Advertisement

ದೌರ್ಜನ್ಯ ಖಂಡಿಸಿ ಪ್ರತಿಭಟನೆ

05:12 AM Jun 20, 2020 | Lakshmi GovindaRaj |

ಗುಂಡ್ಲುಪೇಟೆ: ಅಮಾಯಕರ ಮೇಲೆ ದೌರ್ಜನ್ಯ ಮತ್ತು ಅಕ್ರಮ ದಂಧೆಗಳಿಗೆ ಬೆಂಬಲ ನೀಡುತ್ತಿರುವ ಪಟ್ಟಣ ಠಾಣೆ ಪೊಲೀಸ್‌ ಅಧಿಕಾರಿಗಳನ್ನು ಕೂಡಲೇ ಅಮಾನತುಗೊಳಿಸಬೇಕು ಎಂದು ಒತ್ತಾಯಿಸಿ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಪಟ್ಟಣ ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

Advertisement

ಪ್ರತಿಭಟನಾಕಾರರು ಪಟ್ಟಣ ಠಾಣೆ ಎಸ್‌ಐ ಲತೇಶಕುಮಾರ್‌ ಹಾಗೂ ಸಿಪಿಐ ಮಹದೇವಸ್ವಾಮಿಯನ್ನು ಅಮಾನತು ಗೊಳಿಸುವಂತೆ ಘೋಷಣೆ ಕೂಗಿದರು.  ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಎಎಸ್‌ಪಿ ಅನಿತಾ ಮಾತನಾಡಿ, ತ್ರಿವಳಿ ಕೊಲೆ ಪ್ರಕರಣದಲ್ಲಿ ನಮ್ಮ ಇಲಾಖೆಯ ವೈಫ‌ಲ್ಯ ಇದೆ. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು.

ರೈತರ ಮೇಲೆ ದೌರ್ಜನ್ಯ ಎಸಗಿರುವ  ಬಗ್ಗೆ ದೂರು ನೀಡಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ಇಬ್ಬರು ಪೊಲೀಸ್‌ ಅಧಿಕಾರಿಗಳೂ ತಾಲೂಕಿನ ಅಕ್ರಮ ದಂಧೆಗಳಿಗೆ ಮತ್ತು ಅವ್ಯವಹಾರಗಳಿಗೆ ಬೆನ್ನೆಲುಬಾಗಿ ನಿಂತಿ ದ್ದಾರೆ. ಠಾಣೆಗೆ ಆಗಮಿಸುವ ಸಾರ್ವ  ಜನಿಕರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ದೌರ್ಜನ್ಯ ನಡೆಸುತ್ತಿದ್ದಾರೆ. ದೂರು ನೀಡಿದರೂ ಉಪಯೋಗವಾಗಿಲ್ಲ. ಇಬ್ಬರ ನ್ನೂ ಕೂಡಲೇ ಅಮಾನತು ಗೊಳಿಸಬೇಕು ಎಂದು ರೈತಸಂಘದ ಡಾ. ಗುರುಪ್ರಸಾದ್‌ ಆಕ್ರೋಶ ವ್ಯಕ್ತಪಡಿಸಿದರು.

ಸ್ಥಳಕ್ಕಾಗಮಿಸಿದಎಸ್‌ಪಿ ಆನಂದಕುಮಾರ್‌ಇಬ್ಬರು ಅಧಿಕಾರಿಗಳ ಕರ್ತವ್ಯಲೋಪ ಹಾಗೂ ದೌರ್ಜನ್ಯಗಳ ಬಗ್ಗೆ ತನಿಖೆ ನಡೆಸಿ ಶಿಸ್ತು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ಪ್ರತಿಭಟನೆಯಲ್ಲಿ ರೈತ ಸಂಘದ ಜಿಲ್ಲಾ ಸಂಚಾಲಕ ಮಂಜುನಾಥ್‌,  ಹಸಿರು ಸೇನೆ  ಜಿಲ್ಲಾಧ್ಯಕ್ಷ ಪ್ರಕಾಶ್‌, ಜಿಲ್ಲಾ ಕಾರ್ಯಾಧ್ಯಕ್ಷಮಹದೇವಪ್ಪ, ಜಿಲ್ಲಾ ಉಪಾಧ್ಯಕ್ಷ ಸಂಪತ್ತು, ತಾಲೂಕು ಅಧ್ಯಕ್ಷ ಮಹೇಶ ಇತರರು ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next