Advertisement

ಶಾಶ್ವತವಾಗಿ ಕಲ್ಲು ಗಣಿಗಾರಿಕೆ ನಿಷೇಧಿಸಲು ಆಗ್ರಹ

03:36 PM May 11, 2022 | Team Udayavani |

ಪಾಂಡವಪುರ: ಕನಗನಮರಡಿ ಗ್ರಾಮದ ಹೊರವಲ ಯದಲ್ಲಿ ನಡೆಯುತ್ತಿದ್ದ ಕಲ್ಲುಗಣಿಗಾರಿಕೆಯನ್ನು ಶಾಶ್ವತವಾಗಿ ನಿಷೇಧಿಸುವಂತೆ ಆಗ್ರಹಿಸಿ ಗ್ರಾಮಸ್ಥರು ಎತ್ತಿನಗಾಡಿಗಳ ಮೂಲಕ ಆಗಮಿಸಿ ತಾಲೂಕು ಕಚೇರಿ ಮುಂದೆ ಕಟ್ಟುಹಾಕಿ ವಿನೂತನವಾಗಿ ಪ್ರತಿಭಟನೆ ನಡೆಸಿದರು.

Advertisement

ಕಾಂಗ್ರೆಸ್‌ ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ಎಚ್‌.ಎನ್‌.ರವೀಂದ್ರ ಅವರ ನೇತೃತ್ವದಲ್ಲಿ ಜಮಾಯಿಸಿದ ಕನಗನಮರಡಿ ಗ್ರಾಮಸ್ಥರು, ತಾಲೂಕು ಕಚೇರಿ ಮುಂದೆ ಎತ್ತು ಮತ್ತು ಗಾಡಿ ನಿಲ್ಲಿಸಿ ಪ್ರತಿಭಟನೆ ನಡೆಸಿದರು. ಈ ವೇಳೆ ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ, ತಹಶೀಲ್ದಾರ್‌ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಅಧಿಕಾರಿಗಳ ವಿರುದ್ಧ ಘೋಷಣೆ: ಬಳಿಕ ಶ್ರೀರಂಗಪಟ್ಟಣ-ಜೇವರ್ಗಿ ಮುಖ್ಯ ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ರಸ್ತೆ ತಡೆದು ರಸ್ತೆಯಲ್ಲೇ ಕುಳಿತು ಊಟಮಾಡಿ ಆಕ್ರೋಶ ವ್ಯಕ್ತಪಡಿಸಿದರು. ಕನಗನಮರಡಿ ಗ್ರಾಮಸ್ಥರು ಸುಮಾರು ಎರಡು ಗಂಟೆಗಳ ಕಾಲ ಪ್ರತಿಭಟನೆ ನಡೆಸಿದರು. ಸಹ ತಹಶೀಲ್ದಾರ್‌ ಹಾಗೂ ಉವಿಭಾಗಾಧಿಕಾರಿಗಳು ಸ್ಥಳಕ್ಕೆ ಆಗಮಿಸಿದ ಹಿನ್ನೆಲೆ ಬೇಕೇ ಬೇಕು ತಹಶೀಲ್ದಾರ್‌ ಬೇಕು, ಉಪವಿಭಾಗಾಧಿಕಾರಿ ಬೇಕು ಎಂದು ಘೋಷಣೆ ಮೊಳಗಿಸಿದರು.

ಅಕ್ರಮದಲ್ಲಿ ಅಧಿಕಾರಿಗಳೂ ಭಾಗಿ: ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ಎಚ್‌.ಎನ್‌.ರವೀಂದ್ರ ಮಾತನಾಡಿ, ಕನಗನಮರಡಿ ಗ್ರಾಮದ ಹೊರವಲಯ ದಲ್ಲಿ ನಡೆಯುತ್ತಿರುವ ಕಲ್ಲುಗಣಿಗಾರಿಕೆಯಿಂದ ಸಾಕಷ್ಟು ಸಮಸ್ಯೆ ಉಂಟಾಗುತ್ತಿದೆ. ಅರಣ್ಯ ಪ್ರದೇಶದ ಪಕ್ಕದಲ್ಲಿಯೇ ಗಣಿಗಾರಿಕೆ ನಡೆಸುತ್ತಿದ್ದಾರೆ. ಜನ-ಜಾನುವಾರು ಸೇರಿದಂತೆ ಮನೆ, ಕೆರೆಕಟ್ಟೆ ನಾಲೆಯ ಅಕ್ವಡೆಕ್‌, ಹುಲಿಕೆರೆ ಸುರಂಗಕ್ಕೆ ತೊಂದರೆ ಎದುರಾಗಿದೆ. ಹಾಗಾಗಿ ಇಲ್ಲಿನ ಗಣಿಗಾರಿಕೆ ಸ್ಥಗಿತಗೊಳಿಸುವಂತೆ ಆಗ್ರಹಿಸಿ ಗ್ರಾಮಸ್ಥರು 38 ದಿನ ಅಹೋರಾತ್ರಿ ಪ್ರತಿಭಟನೆ ನಡೆಸಿದರೂ ಸಂಬಧಿಸಿದ ಜಿಲ್ಲಾಧಿಕಾರಿಗಳು ಮಾತ್ರ ಸ್ಥಳಕ್ಕೆ ಆಗಮಿಸಿ ಜನರ ಸಮಸ್ಯೆ ಕೇಳಿಲ್ಲ. ಇದೆಲ್ಲವನ್ನು ನೋಡಿದರೆ ಇವರೂ ಅಕ್ರಮದಲ್ಲಿ ಭಾಗಿಯಾಗಿದ್ದಾರೆ ಎನ್ನುವ ಅನುಮಾನ ಮೂಡುತ್ತಿದೆ ಎಂದು ಕಿಡಿಕಾರಿದರು.

ನಂತರ ಪ್ರತಿ ಭಟನಾ ಸ್ಥಳಕ್ಕೆ ಆಗಮಿಸಿದ ತಹಶೀಲ್ದಾರ್‌ ಎಸ್‌.ಎಲ್‌. ನಯನಾ ಪ್ರತಿಭಟನಕಾರರೊಂದಿಗೆ ಚರ್ಚಿಸಿದರು. ಸಂಜೆ 5.30 ಆದರೂ ಪ್ರತಿಭಟನೆ ಮುಂದುವರಿ ಯಿತು. ಪ್ರತಿಭಟನೆಯಲ್ಲಿ ಬಲರಾಮೇಗೌಡ, ಹೊಸ ಕೋಟೆ ವಿಜಯ್‌ಕುಮಾರ್‌, ಗ್ರಾಪಂ ಅಧ್ಯಕ್ಷ ಸ್ವಾಮೀಗೌಡ, ಸದಸ್ಯ ರಂಗಸ್ವಾಮಿ, ಜಯರಾಮೇ ಗೌಡ ಮತ್ತಿತರರು ಉಪಸ್ಥಿತರಿದ್ದರು.

Advertisement

ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆ : ಕನಗನಮರಡಿ ಗ್ರಾಮದಲ್ಲಿ ನಡೆಯುತ್ತಿರುವ ಗಣಿಗಾರಿಕೆಯನ್ನು ಶಾಶ್ವತವಾಗಿ ಸ್ಥಗಿತಗೊಳಿಸು ವವರೆಗೂ ಪ್ರತಿಭಟನೆ ನಡೆಸುತ್ತೇವೆ. ಈಗಲಾ ದರೂ ಸಂಬಂಧಪಟ್ಟ ಅಧಿಕಾರಿಗಳು, ಜಿಲ್ಲಾಧಿಕಾ ರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಕ್ರಮ ತೆಗೆದುಕೊಳ್ಳದೆ ಹೋದರೆ ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಕಾಂಗ್ರೆಸ್‌ ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ಎಚ್‌.ಎನ್‌.ರವೀಂದ್ರ ಎಚ್ಚರಿಸಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next