Advertisement

ಆರೋಗ್ಯ ವಿವಿ ಕ್ಯಾಂಪಸ್‌ ಸ್ಥಳಾಂತರ ವಿರೋಧಿಸಿ ಪ್ರತಿಭಟನೆ

12:07 PM Oct 07, 2017 | |

ಬೆಂಗಳೂರು: ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಕ್ಯಾಂಪಸ್‌ ವಿವಾದಿತ ಪ್ರದೇಶಕ್ಕೆ  ಸ್ಥಳಾಂತರಿಸಲು ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರ ಖಂಡಿಸಿ ಶುಕ್ರವಾರ ಅಖೀಲ ಭಾರತೀಯ ವಿದ್ಯಾರ್ಥಿ ಪರಿಷತ್‌ ಕಾರ್ಯಕರ್ತರೊಂದಿಗೆ ಆರೋಗ್ಯ ವಿವಿ ವಿದ್ಯಾರ್ಥಿಗಳ ಪ್ರತಿಭಟನೆ ನಡೆಸಿದರು.

Advertisement

ರಾಮನಗರದ ಅರ್ಚಕರ ಹಳ್ಳಿಯ ವಿವಾದಿತ ಜಮೀನಿಗೆ ವಿವಿ ಕ್ಯಾಂಪಸ್‌ ಸ್ಥಳಾಂತರಕ್ಕೆ ಬೇಕಾದ ಕ್ರಮ ನಡೆಯುತ್ತಿದೆ. ಈ ಬಗ್ಗೆ ಸಾರ್ವಜನಿಕವಾಗಿ ಯಾವುದೇ ಚರ್ಚೆಯಾಗಿಲ್ಲ. ಶಿಕ್ಷಣ ತಜ್ಞರನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ. ಸರ್ಕಾರವು ತನ್ನ ನಿರ್ಧಾರದಿಂದ ಹಿಂದೆ ಸರಿಯಬೇಕು ಅಥವಾ ರಾಜ್ಯಪಾಲರು ಮಧ್ಯಪ್ರವೇಶ ಮಾಡಿ ಇದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.

ಕ್ಯಾಪಂಸ್‌ ಸ್ಥಳಾಂತರ ಹೊಸ ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿಗಳ ಹಣದಿಂದ ಕಟ್ಟಡ ನಿರ್ಮಿಸುತ್ತಿರುವುದು ಭ್ರಷ್ಟಾಚಾರಕ್ಕೆ ದಾರಿಮಾಡಿಕೊಟ್ಟಂತಿದೆ. ಸಂಶೋಧನೆ ಮತ್ತು ಆಡಳಿತ ನಿರ್ವಹಣೆಗೆ ವಿವಿಯಲ್ಲಿ ಪ್ರಥಮ ಆದ್ಯತೆ ನೀಡಬೇಕು. ವಿವಿಯ ಸ್ವಾಯತ್ತತೆಗೆ ಯಾವುದೇ ಧಕ್ಕೆಯಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ಸರ್ಕಾರದ ಮೇಲಿದೆ. ಹೀಗಾಗಿ ಯಾವುದೇ ಕಾರಣಕ್ಕೂ ವಿವಾದಿತ ಸ್ಥಳಕ್ಕೆ ಕ್ಯಾಂಪಸ್‌ ಸ್ಥಳಾಂತರ ಮಾಡಬಾರದು ಎಂದು ಒತ್ತಾಯಿಸಿದರು.

ಎಬಿವಿಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ಸ್ವಾಮಿ ಮರಳಾಪುರ, ರಾಜ್ಯ ಕಾರ್ಯದರ್ಶಿ ರಾಜೇಶ ಗುರಾಣಿ, ಬೆಂಗಳೂರು ವಿಭಾಗ ಸಂಘಟನಾ ಕಾರ್ಯದರ್ಶಿ ಜಯಪ್ರಕಾಶ, ಸುರ್ಜಿತ್‌ ಹಾಗೂ ಮೋನಿಶ್‌, ರಾಜೇಶ, ರೋಷನ್‌, ಚಂದನ್‌, ತೇಜ, ನವೀನ್‌, ವೆಂಕಟೇಶ, ಪ್ರವಲೀಕಾ, ಜಯಶ್ರೀ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next