Advertisement
ತಾಲೂಕು ಬಿಡದಿ ಪಟ್ಟಣದಲ್ಲಿ ಟೊಯೋಟ ಕಿರ್ಲೋಸ್ಕರ್ ಮೋಟಾರ್ ಕಂಪನಿ ತನ್ನ ಸಿ.ಎಸ್.ಆರ್. ನಿಧಿಯಲ್ಲಿ 12 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡುತ್ತಿರುವ ಮಾದರಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಶಿಲಾನ್ಯಾಸ ನೆರವೇರಿಸಿ ಸುದ್ದಿಗಾರರೊಂದಿಗೆ ಮಾತನಾಡಿ, ರೈತರ ಮತ್ತು ಕೃಷಿಗೆ ಪೂರಕ ವಾತಾವರಣದ ಬಗ್ಗೆ ಕಳೆದ 73 ವರ್ಷಗಳಲ್ಲಿ ಮಾಡಲಾಗದ್ದನ್ನು ಪ್ರಧಾನಿ ನರೇಂದ್ರ ಮೋದಿಯವರು ಮಾಡಿದ್ದಾರೆ. ಇದನ್ನು ಸಹಿಸಲಾಗದೆ ಕೆಲವರು ಅಪಪ್ರಚಾರ ನಡೆಸುತ್ತರೈತರನ್ನು ದಿಕ್ಕು ತಪ್ಪಿಸುತ್ತಿದ್ದಾರೆ ಎಂದರು.
Related Articles
Advertisement
ಮುಖ್ಯಮಂತ್ರಿ ಯಡಿಯೂರಪ್ಪನವರು ಎಲ್ಲ ಅನುಮಾನಗಳನ್ನು ಬಗೆಹರಿಸಿದ್ದಾರೆ. ಇಷ್ಟಾದರೂ ಹಠಕ್ಕೆ ಬಿದ್ದು ರೈತರನ್ನು ಹಾದಿ ತಪ್ಪಿಸುತ್ತಿದ್ದಾರೆ. ಇದರ ಹಿಂದೆ ಯಾವುದೋ ದುರುದ್ದೇಶ ಅಡಗಿದೆ. ಇಂಥಹ ಜನಪರ ಕಾರ್ಯಕ್ರಮಗಳಿಂದ ಹಿಂದೆಸರಿಯುವ ಪ್ರಶ್ನೆ ಇಲ್ಲ ಎಂದು ಸ್ಪಷ್ಟಪಡಿಸಿದರು. ಕೃಷಿ ಕೇಂದ್ರಗಳ ಲೋಪ ಸರಿಮಾಡುತ್ತೇವೆ:
ರಾಮನಗರ ಜಿಲ್ಲೆಯ ಕೃಷಿ ಸೇವಾ ಕೇಂದ್ರಗಳಲ್ಲಿ ಲೋಪಗಳಿವೆ ಎಂದು ಸುದ್ದಿಗಾರರು ಗಮನ ಸೆಳೆದಾಗ ಪ್ರತಿಕ್ರಿಯಿಸಿ, ಲೋಪಗಳನ್ನು ಖಂಡಿತಾ ಸರಿಪಡಿಸಲಾಗುವುದು. ಯಾವ ಉದ್ದೇಶಕ್ಕೆ ಆ ಕೇಂದ್ರಗಳನ್ನು ಸ್ಥಾಪಿಸಲಾಗಿದೆಯೋ ಅದು
ಈಡೇರಲೇಬೇಕು. ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು. ಈ ಕೇಂದ್ರಗಳಲ್ಲಿನ ಯಂತ್ರೋಪಕರಣಗಳನ್ನು ಕೂಡಲೇ ಅರ್ಹ
ಫಲಾನುಭವಿಗಳಿಗೆ ವಿತರಿಸುವಂತೆ ಆದೇಶ ನೀಡಲಾಗುವುದು ಎಂದರು. ಮಾಗಡಿ ಶಾಸಕ ಎ.ಮಂಜುನಾಥ, ಎಂ.ಎಲ್.ಸಿ ಸಿ.ಎಂ.ಲಿಂಗಪ್ಪ, ಜಿಪಂ ಅಧ್ಯಕ್ಷ ಅಶೋಕ್, ಜಿಲ್ಲಾಧಿಕಾರಿ ಎಂ.ಎ ಸ್.ಅರ್ಚನಾ, ಜಿಪಂ ಸಿಇಒ ಇಕ್ರಂ, ಎಸ್‌ಪಿ ಗಿರೀಶ್, ಬಿಡದಿ ಪುರಸಭಾಧ್ಯಕ್ಷೆ ಸರಸ್ವತಿ, ಡಿಎಚ್‌ಒ ಡಾ.ನಿರಂಜನ, ಟೊಯೋಟಾ ಜನರಲ್ ಮೇನೇಜರ್ (ಸಿಎಸ್‌ಆರ್) ರಾಜೇಂದ್ರ ಹೆಗ್ಡೆ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಮತ್ತು ಸಾರ್ವಜನಿಕರು ಹಾಜರಿದ್ದರು.