Advertisement
ಉತ್ತರ ಪ್ರದೇಶದ ಯುವತಿ ಮೇಲೆ ಜರುಗಿದ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಆರೋಪಿಗಳಿಗೆ ಗಲ್ಲು ಶಿಕ್ಷೆಗೊಳಪಡಿಸಬೇಕು ಎಂದು ಆಗ್ರಹಿಸಿದರು. ಉತ್ತರ ಪ್ರದೇಶ ಯೋಗಿ ಆದಿತ್ಯನಾಥರ ಸರ್ಕಾರ ಕೊಲೆಗಡುಕರ ರಕ್ಷಣೆಗೆ ಮುಂದಾಗಿದೆ. ಉತ್ತರ ಪ್ರದೇಶದಲ್ಲಿ ದಲಿತರಿಗೆ ಮತ್ತು ದಲಿತ ಮಹಿಳೆಯರಿಗೂ,ದುಡಿಯುವ ಬಡ ಕುಟುಂಬದ ಜನರಿಗೆ ಜೀವಿಸಲು ರಕ್ಷಣೆ ಇಲ್ಲದಂತಾಗಿದೆ. ನಿತ್ಯ 2ರಿಂದ 3 ಮಹಿಳೆಯರ ಮೇಲೆ ಅತ್ಯಾಚಾರ, ದೌರ್ಜನ್ಯಗಳು ನಡೆಯುತ್ತಿವೆ. ಇದನ್ನು ತಡೆಯುವಲ್ಲಿ ವಿಫಲವಾದ ಉತ್ತರ ಪ್ರದೇಶದ ಸರ್ಕಾರವನ್ನು ಕೂಡಲೇ ವಜಾಗೊಳಿಸಬೇಕು. ರಾಷ್ಟ್ರಪತಿ ಆಡಳಿತ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.
Related Articles
Advertisement
ನೌಕರರ ಒಕ್ಕೂಟದ : ಉತ್ತರ ಪ್ರದೇಶದಲ್ಲಿ ವಾಲ್ಮೀಕಿ ಜನಾಂಗದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಆಗ್ರಹಿಸಿಕರ್ನಾಟಕ ಪರಿಶಿಷ್ಟ ಪಂಗಡ ವಾಲ್ಮೀಕಿ ನೌಕರರ ಒಕ್ಕೂಟದ ಜಿಲ್ಲಾ ಘಟಕದ ಸದಸ್ಯರು ಡಿಸಿ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.
ಯುವತಿ ಶವವನ್ನು ಕುಟುಂಬಕ್ಕೆ ನೀಡದೇ ರಾತ್ರೋರಾತ್ರಿ ಪೊಲೀಸ್ ಸರ್ಪಗಾವಲಿನಲ್ಲಿ ಸುಟ್ಟು ಹಾಕಿರುವ ಉತ್ತರ ಪ್ರದೇಶದ ಸರ್ಕಾರದ ಕ್ರಮ ಖಂಡನೀಯ ಎಂದು ದೂರಿದರು. ಯುವತಿ ಮೇಲೆ ಅತ್ಯಾಚಾರ ಎಸಗಿದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಹಾಗೂ ಅತ್ಯಾಚಾರಿಗಳಿಗೆ ಬೆಂಬಲಿಸುವ ಸರ್ಕಾರಿ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಯುವತಿ ಕುಟುಂಬಕ್ಕೆ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿದರು.
ಒಕ್ಕೂಟದ ಜಿಲ್ಲಾಧ್ಯಕ್ಷ ವೆಂಕಟೇಶ ನಾಯಕ ಅಸ್ಕಿಹಾಳ, ದೇವರಾಜ ನಾಯಕ ಹಾಗೂ ರಾಘವೇಂದ್ರ ನಾಯಕ ವಕೀಲ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಕರ್ನಾಟಕ ಅಸ್ಪೃಶ್ಯ ಸಮುದಾಯಗಳ ಮಹಾಸಭಾ: ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಯುವತಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ತಪ್ಪಿತಸ್ಥರನ್ನು ಕೂಡಲೇ ಬಂಧಿಸಬೇಕು ಹಾಗೂ ಉತ್ತರ ಪ್ರದೇಶದ ಸರ್ಕಾರವನ್ನು ವಜಾಗೊಳಿಸಿ ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ಅಸ್ಪೃಶ್ಯ ಸಮುದಾಯಗಳ ಮಹಾಸಭಾ ಮುಖಂಡರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಮಹಿಳೆಯರಿಗೆ ರಕ್ಷಣೆ ಒದಗಿಸುವಲ್ಲಿ ಉತ್ತರಪ್ರದೇಶ ಸರ್ಕಾರ ವಿಫಲವಾಗಿದೆ. ಜನರನ್ನು ರಕ್ಷಣೆ ಮಾಡಬೇಕಿದ್ದಪೊಲೀಸರೆ ಅಪರಾ ಧಿಗಳೊಂದಿಗೆ ನಿಂತಿರುವುದು ಖಂಡನೀಯ ಎಂದರು.
ಮಹಾಸಭಾದ ಎಂ.ವಿರೂಪಾಕ್ಷಿ, ಅಂಬಣ್ಣ ಅರೋಲಿ, ರವೀಂದ್ರನಾಥ, ಎಂ.ಈರಣ್ಣ,ರಾಜುಪಟ್ಟಿ, ವಿಶ್ವನಾಥ ಪಟ್ಟಿ, ಎ.ವಸಂತಕುಮಾರ, ಮಹೇಶ ಇತರರು ಇದ್ದರು.