಅಧ್ಯಕ್ಷೆ ಅಶ್ವಿ‌ನಿ, ಶಾಸಕರಾದ ಪುಟ್ಟರಂಗಶೆಟ್ಟಿ, ನರೇಂದ್ರ, ಎಂಎಲ್‌ಸಿ ಧರ್ಮಸೇನ, ಮಾಜಿ ಶಾಸಕರಾದ ಜಯಣ್ಣ, ಬಾಲರಾಜ್‌, ಮಾಜಿ ಸಂಸದ ಶಿವಣ್ಣ, ಜಿಪಂ ಸದಸ್ಯರಾದ ಶಿವಮ್ಮ, ಸದಾಶಿವಮೂರ್ತಿ, ಕೆರೆಹಳ್ಳಿ ನವೀನ್‌, ಚಾಮುಲ್‌ ಅಧ್ಯಕ್ಷ ನಂಜುಂಡಪ್ರಸಾದ್‌, ಜಿಲ್ಲಾ ಉಪಾಧ್ಯಕ್ಷ  ರವಿಕುಮಾರ್‌, ಮಾಧ್ಯಮ ಕಾರ್ಯದರ್ಶಿ ಅರುಣ್‌ಕುಮಾರ್‌, ಪ್ರಧಾನ ಕಾರ್ಯದರ್ಶಿಗಳಾದ ಮಹದೇವು ಇತರರು ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next