Advertisement

ಪ್ರಭಾರ ಪಿಡಿಒ ಮೇಲಿನ ಹಲ್ಲೆ ಖಂಡಿಸಿ ಪ್ರತಿಭಟನೆ

09:22 AM Jan 30, 2019 | Team Udayavani |

ಕಡೂರು: ತಾಲೂಕಿನ ಸೋಮನಹಳ್ಳಿ (ಪ್ರಭಾರ) ಪಿಡಿಒ ಎಸ್‌. ಜಯಪ್ಪನವರ ಮೇಲೆ ನಡೆದ ಹಲ್ಲೆ ಖಂಡಿಸಿ ತಾಲೂಕು ಗ್ರಾಮೀಣಾಭಿವೃದ್ಧಿ ಪಂಚಾಯತ್‌ ರಾಜ್‌ ಇಲಾಖೆಯ ಅಧಿಕಾರಿಗಳು ಮತ್ತು ನೌಕರ ಸಂಘದಿಂದ ಹಲ್ಲೆ ಮಾಡಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ತಹಸೀಲ್ದಾರ್‌ ಮನವಿ ಸಲ್ಲಿಸಲಾಯಿತು.

Advertisement

ತಾಲೂಕಿನ ವಿವಿಧ ಗ್ರಾಮ ಪಂಚಾಯತ್‌ಗಳಿಂದ ಬಂದಿದ್ದ ಪಿಡಿಒಗಳು, ಸಂಘದ ಅಧ್ಯಕ್ಷ ಸುನಿಲ್‌ ಕುಮಾರ್‌ ನೇತೃತ್ವದಲ್ಲಿ ಮಂಗಳವಾರ ತಾಲೂಕು ಕಚೇರಿಯ ಮುಂದೆ ಪ್ರತಿಭಟನೆ ನಡೆಸಿದರು.

ಸಂಘದ ಅಧ್ಯಕ್ಷ ಸುನೀಲ್‌ ಕುಮಾರ್‌ ಮಾತನಾಡಿ, ಜಯಪ್ಪ ಉತ್ತಮ ಕೆಲಸಗಾರರು. ಹಿರಿಯ ಅಧಿಕಾರಿಯಾಗಿದ್ದರು. ಉತ್ತಮ ಒಡನಾಟದಿಂದ ಕೆಲಸ ಕಾರ್ಯಗಳನ್ನು ನಿರ್ವಹಿಸಿಕೊಂಡು ಹೋಗುತ್ತಿದ್ದರು. ಇಂತಹ ಅಧಿಕಾರಿಗೆ ಸೋಮನಹಳ್ಳಿ ಗ್ರಾಮ ಪಂಚಾಯತ್‌ ಸದಸ್ಯೆ, ಸದಸ್ಯ ಮತ್ತು ಅವರ ಪತಿ ಹಲ್ಲೆ ಮಾಡಿದ್ದಾರೆ. ಇದನ್ನು ನಮ್ಮ ಸಂಘವು ತೀವ್ರವಾಗಿ ಖಂಡಿಸುತ್ತದೆ ಎಂದರು.

ಜಯಪ್ಪನವರ ಮೇಲೆ ಹಲ್ಲೆ ಮಾಡಿರುವ ಗ್ರಾಪಂ ಸದಸ್ಯೆ ಡಿ. ಲಲಿತಾ, ನಾಗಮ್ಮ, ಆಕಾಶ ನಾಯ್ಕ ಅವರನ್ನು ದುರ್ನಡತೆಯ ಆಧಾರದ ಮೇಲೆ ಸದಸ್ಯತ್ವದಿಂದ ವಜಾಗೊಳಿಸಲು ಸರಕಾರಕ್ಕೆ ಒತ್ತಾಯ ಮಾಡುತ್ತೇವೆ. ಗ್ರಾಮ ಪಂಚಾಯತ್‌ಗಳಲ್ಲಿ ಕರ್ತವ್ಯ ನಿರ್ವಹಿಸುವ ಅಧಿಕಾರಿ, ಸಿಬ್ಬಂದಿಗಳ ಮೇಲೆ ನಿಂದನೆ ಮತ್ತು ದೈಹಿಕ ಹಲ್ಲೆಯ ಪ್ರಕರಣಗಳು ಇತ್ತೀಚೆಗೆ ಹೆಚ್ಚುತ್ತಿದ್ದು ನೌಕರರಿಗೆ ಸೂಕ್ತ ಭದ್ರತೆ ಇಲ್ಲದಿರುವುದೆ ಇಂತಹ ಪ್ರಕರಣಗಳಿಗೆ ಕಾರಣವಾಗಿದೆ. ಇಂತಹ ಪ್ರಕರಣಗಳಲ್ಲಿ ಪೊಲೀಸ್‌ ಇಲಾಖೆಯ ಅಧಿಕಾರಿಗಳು ಕಾನೂನು ಕ್ರಮ ಕೈಗೊಂಡು ನ್ಯಾಯ ದೊರಕಿಸಬೇಕೆಂದು ಮನವಿ ಮಾಡಿದರು.

ತಾಪಂ ಸಹಾಯಕ ನಿರ್ದೇಶಕಿ ನಯನ, ಅಭಿವೃದ್ಧಿ ಅಧಿಕಾರಿಗಳಾದ ರಾಜೇಶ್‌, ರಾಜು, ಮಂಜುನಾಥ್‌, ಸತೀಶ್‌ ಮಲ್ಲಿಕಾರ್ಜುನ ಮತ್ತಿತರರು ಇದ್ದರು.

Advertisement

ಮನವಿ ಸ್ವೀಕರಿಸಿ ಮಾತನಾಡಿದ ತಹಶೀಲ್ದಾರ್‌ ಮಹೇಶ್ಚಂದ್ರ ಮಾತನಾಡಿ, ಪಿಡಿಒ ಮೇಲೆ ನಡೆದ ಹಲ್ಲೆ ಖಂಡಿಸಿ ಸಂಘಟನೆಯಿಂದ ನೀಡಿರುವ ಮನವಿಯನ್ನು ಕೂಡಲೇ ಜಿಲ್ಲಾಧಿಕಾರಿಗಳ ಕಚೇರಿಗೆ ಕಳುಹಿಸಿ ಸೂಕ್ತ ಕಾನೂನು ಕ್ರಮಕ್ಕೆ ಒತ್ತಾಯಿಸುವುದಾಗಿ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next