Advertisement

ತಮಿಳುನಾಡಿನ ಧೋರಣೆಗೆ ಕರವೇ ಪ್ರತಿಭಟನೆ

12:01 PM Apr 14, 2018 | |

ಬೆಂಗಳೂರು: ಕಾವೇರಿ ನದಿ ನೀರು ನಿರ್ವಹಣಾ ಮಂಡಳಿ ರಚನೆ ವಿಚಾರದಲ್ಲಿ ತಮಿಳುನಾಡಿನ ಧೋರಣೆ  ಖಂಡಿಸಿ ಹಾಗೂ ಯಾವುದೇ ಕಾರಣಕ್ಕೂ ಕಾವೇರಿ ನದಿ ನೀರು ನಿರ್ವಹಣಾ ಮಂಡಳಿ ರಚನೆ ಮಾಡಬಾರದು ಎಂದು ಆಗ್ರಹಿಸಿ ಕರವೇ ಕಾರ್ಯಕರ್ತರು ಶುಕ್ರವಾರ ಆನಂದರಾವ್‌ ವೃತ್ತದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು.

Advertisement

ಈ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣ ಗೌಡ, ರಾಜಕೀಯ ಉದ್ದೇಶಕ್ಕಾಗಿ ತಮಿಳುನಾಡಿನಲ್ಲಿ ಹೋರಾಟ ನಡೆಯುತ್ತಿವೆ. ರಾಜ್ಯದಲ್ಲಿ ಚುನಾವಣೆ ಹತ್ತಿರ ಇರುವ ಹಿನ್ನೆಲೆಯಲ್ಲಿ ನಾವು ಸುಮ್ಮನಿದ್ದೆವು. ಆದರೆ ಒಕ್ಕೂಟ ವ್ಯವಸ್ಥೆ ಗೌರವಿಸದ ತಮಿಳುನಾಡು ಧೋರಣೆ ಸಹಿಸಿಕೊಳ್ಳಲಾಗದು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರ ಕಾವೇರಿ ನದಿ ನೀರು ನಿರ್ವಹಣಾ ಮಂಡಳಿ ರಚನೆ ವಿಚಾರದಲ್ಲಿ ಎಚ್ಚರಿಕೆ ಹೆಜ್ಜೆ  ಇಡಬೇಕು. ಒಂದು ವೇಳೆ ರಾಜ್ಯದ ಹಿತವನ್ನು ಕಡೆಗಣಿಸಿ ಕಾವೇರಿ ನದಿ ನೀರು ನಿರ್ವಹಣಾ ಮಂಡಳಿ ರಚಿಸಿದರೆ ಹೋರಾಟ ಅನಿವಾರ್ಯ ಎಂದರು. ರಾಜಕೀಯ ಉದ್ದೇಶಕ್ಕಾಗಿ ಕಾವೇರಿ ಕ್ಯಾತೆ ತೆಗೆದಿರುವ ನಟ ರಜನಿಕಾಂತ್‌ ಮತ್ತು ಕಮಲ್‌ ಹಾಸನ್‌ ಅವರ ಚಿತ್ರಗಳನ್ನು ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಬಿಡುಗಡೆಗೆ ಅವಕಾಶ ನೀಡುವುದಿಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next