Advertisement
ಕನ್ನಯ್ಯ ಲಾಲ್ ಹತ್ಯೆ ಖಂಡಿಸಿ, ಶ್ರೀರಾಮಸೇನೆ ನೇತೃತ್ವದಲ್ಲಿ ಹಿಂದುಪರ ಸಂಘಟನೆಗಳು ನಗರದ ಪಾದಗಟ್ಟೆ ಆಂಜನೇಯ ದೇವಸ್ಥಾನದ ಹತ್ತಿರ ಬಹಿರಂಗ ಸಭೆ ನಡೆಸಲು ಮುಂದಾಗುತ್ತಿದ್ದಂತೆ, ಪೊಲೀಸರು ಅಡ್ಡಿಪಡಿಸಿ, ಲಾಠಿ ಚಾರ್ಜ್ ನಡೆಸಿ ಗುಂಪು ಚದುರಿಸಿದರು. ಶ್ರೀರಾಮಸೇನೆ ಮುಖಂಡರಾದ ಗಂಗಾಧರ್ ಕುಲಕರ್ಣಿ, ಸಂಜೀವ ಮರಡಿ ಸೇರಿದಂತೆ 14 ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದರು. ಈ ಸಂದರ್ಭದಲ್ಲಿ ಸಂಘಟಕರು ಮತ್ತು ಪೊಲೀಸರ ನಡುವೆ ಮಾತಿನ ಚಕಮುಕಿ ನಡೆಯಿತು. ಸ್ಥಳದಲ್ಲಿ ಬಿಗುವಿನ ವಾತವರಣ ನಿರ್ಮಾಣವಾಗಿತ್ತು.
Related Articles
Advertisement
ಈ ಹಿನ್ನೆಲೆಯಲ್ಲಿ ಹೊಸಪೇಟೆ ಬಂದ್ ಅಥಾವ ಪ್ರತಿಭಟನೆ ಪೊಲೀಸ್ ಇಲಾಖೆ ಅವಕಾಶ ನಿಡಿರಲ್ಲಿಲ್ಲ. ತಹಶೀಲ್ದಾರರಿಗೆ ಮನವಿ ನೀಡಲು ಮಾತ್ರ ಅವಕಾಶ ನೀಡಿತ್ತು. ಆದರೆ, ಪಾದಗಟ್ಟೆ ಆಂಜನೇಯ ದೇವಸ್ಥಾನದ ಹತ್ತಿರ ಸಂಘಟಕರು ವೇದಿಕೆ ನಿರ್ಮಾಣ ಮಾಡಿ ಬಹಿರಂಗ ಸಭೆಗೆ ನಡೆಸಲು ಮುಂದಾದರು. ಈ ವೇಳೆ ಲಘು ಲಾಠಿ ಪ್ರಹಾರ ನಡೆಸಿ, ಗುಂಪು ಚದುರಿಸಿ, ಹಲವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಎಸ್ಪಿ ಡಾ.ಅರುಣ್ ಕೆ ತಿಳಿಸಿದರು.