Advertisement
ನಗರದ ಶೆಟ್ಟಿಭಾವಿ ವೃತ್ತದಿಂದ ಶುರುವಾದ ಮೆರವಣಿಗೆ ನಗರದ ಪ್ರಮುಖ ರಸ್ತೆಗಳ ಮಾರ್ಗವಾಗಿ ಸಾಗಿ ಜಿಲ್ಲಾ ಕ್ರೀಡಾಂಗಣದ ಪಕ್ಕದಲ್ಲಿರುವ ಮಹಾತ್ಮ ಗಾಂಧಿ ಪುತ್ಥಳಿವರೆಗೆ ನಡೆಯಿತು. ಅಲ್ಲಿ ಬಹಿರಂಗ ಸಭೆ ನಡೆಸಲಾಯಿತು. ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಮಾರ್ಗದುದ್ದಕ್ಕೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಮಾತನಾಡಿದ ಮುಖಂಡರು, ಕೇಂದ್ರ ಸರ್ಕಾರ ಪ್ರಜಾಪ್ರಭುತ್ವದ ವಿರುದ್ಧ ದಿಕ್ಕಿನಲ್ಲಿ ಸಾಗುತ್ತಿದೆ. ದೇಶದ ಮೂಲ ನಿವಾಸಿಗಳಿಗೆ ತೊಂದರೆ ಕೊಡುವ ನಿಟ್ಟಿನಲ್ಲಿ ಕಾಯ್ದೆಗಳನ್ನು ಜಾರಿಗೊಳಿಸುವ ಮೂಲಕ ಸಮಸ್ಯೆ ಸೃಷ್ಟಿಸಿದೆ. ಕೇಂದ್ರ ಸರ್ಕಾರ ಧರ್ಮಾಧಾರಿತವಾಗಿ ಪೌರತ್ವ ನೀಡುತ್ತಿರುವುದು ಸರಿಯಲ್ಲ. ಪ್ರಧಾನಿ ನರೇಂದ್ರ ಮೋದಿ ಸರ್ವಾಧಿ ಕಾರಿ ಆಡಳಿತ ನಡೆಸುತ್ತಿದ್ದು, ಮುಂದಿನ ದಿನಗಳಲ್ಲಿ ಜನರೇ ಈ ಸರ್ಕಾರಕ್ಕೆ ತಕ್ಕ ಪಾಠ ಕಲಿಸುತ್ತಾರೆ ಎಂದರು.
Advertisement
ಸಿಎಎ -ಎನ್‌ಆರ್‌ಸಿ ಖಂಡಿಸಿ ಪಂಜಿನ ಮೆರವಣಿಗೆ
12:40 PM Feb 25, 2020 | Suhan S |
Advertisement
Udayavani is now on Telegram. Click here to join our channel and stay updated with the latest news.