Advertisement

ಸರ್ಕಾರದ ವಿರುದ್ಧ ಪ್ರತಿಭಟನೆ: ಪ್ರವೀಣ್ ಸೂದ್ ಜತೆ ಚರ್ಚೆ ಮಾಡಿದ ಸಿಎಂ ಬೊಮ್ಮಾಯಿ

02:30 PM Jul 30, 2022 | Team Udayavani |

ಬೆಂಗಳೂರು: ಸರ್ಕಾರದ ವಿರುದ್ಧ ಹಿಂದೂಪರ ಸಂಘಟನೆಗಳು ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಜೊತೆ ಸಭೆ ನಡೆಸಿದ್ದಾರೆ.

Advertisement

ಪ್ರವೀಣ್ ಸೂದ್ ಅವರನ್ನು ತಮ್ಮ ನಿವಾಸಕ್ಕೆ ಕರೆಸಿಕೊಂಡ ಬೊಮ್ಮಾಯಿ ಅವರು ಕಾನೂನು ಸುವ್ಯವಸ್ಥೆ ಕುರಿತಂತೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಮಾಹಿತಿ ಪಡೆದರು.

ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ನಿವಾಸಕ್ಕೆ ಎಬಿವಿಪಿ ಕಾರ್ಯಕರ್ತರು ಮುತ್ತಿಗೆ ಹಾಕಿ ಪ್ರತಿಭಟನೆ ಕಾವು ರಾಜ್ಯಾದ್ಯಂತ ಹಬ್ಬಬಹುದೆಂಬ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಪ್ರದೇಶಗಳಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸಿಎಂ ಸೂಚನೆ ನೀಡಿದ್ದಾರೆ.

ವಿಶೇಷವಾಗಿ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಬಿಜೆಪಿ ಪ್ರಾಬಲ್ಯವಿರುವ ಮಡಿಕೇರಿ, ಚಿಕ್ಕಮಗಳೂರು, ಶಿವಮೊಗ್ಗ, ಬೆಳಗಾವಿ, ಹುಬ್ಬಳ್ಳಿ, ಧಾರವಾಡ ಸೇರಿದಂತೆ ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಜಿಲ್ಲೆಗಳಲ್ಲಿ ಬಿಗಿ ಭದ್ರತೆ ತೆಗೆದುಕೊಳ್ಳಬೇಕೆಂದು ಪ್ರವೀಣ್ ಸೂದ್‍ ಗೆ ಸಿಎಂ ನಿರ್ದೇಶನ ನೀಡಿದ್ದಾರೆ.

ಇದನ್ನೂ ಓದಿ:ಏಕನಾಥ್ ಶಿಂಧೆ ಸಿಎಂ ಆಗಿ ತಿಂಗಳು ಪೂರ್ತಿ: ಸಂಪುಟ ವಿಸ್ತರಣೆ ಇನ್ನೂ ಇಲ್ಲ

Advertisement

ಒಂದು ವೇಳೆ ಭದ್ರತಾ ಲೋಪ ಕಂಡುಬಂದರೆ ಪೊಲೀಸರ ಮೇಲೆ ಶಿಸ್ತು ಕ್ರಮ ಜರುಗಿಸಲು ಹಿಂದುಮುಂದೆ ನೋಡುವುದಿಲ್ಲ ಎಂದು ಸಿಎಂ ಎಚ್ಚರಿಕೆಯನ್ನು ಕೊಟ್ಟಿದ್ದಾರೆ ಎನ್ನಲಾಗಿದೆ.

ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್‍ ಕುಮಾರ್ ಸೇರಿದಂತೆ ಕೆಲವು ಹಿರಿಯ ಪೊಲೀಸ್ ಅಧಿಕಾರಿಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೀಡು ಬಿಟ್ಟಿದ್ದಾರೆ. ಗುಪ್ತಚರ ವಿಭಾಗವನ್ನು ಬಲಪಡಿಸಲಾಗಿದೆ. ವಿಶೇಷವಾಗಿ ಹೊರ ರಾಜ್ಯಗಳಿಗೆ ಸಂಪರ್ಕ ಕಲ್ಪಿಸುವ ಕೇರಳ ಗಡಿಭಾಗದಲ್ಲಿರುವ ಮಂಗಳೂರು, ಕಾಸರಗೋಡು ಸೇರಿದಂತೆ ಮತ್ತಿತರ ಕಡೆ ಚೆಕ್‍ ಪೋಸ್ಟ್ ಗಳನ್ನು ಹೆಚ್ಚಳ ಮಾಡಲಾಗಿದೆ. ಹೊರ ರಾಜ್ಯಗಳಿಂದ ಬರುತ್ತಿರುವ ವಾಹನಗಳನ್ನು ತಪಾಸಣೆ ನಡೆಸಲಾಗುತ್ತಿದೆ. ಶಂಕಾಸ್ಪದ ವ್ಯಕ್ತಿಗಳ ಚಲನವಲನಗಳ ಮೇಲೆ ಹದ್ದಿನ ಕಣ್ಣಿಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next