Advertisement

ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ: ರಾಜ್ಯ ಕಾಂಗ್ರೆಸ್ ನಾಯಕರು ದೆಹಲಿಗೆ ಪ್ರಯಾಣ

10:40 AM Sep 03, 2022 | Team Udayavani |

ಬೆಂಗಳೂರು: ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ಪಕ್ಷ ನೀಡಿರುವ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸುವುದಕ್ಕಾಗಿ ರಾಜ್ಯದ ಕಾಂಗ್ರೆಸ್ ಶಾಸಕರು ಇಂದು ದಿಲ್ಲಿಗೆ ಪ್ರಯಾಣ ಬೆಳೆಸಲಿದ್ದಾರೆ.

Advertisement

ದಿಲ್ಲಿಯಲ್ಲಿ ನಾಳೆ ಬೆಲೆ ಏರಿಕೆ ವಿರುದ್ಧ ಬೃಹತ್ ಪ್ರತಿಭಟನೆ ಆಯೋಜನೆಯಾಗಿದ್ದು, ಎಲ್ಲ ರಾಜ್ಯಗಳ ಕಾಂಗ್ರೆಸ್ ಶಾಸಕರು, ಪರಾಜಿತ ಅಭ್ಯರ್ಥಿಗಳು ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರುಗಳಿಗೆ ಕಡ್ಡಾಯವಾಗಿ ಭಾಗವಹಿಸಲು ಸೂಚನೆ ನೀಡಲಾಗಿದೆ.

ಬೆಳಗ್ಗೆ 10 ಗಂಟೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್  ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಮಧ್ಯಾಹ್ನ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳನ್ನು ಭೇಟಿ ಮಾಡಲಿದ್ದು, ನಾಳೆ ರಾತ್ರಿ ದೆಹಲಿಯಲ್ಲೇ ವಾಸ್ತವ್ಯವಿರಲಿದ್ದಾರೆ.

ಇದನ್ನೂ ಓದಿ:ವಂಚಕ ಸುಕೇಶ್ ಚಂದ್ರಶೇಖರ್ ಕೇಸ್: ನಟಿ ನೋರಾ ಫತೇಹಿ ವಿಚಾರಣೆ ನಡೆಸಿದ ಪೊಲೀಸರು

Advertisement

Udayavani is now on Telegram. Click here to join our channel and stay updated with the latest news.

Next