Advertisement

ಪೌರತ್ವ ಕಾಯ್ದೆ ವಿರೋಧಿಸಿ ಪ್ರತಿಭಟನೆ

02:32 PM Dec 18, 2019 | Team Udayavani |

ತಾವರಗೇರಾ: ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಮತ್ತು ಪೌರತ್ವ ತಿದ್ದುಪಡಿಯು ಅಘೋಷಿತ ತುರ್ತು ಪರಿಸ್ಥಿತಿಯಾಗಿದೆ ಎಂದು ವೇಲ್ಫೆರ್‌ ಪಾರ್ಟಿ ಆಫ್‌ ಇಂಡಿಯಾದ ರಾಜ್ಯ ಸಂಚಾಲಕ ರಾಜಾ ನಾಯಕ ಹೇಳಿದರು.

Advertisement

ಪಟ್ಟಣದ ಹಳೆ ಬಸ್‌ ನಿಲ್ದಾಣ ವೃತ್ತದಲ್ಲಿ ಕರ್ನಾಟಕ ಪ್ರಾಂತ್ಯ ರೈತ ಸಂಘ ಹಾಗೂ ವೇಲ್ಫೆರ್‌ ಪಾರ್ಟಿ ಆಫ್‌ ಇಂಡಿಯಾ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಪೌರತ್ವ ವಿರೋಧಿಸಿ  ಪ್ರತಿಭಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶವನ್ನು ಬ್ರಿಟಿಷರಿಂದ

ವಿಮೋಚನೆಗೊಳಿಸಲು ಧರ್ಮದ ಚೌಕಟ್ಟು ಮೀರಿ ವಿವಿಧ ಹೋರಾಟಗಳು ಜರುಗಿದ್ದವು. ಈ ಹಿನ್ನೆಲೆಯಲ್ಲಿ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದವರ ಧರ್ಮ ನಿರಪೇಕ್ಷತೆಯ ಮೌಲ್ಯಗಳನ್ನು ಸಂವಿಧಾನದ ಆತ್ಮದ ಸ್ಥಾನದಲ್ಲಿ ಸೇರಿಲಾಗಿತ್ತು. ಆದರೆ ಈ ದೇಶ ಪಾಲಿಸಿಕೊಂಡು ಬಂದಿರುವ ಧರ್ಮ ನಿರಪೇಕ್ಷತೆ ಮತ್ತು ಸಮಾನತೆಯ ಬೇರುಗಳನ್ನು ಎಸ್‌ಆರ್‌ಸಿ ಮತ್ತು ಸಿಎಬಿ ನಾಶಪಡಿಸುತ್ತಿದೆ. ಕಳೆದ ನಾಲ್ಕು ತಿಂಗಳ ಹಿಂದೆ ಜಮ್ಮು ಮತ್ತು ಕಾಶ್ಮೀರದಲ್ಲಿ 371 ರದ್ದು ಮಾಡಿ ಕಾಶ್ಮೀರದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಹೇರಲಾಗಿದೆ ಎಂದು ಹೇಳಿದರು. ನಾಡ ತಹಶೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು. ರಾಜ್ಯ ರೈತ ಪ್ರಾಂತ್ಯ ಸಂಘ ರಾಜ್ಯಾಧ್ಯಕ್ಷ ಡಿ.ಎಚ್‌. ಪೂಜಾರ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಬಸವರಾಜ ಬುನ್ನಟ್ಟಿ, ಗೌಸೀಯಾ ಬೇಗಂ, ಶ್ಯಾಮೀದ್‌ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next