Advertisement

ರಾಮಲಿಂಗಾರೆಡ್ಡಿಗೆ ಮಂತ್ರಿ ಸ್ಥಾನಕ್ಕೆ ಆಗ್ರಹಿಸಿ ಪ್ರತಿಭಟನೆ

07:29 AM Jun 05, 2019 | Lakshmi GovindaRaj |

ಬೆಂಗಳೂರು: ಕಾಂಗ್ರೆಸ್‌ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ಅವರಿಗೆ ಸಚಿವ ಸ್ಥಾನ ನೀಡುವಂತೆ ಕೆಪಿಸಿಸಿ ಕಚೇರಿ ಎದುರು ಬಿಬಿಎಂಪಿ ಮಾಜಿ ಮೇಯರ್‌ ಮಂಜುನಾಥ ರೆಡ್ಡಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ರಾಮಲಿಂಗಾ ರೆಡ್ಡಿ ಪರ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು ರಾಮಲಿಂಗಾ ರೆಡ್ಡಿಗೆ ಸಚಿವ ಸ್ಥಾನ ನೀಡಲೇಬೇಕೆಂದು ಆಗ್ರಹಿಸಿದರು.

Advertisement

ಪ್ರತಿಭಟನೆ ನಂತರ ಬಿಬಿಎಂಪಿ ಮಾಜಿ ಮೇಯರ್‌ ಮಂಜುನಾಥ ರೆಡ್ಡಿ ಮಾತನಾಡಿ, ಬಿಜೆಪಿ ಪರ ಕೆಲಸ ಮಾಡಿರುವ ಇಬ್ಬರು ಪಕ್ಷೇತರರಿಗೆ ಮಂತ್ರಿ ಸ್ಥಾನ ನೀಡಲಾಗುತ್ತಿದೆ. ಕಾಂಗ್ರೆಸ್‌ ಪಕ್ಷದಲ್ಲಿ ಹಿರಿಯರಿಗೆ ಬೆಲೆ ಇಲ್ಲ. ಬೆಂಗಳೂರಿನಲ್ಲಿ ಪಕ್ಷ ಸಂಘಟನೆಯಲ್ಲಿ ರಾಮಲಿಂಗಾ ರೆಡ್ಡಿ ಪಾತ್ರ ಹೆಚ್ಚಿದೆ.

ಬಿಬಿಎಂಪಿಯಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರಲು ರಾಮಲಿಂಗಾರೆಡ್ಡಿ ಅವರ ಕೊಡುಗೆ ದೊಡ್ಡದಿದೆ. ಪಕ್ಷ ಅವರನ್ನು ಗೌರವಯುತವಾಗಿ ನಡೆಸಿಕೊಳ್ಳಲಿ. ಅವರಿಗೆ ಸಚಿವ ಸ್ಥಾನ ನೀಡದಿದ್ದರೆ ಕಠಿಣ ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next