Advertisement

ಪಠ್ಯ ಪರಿಷ್ಕರಣೆ ವಿರುದ್ಧ ಪ್ರತಿಭಟನೆ : ಹಿಂಪಡೆಯುವ ಪ್ರಶ್ನೆಯೇ ಇಲ್ಲ ಎಂದ ಶಿಕ್ಷಣ ಸಚಿವರು

01:14 AM Jun 19, 2022 | Team Udayavani |

ಬೆಂಗಳೂರು : ಪಠ್ಯ ಪರಿಷ್ಕರಣೆ ವಿರುದ್ಧ ರಾಜಧಾನಿಯಲ್ಲಿ ಶನಿವಾರ ಬೃಹತ್‌ ಪ್ರತಿಭಟನ ಮೆರವಣಿಗೆ ನಡೆದಿದ್ದು, ಯಾವುದೇ ಕಾರ ಣಕ್ಕೂ ರೋಹಿತ್‌ ಚಕ್ರತೀರ್ಥ ಸಮಿತಿ ಪರಿಷ್ಕರಿಸಿದ ಪಠ್ಯವನ್ನು ಮಕ್ಕಳಿಗೆ ನೀಡಬಾರದು ಎಂದು ಆಗ್ರಹಿಸಲಾಯಿತು.

Advertisement

ರೋಹಿತ್‌ ನೇತೃತ್ವದ ಸಮಿತಿ ರೂಪಿಸಿರುವ ಪರಿಷ್ಕೃತ ಪುಸ್ತಕಗಳನ್ನು ವಿರೋಧಿಸಿ ವಿಶ್ವ ಮಾನವ ಕ್ರಾಂತಿಕಾರಿ ಮಹಾಕವಿ ಕುವೆಂಪು ಹೋರಾಟ ಸಮಿತಿ ಶನಿವಾರ ಫ್ರೀಡಂ ಪಾರ್ಕ್‌ ನಲ್ಲಿ ಆಯೋಜಿಸಿದ್ದ ಪ್ರತಿಭಟನ ಸಮಾ ವೇಶಕ್ಕೆ ವಿವಿಧ ಕ್ಷೇತ್ರದ ನಾಯಕರ ದಂಡೇ ಹರಿದು ಬಂದಿತ್ತು.

ಪಟ್ಟನಾಯಕನಹಳ್ಳಿ ಗುರುಗುಂಡ ಬ್ರಹ್ಮೇಶ್ವರ ಪೀಠದ ನಂಜಾವಧೂತ ಸ್ವಾಮೀಜಿ, ಚಂದ್ರಶೇಖರನಾಥ ಸ್ವಾಮೀಜಿ, ಜ್ಞಾನಪ್ರಕಾಶ ಸ್ವಾಮೀಜಿ, ಸೇವಾಲಾಲ್‌ ಸ್ವಾಮೀಜಿ ಸಹಿತ ವಿವಿಧ ಸಮುದಾಯದ ಮಠಾಧೀಶರು, ಮಾಜಿ ಪ್ರಧಾನಿ ಎಚ್‌.ಡಿ. ದೇವೇ ಗೌಡ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌, ಜೆಡಿಎಸ್‌ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ, ಸುಪ್ರೀಂ ಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ವಿ. ಗೋಪಾಲ ಗೌಡ, ಸಹಿತ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಶಾಸಕರು ಸಾಥ್‌ ನೀಡಿದರು. ಸಾಹಿತಿ ಬರಗೂರು ರಾಮಚಂದ್ರಪ್ಪ, ಸಾಹಿತಿ ಹಂಸಲೇಖ, ಸಾರಾ ಗೋವಿಂದು, ಪ್ರವೀಣ್‌ ಕುಮಾರ್‌ ಶೆಟ್ಟಿ, ಹಿರಿಯ ವಕೀಲ ಹನುಮಂತಪ್ಪ, ಒಕ್ಕಲಿಗರ ಸಂಘದ ಅಡಿಟರ್‌ ನಾಗರಾಜ್‌, ಎಲ್‌. ಮುಕುಂದ್‌ರಾಜ್‌ ಮತ್ತಿತರರಿದ್ದರು.

ದೇವೇಗೌಡ ಮಾತನಾಡಿ,ಪರಿಷ್ಕೃತ ಪಠ್ಯಪುಸ್ತಕಗಳ ವಿರುದ್ಧ ನಡೆಯು ತ್ತಿರುವ ಹೋರಾಟಕ್ಕೆ ಸಂಪೂರ್ಣ ಬೆಂಬಲ ಘೋಷಿಸಿದರು. ಹೋರಾ ಟಕ್ಕೆ ಗೋಕಾಕ್‌ ಚಳವಳಿ ನಮಗೆ ಮಾದರಿಯಾಗಲಿ ಎಂದರು.

ಇದನ್ನೂ ಓದಿ : ಅಗ್ರಸ್ಥಾನ ಪಡೆದವರ ಪ್ರಗತಿಯ ಪಕ್ಷಿನೋಟ: ಸಾಧನೆಯ ಗೆಲುವಿನ ನಗುವಿಗೆ ಹತ್ತಾರು ಎಸಳು

Advertisement

ನಿರ್ಣಯ
ಪರಿಷ್ಕತ ಪಠ್ಯಪುಸ್ತಕಗಳನ್ನು ಹಿಂಪಡೆಯಬೇಕು, ನಾಡಗೀತೆಗೆ ಅಪಮಾನ ಮಾಡಿರುವ ರೋಹಿತ್‌ ಚಕ್ರತೀರ್ಥ ಅವರನ್ನು ಬಂಧಿಸಬೇಕು ಹಾಗೂ ಪಠ್ಯ ಪರಿಷ್ಕರಣೆ ವಿಚಾರವಾಗಿ ಶಿಕ್ಷಣ ಸಚಿವ ನಾಗೇಶ್‌ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಮುಂತಾದ ನಿರ್ಣಯಗಳನ್ನು ವಿಶ್ವಮಾನವ ಕ್ರಾಂತಿಕಾರಿ ಮಹಾಕವಿ ಕುವೆಂಪು ಹೋರಾಟ ಸಮಿತಿ ಕೈಗೊಂಡಿದ್ದು, ಇದನ್ನು ಸಮಿತಿ ಅಧ್ಯಕ್ಷ ಜಿ.ಬಿ. ಪಾಟೀಲ್‌ ಮಂಡಿಸಿದರು. ವಿವಿಧ ಮಠಾಧೀಶರು, ಸಾಹಿತಿಗಳು, ಎಚ್‌.ಡಿ. ದೇವೇಗೌಡ, ಡಿ.ಕೆ. ಶಿವಕುಮಾರ್‌, ಸುಪ್ರೀಂ ಕೋರ್ಟ್‌ ನಿವೃತ್ತ ನ್ಯಾ| ವಿ. ಗೋಪಾಲ ಗೌಡ ಸಹಿತ 500ಕ್ಕೂ ಹೆಚ್ಚು ಮಂದಿ ಇದಕ್ಕೆ ಸಹಿ ಮಾಡಿದರು. ಬೇಡಿಕೆಗಳ ಈಡೇರಿಕೆ ಸಂಬಂಧ ಸರಕಾರಕ್ಕೆ 10 ದಿನಗಳ ಗಡುವು ನೀಡಲಾಯಿತು. ಹತ್ತು ದಿನಗಳ ಬಳಿಕ ಮುಂದಿನ ಹೋರಾಟ ಕೈಗೊಳ್ಳುವುದಾಗಿ ಸಮಿತಿ ಅಧ್ಯಕ್ಷ ಜಿ.ಬಿ. ಪಾಟೀಲ್‌ ಘೋಷಿಸಿದರು.

ಹಿಂಪಡೆಯುವ ಪ್ರಶ್ನೆಯೇ ಇಲ್ಲ: ಸಚಿವ ನಾಗೇಶ್‌
ಪರಿಷ್ಕೃತ ಪಠ್ಯಪುಸ್ತಕಗಳನ್ನು ಹಿಂಪಡೆಯುವ ಅಥವಾ ಕೈಬಿಡುವ ಪ್ರಶ್ನೆಯೇ ಇಲ್ಲ. ಈಗಾಗಲೇ ಈ ವಿಚಾರದಲ್ಲಿ ಸರಕಾರ ತನ್ನ ಸ್ಪಷ್ಟ ನಿರ್ಧಾರವನ್ನು ತಿಳಿಸಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಸ್ಪಷ್ಟಪಡಿಸಿದರು. ಪರಿಷ್ಕೃತ ಪಠ್ಯ ವಾಪಸ್‌ ಪಡೆಯುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ವಿಚಾರವಾಗಿ ಸುದ್ದಿಗಾರರ ಪ್ರಶ್ನೆಗೆ ಸಚಿವರು ಈ ಸ್ಪಷ್ಟನೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next