ಚನ್ನಪಟ್ಟಣ:ಉತ್ತರಪ್ರದೇಶದಹತ್ರಾಸ್‌ನಲ್ಲಿನಡೆದಿರುವ ಯುವತಿಯ ಮೇಲಿನ ಅತ್ಯಾಚಾರ, ಕೊಲೆ ಖಂಡಿಸಿ ದಲಿತ ಸಂಘರ್ಷ ಸಮಿತಿ ಹಾಗೂ ವಿವಿಧ ಸಂಘಟನೆಗಳಿಂದ ಪಟ್ಟಣದ ಅಂಬೇಡ್ಕರ್ ಪ್ರತಿಮೆ ಎದುರು ಪ್ರತಿಭಟನೆ ನಡೆಸಲಾಯಿತು.
ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು, ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು. ಈ ವೇಳೆ ಮಾತನಾಡಿದ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಎಂ.ರಾಮು, ದೇಶದಲ್ಲಿ ಆಡಳಿತನಡೆಸುತ್ತಿರುವ ನರೇಂದ್ರ ಮೋದಿ ನೇತೃತ್ವದ ಸರ್ಕಾರ ರಾಮ ರಾಜ್ಯದಲ್ಲಿ ರಾವಣನ ಆಡಳಿತ ನಡೆಸುತ್ತಿದೆ. ಹೆಣ್ಣುಮಕ್ಕಳಿಗೆ ದೇಶದಲ್ಲಿ ರಕ್ಷಣೆ ಇಲ್ಲ. ಈ ಸರ್ಕಾರವನ್ನು ಮೊದಲು ಕಿತ್ತೂಗೆಯಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಾಂಗ್ರೆಸ್ ಮುಖಂಡ ಶರತ್‌ಚಂದ್ರ ಮಾತನಾಡಿ, ಹಣ್ಣುಮಕ್ಕಳ ಮೇಲೆ ನಿರಂತರವಾಗಿ ಅತ್ಯಾಚಾರ,ಕೊಲೆ,ಲೈಂಗಿಕ ದೌರ್ಜನ್ಯ ಎಸಗುವ ಪ್ರವೃತ್ತಿ ಹೆಚ್ಚಾಗುತ್ತಿದ್ದು, ಉತ್ತರಪ್ರದೇಶ ಸರ್ಕಾರ ಇದನ್ನು ತಡೆಗಟ್ಟುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ ಎಂದು ದೂರಿದರು. ಕಿಸಾನ್ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಆರ್ .ನವ್ಯಶ್ರೀ ಮಾತನಾಡಿ, ಅತ್ಯಾಚಾರ ಮಾಡಿ ಕೊಲೆ ಮಾಡಿದ ನಾಲ್ವರು ಅರೋಪಿಗಳಿಗೆ ಗಲ್ಲು ಶಿಕ್ಷೆಯಾಗಬೇಕು.ಕುಟುಂಬದ ಸದಸ್ಯರಿಗೆಗೊತ್ತಾಗದಂತೆ ಅತ್ಯಾಚಾರ ನಡೆಸಿ ಸಂತ್ರಸ್ತೆಯ ಶವಸಂಸ್ಕಾರ ನಡೆಸಿದ ಕ್ರಮದ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥ ಅಧಿಕಾರಿಗಳಿಗೆ ತಕ್ಕ ಶಿಕ್ಷೆ ನೀಡಬೇಕು ಎಂದು ಆಗ್ರಹಪಡಿಸಿದರು.
ದಸಂಸ ಕುಮಾರ್‌ಮಾತನಾಡಿ, ಯೋಗಿ ಆದಿತ್ಯನಾಥ ಸರ್ಕಾರ ದಲಿತರ ಮೇಲಿನ ದೌರ್ಜನ್ಯ ತಡೆಗಟ್ಟುವಲ್ಲಿಸಂಪೂರ್ಣ ವಿಫಲವಾಗಿದ್ದು, ಈ ಸರ್ಕಾರವನ್ನು ಕೂಡಲೇ ವಜಾಗೊಳಿಸಬೇಕು ಎಂದು ಒತ್ತಾಯಿಸಿದರು. ಕರವೇ ತಾಲೂಕು ಅಧ್ಯಕ್ಷ ಸಾಗರ್ ಮಾತನಾಡಿ, ಅತ್ಯಾಚಾರ ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸುತ್ತಿರುವ ಉತ್ತರ ಪ್ರದೇಶ ಸರ್ಕಾರವನ್ನು ಈ ಕೂಡಲೇ ವಜಾಗೊಳಿಸಿ ರಾಷ್ಟ್ರಪತಿ ಆಡಳಿತ ಜಾರಿಗೊಳಿಸಬೇಕು ಎಂದು ಒತ್ತಾಯ ಮಾಡಿದರು. ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಸೈಯದ್ ನೂರುದ್ದೀನ್, ಜೆಡಿಎಸ್ ಮುಖಂಡ ಜಯಕಾಂತ್, ಮತ್ತೀಕೆರೆ ಹನುಮಂತಯ್ಯ, ಸ್ವರಾಜ್ ಸಂಘಟನೆಯ ಸುಕನ್ಯ, ದಲಿತ ಮುಖಂಡ ಸಿದ್ದರಾಮಯ್ಯ, ಕದಂಬ ಸೇನೆ ಜಿಲ್ಲಾಧ್ಯಕ್ಷ ಶಿವಕುಮಾರ್, ದಲಿತ ಮುಖಂಡರಾದ ಎಸ್ .ಸಿ.ಶೇಖರ್, ಸಿದ್ದರಾಮು, ಪ್ರದೀಪ್ ಅಪ್ಪಗೆರೆ, ರಘುರಾಮ್ ಸೇರಿದಂತೆ ಎಸ್‌ಡಿಪಿಐ ಸಂಘಟನೆಯ ಪದಾಧಿಕಾರಿಗಳು ಹಾಜರಿದ್ದರು.