ಬೆಂಗಳೂರು: ಕೇಂದ್ರ ಸರ್ಕಾರ ವಿದ್ಯುತ್ ವಿತರಣಾ ಕಂಪನಿಗಳನ್ನು ಖಾಸಗೀಕರಣ ಮಾಡಲು ಹೊರಟಿರುವುದನ್ನು ವಿರೋಧಿಸಿ ಸೋಮವಾರ ಕರ್ನಾಟಕ ವಿದ್ಯುತ್ ಸರಬರಾಜು ನಿಗಮ ನೌಕರರ ಸಂಘದ ಸದಸ್ಯರು ಕಾವೇರಿ ಭವನದೆದುರು ಪ್ರತಿಭಟನೆ ನಡೆಸಿದರು. ಅಲ್ಲದೆ ಕೇಂದ್ರ ಸರ್ಕಾರದ ಖಾಸಗೀಕರಣ ವಿರೋಧಿ ನೀತಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕ ವಿದ್ಯುತ್ ಸರಬರಾಜು ನಿಗಮ ನೌಕರರ ಸಂಘದ ಅಧ್ಯಕ್ಷ ಟಿ.ಆರ್.ರಾಮಕೃಷ್ಣಯ್ಯ, ಸಂವಿಧಾನಾತ್ಮಕವಾಗಿ ವಿದ್ಯುತ್ ವಿಷಯವು ರಾಜ್ಯಗಳ ವ್ಯಾಪ್ತಿಗೆ ಒಳ ಪಟ್ಟಿರುವುದರಿಂದ ಆಡಳಿತ ಮತ್ತು ಕಾರ್ಯತಂತ್ರದಲ್ಲಿ ಆಗಬೇಕಾದ ಉದ್ದೇಶಿತ ಬದಲಾವಣೆಗಳ ಬಗ್ಗೆ ಎರಡೂ ಸರ್ಕಾರಗಳು ಪರಸ್ಪರಒಮ್ಮತದ ನಿರ್ಧಾರಕ್ಕೆಬರಬೇಕು ಎಂದು ಒತ್ತಾಯಿಸಿದರು.
ಈಗಾಗಲೇ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ವಿದ್ಯುತ್ ವಿತರಣಾ ಕಂಪನಿಗಳನ್ನು ಖಾಸಗೀಕರಣಗೊಳಿಸಲು ತಯಾರಿ ನಡೆಸಿದ ಕೇಂದ್ರ ಸರ್ಕಾರದ ನಡೆ ಖಂಡನೀಯ. ಇದು ರಾಜ್ಯಕ್ಕೆ ಮಾರಕವಾಗಲಿದೆ ಎಂದರು.
ಒಡಿಶಾ, ನಾಗಪುರ, ಔರಂಗಾಬಾದ್, ಗಯಾ, ಭಾಗಲ್ಪುರ್, ಗ್ರೇಟರ್ ನೋಯ್ಡಾ, ಉಜ್ಜಯಿನಿ, ಗ್ವಾಲಿ ಯರ್ ಸೇರಿದಂತೆ ಇನ್ನಿತರ ಕಡೆಗಳಲ್ಲಿ ವಿದ್ಯುತ್ ವಿತರಣಾ ಕಂಪನಿಗಳನ್ನು ಖಾಸಗೀಕರಣಗೊಳಿ ಸಿರುವುದರಿಂದ ಅಲ್ಲಿನ ಪರಿಸ್ಥಿತಿ ಶೋಚನೀಯವಾಗಿದೆ. ಹೀಗಾಗಿ ರಾಜ್ಯ ಸರ್ಕಾರ ಈ ಬಗ್ಗೆ ಗಮನಹರಿಸಬೇಕು ಎಂದುಹೇಳಿದರು.
ಸಂಘಟನೆಯ ಪ್ರಧಾನ ಕಾರ್ಯದರ್ಶಿ ಟಿ.ಎಂ. ಶಿವಪ್ರಕಾಶ್, ಉಪಾಧ್ಯಕ್ಷ ರಾಜನಾಯಕ, ಎಸ್‌ಸಿ- ಎಸ್‌ಟಿ ನೌಕರರ ಸಂಘದ ದಾಸ ಪ್ರಕಾಶ್, ಕೇಂದ್ರ ಮತ್ತು ಸ್ಥಳೀಯ ಕೆಟಿಸಿಎಲ್ ನೌಕರರ ಸಂಘದ ಮಾಜಿ ಅಧ್ಯಕ್ಷ ಎ.ಆರ್. ಗೋವಿಂದಸ್ವಾಮಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.