ನೆಲಮಂಗಲ: ಕನ್ನಡಪರ ಸಂಘಟನೆಗಳು ಹಾಗೂ ಪ್ರಗತಿಪರ ಚಿಂತಕರ ವೇದಿಕೆಯಿಂದ ನಾಯಕರುಗಳ ಶವಯಾತ್ರೆ ಮಾಡುವ ಮುಖಾಂತರ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ನಗರದಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಕರೋನಾ ಮಹಾಮಾರಿಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ಪೆಟ್ರೋಲ್ ಡೀಸೆಲ್ ಹಾಗೂ ದಿನನಿತ್ಯ ಬಳಕೆಯ ಆಹಾರ ಪದಾರ್ಥಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರು ಕಂಗಾಲಾಗಿದ್ದಾರೆ. ಕೂಡಲೇ ತೈಲದರ ಹಾಗೂ ಆಹಾರ ಪದಾರ್ಥಗಳ ಬೆಲೆ ಇಳಿಕೆ ಮಾಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಇದನ್ನೂ ಓದಿ:ಪ್ರತಿಷ್ಠಿತ ಆಸ್ಪತ್ರೆಗಳ ಹೆಸರಿನ ನಕಲಿ ವೆಬ್‍ಸೈಟ್ ಸೃಷ್ಟಿ: ಕಿಡ್ನಿದಾನಕ್ಕೆ 4 ಕೋಟಿ ಆಮಿಷ
ಬಿಜೆಪಿ ನೇತೃತ್ವದ ಕೇಂದ್ರ ಹಾಗೂ ರಾಜ್ಯ ಸರ್ಕಾರ ಪದೇಪದೇ ಪೆಟ್ರೋಲ್ ಡೀಸೆಲ್ ಗ್ಯಾಸ್ ಸಿಲಿಂಡರ್ ಬೆಲೆಗಳನ್ನು ಏರಿಸುತ್ತಿದೆ. ಮೋದಿ ಸರ್ಕಾರ ಜನವಿರೋಧಿ ಎಂಬುದಕ್ಕೆ ಇದು ಸಾಕ್ಷಿ ಹಾಗೂ ಮೋದಿಯ ಅಚ್ಚೆದಿನ್ ಅದಾನಿ, ಅಂಬಾನಿ, ಟಾಟಾ ಬಿರ್ಲಾ, ಪ್ರತಿಷ್ಠಿತ ಉದ್ಯಮಿಗಳಿಗೆ ಎಂದು ಕನ್ನಡ ಪರ ಸಂಘಟನೆ ಕಾರ್ಯಕರ್ತರುಗಳು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಜನರ ಗಮನವನ್ನು ಜ್ವಲಂತ ಸಮಸ್ಯೆಗಳಿಂದ ಬೇರೆಡೆಗೆ ಸೆಳೆಯುವ ಪ್ರಯತ್ನವನ್ನು ಸರ್ಕಾರ ಮಾಡುತ್ತಿದೆ. ಭಾವನಾತ್ಮಕ ವಿಚಾರಗಳನ್ನು ಮುನ್ನೆಲೆಗೆ ತಂದು ಸಮಾಜದಲ್ಲಿ ಅಶಾಂತಿ ಸೃಷ್ಟಿಸುತ್ತಿದೆ. ಎಂದು ಪ್ರತಿಭಟನಾಕಾರರು ಆರೋಪಿಸಿದರು