Advertisement

ಬೆಳಗಾವಿ ನಮ್ಮದೆಂದ ಮಹಾ ಸಿಎಂ ವಿರುದ್ಧ ಧರಣಿ

07:35 PM Jan 21, 2021 | Team Udayavani |

ಚಾಮರಾಜನಗರ: ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಬೇಕು ಎಂಬ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಹೇಳಿಕೆ ಖಂಡಿಸಿ ಕರ್ನಾಟಕ ಯುವಶಕ್ತಿ ವೇದಿಕೆಯ ಜಿಲ್ಲಾ ಘಟಕದ ವತಿಯಿಂದ ನಗರದಲ್ಲಿ ಬುಧವಾರ ಪ್ರತಿಭಟಿಸಲಾಯಿತು.  ನಗರದ ಜಿಲ್ಲಾಡಳಿತ ಭವನದ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು ಉದ್ಧವ್‌ ಠಾಕ್ರೆ ವಿರುದ್ಧ ಘೋಷಣೆ ಕೂಗಿದರು. ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಿದರು.

Advertisement

ಪ್ರತಿಭಟನೆ ನೇತೃತ್ವ ವಹಿಸಿದ್ದ ವೇದಿಕೆಯ ಜಿಲ್ಲಾಧ್ಯಕ್ಷ ಮಂಜುನಾಥಾಚಾರಿ ಮಾತನಾಡಿ, ಮಹಾರಾಷ್ಟ್ರ ಸಿಎಂ ಮರಾಠಿ ಭಾಷೆ, ಸಂಸ್ಕೃತಿ ಪ್ರಧಾನ ಪ್ರದೇಶಗಳನ್ನು ಮಹಾ ರಾಷ್ಟ್ರಕ್ಕೆ ಸೇರಿಸಿಕೊಳ್ಳುವುದಾಗಿ ಹೇಳಿಕೆ ನೀಡಿರುವುದು ಖಂಡನೀಯ.

ಇದನ್ನೂ ಓದಿ:ಠಾಕ್ರೆ ಹೇಳಿಕೆ ಖಂಡಿಸಿ ಜಯಕರ್ನಾಟಕ ಸಂಘಟನೆ ಪ್ರತಿಭಟನೆ

ಮಹಾಜನ್‌ ವರದಿಯೇ ಅಂತಿಮವಾಗಿದೆ ಎಂದರು. ಪ್ರತಿಭಟನೆಯಲ್ಲಿ ವೇದಿಕೆಯ ರಾಜ್ಯ ಸಂಘಟನಾ ಕಾರ್ಯದರ್ಶಿ ವೆಂಕಟೇಶ್‌, ಜಿಲ್ಲಾ ಉಪಾಧ್ಯಕ್ಷ ಕೃಷ್ಣಾಚಾರ್‌, ತಾಲೂಕು ಅಧ್ಯಕ್ಷ ಗಿರೀಶಾಚಾರಿ, ಅಗರ ಹೋಬಳಿ ಅಧ್ಯಕ್ಷ ವೀರಭದ್ರಚಾರ್‌, ರಂಗಸ್ವಾಮಿ, ಗಿರೀಶಾಚಾರಿ, ಕವಿತಾ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next