ದೊಡ್ಡಬಳ್ಳಾಪುರ: ರಾಯಚೂರಿನಲ್ಲಿ ನಡೆದ ಗಣ ರಾಜ್ಯೋತ್ಸವ ಆಚರಣೆಯ ಕಾರ್ಯಕ್ರಮದಲ್ಲಿ ಸಂವಿ ಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರ ತೆಗೆಸಿದ ರಾಯಚೂರು ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ, ಸಂವಿ ಧಾನ ರಕ್ಷಣೆಗಾಗಿ ನಾಗರಿಕ ವೇದಿಕೆಯಿಂದ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ ತಹಶೀಲ್ದಾರರಿಗೆ ಮನವಿ ಸಲ್ಲಿಸಲಾಯಿತು.
ಸಂವಿಧಾನ ರಕ್ಷಣೆಗಾಗಿ ನಾಗರಿಕ ವೇದಿಕೆಯ ಸಂಚಾಲಕ ರಾಜು ಸಣ್ಣಕ್ಕಿ ಮಾತನಾಡಿ, ರಾಯಚೂರು ಕೋರ್ಟ್ ಆವರಣದಲ್ಲಿ ಗಣರಾಜ್ಯೋತ್ಸವಆಚರಣೆಯ ಸಂದರ್ಭದಲ್ಲಿ ಡಾ. ಬಿ.ಆರ್‌ಅಂಬೇಡ್ಕರ್ ಅವರ ಫೋಟೋ ಇಟ್ಟರೆ ನಾನು ಕಾರ್ಯಕ್ರಮಕ್ಕೆ ಬರುವುದಿಲ್ಲ ಎಂದು ಹೇಳಿಅಂಬೇಡ್ಕರ್ ಅವರ ಭಾವಚಿತ್ರವನ್ನು ತೆರವುಗೊಳಿಸಲು ತಿಳಿಸಿದ ರಾಯಚೂರು ಜಿಲ್ಲಾ ಜಡ್ಜ್ ಮಲ್ಲಿಕಾರ್ಜುನ್‌ಗೌಡ, ಅವರ ನಡೆ ಖಂಡನೀಯವಾಗಿದ್ದು, ನ್ಯಾಯಾಧೀಶರನ್ನು ದೇಶದ್ರೋಹದ ಆರೋಪದ ಮೇಲೆ ಕಡ್ಡಾಯ ನಿವೃತ್ತಿ ನೀಡಿ ಗಡಿಪಾರು ಮಾಡಬೇಕು ಎಂದು ಆಗ್ರಹಿಸಿದರು.
ಪಿವಿಸಿ ಜಿಲ್ಲಾಧ್ಯಕ್ಷ ಗೂಳ್ಯ ಹನುಮಣ್ಣ ಮಾತನಾಡಿ, ನ್ಯಾಯ ಸ್ಥಾನದಲ್ಲಿ ಕುಳಿತ ವ್ಯಕ್ತಿಯೊಬ್ಬರು ಅಸ್ಪೃಶ್ಯತೆ ಆಚರಣೆ ಮಾಡಿರುವುದು ನ್ಯಾಯಾಧೀಶರ ಸ್ಥಾನಕ್ಕೆ ಅರ್ಹರಲ್ಲ ಎಂಬುದು ಸಾಭೀತಾಗಿದೆ. ನ್ಯಾಯಾಂಗ, ಕಾರ್ಯಾಂಗ ಮತ್ತು ಶಾಸಕಾಂಗಗಳು ಸಂವಿಧಾನದ ಆಶಯಗಳಿಗೆ ಬದ್ಧವಾಗಿ ಕಾರ್ಯ ನಿರ್ವಹಿಸಬೇಕು ಆದರೆ ಸಂವಿಧಾನದ ಆಶಯದಂತೆ ನ್ಯಾಯಾ ಶರಾಗಿ ಆಯ್ಕೆಯಾಗಿ ಸಂವಿಧಾನದ ಆಶಯದಂತೆ ಕಾರ್ಯ ನಿರ್ವಹಿಸಬೇಕಾದ ಮಲ್ಲಿಕಾರ್ಜುನ ಗೌಡ ಇವರು ವೃತ್ತಿ ಗೌರವಕ್ಕೆ ಅವಮಾನ ಮಾಡಿದ್ದಾರೆ ಎಂದರು.
ಸಂವಿಧಾನಕ್ಕೆ ಮತ್ತು ಭಾರತ ರತ್ನ, ಮಹಾ ನಾಯಕ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರಿಗೆ ಅವಮಾನ ಮಾಡಿರುತ್ತಾರೆ ಎಂದುಆರೋಪಿಸಿದರು. ಛಲವಾದಿ ಮಹಾ ಸಭಾದತಾಲೂಕು ಅಧ್ಯಕ್ಷ ಗುರುರಾಜಪ್ಪ ಮಾತನಾಡಿರಾಯಚೂರು ನ್ಯಾಯಾಧೀಶರ ನಡೆ ದೇಶ ದೊ›àಹ ಕೃತ್ಯವಾಗಿದ್ದು, ಘಟನೆಗೆ ಸಂಬಂಸಿದಂತೆ ಮಾನ್ಯ ರಾಜ್ಯಪಾಲರು ಮಧ್ಯ ಪ್ರವೇಶಿಸಿ, ರಾಯಚೂರು ಜಿಲ್ಲಾ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಗೌಡ ಅವರ ವಿರುದ್ಧ ಉಚ್ಚ ನ್ಯಾಯಾಲಯ ಸ್ವಯಂಪ್ರೇರಿತವಾಗಿ ರಾಷ್ಟ್ರದ್ರೋಹದ ಪ್ರಕರಣವನ್ನ ದಾಖಲಿಸಬೇಕು ಎಂದು ಉಚ್ಚ ನ್ಯಾಯಾಲಯದ ನ್ಯಾಯಾಧೀಶರಿಗೆ ಆದೇಶ ನೀಡಬೇಕೆಂದು ಒತ್ತಾಯಿಸಿದರು.
ತಾಲೂಕು ಕನ್ನಡ ಪಕ್ಷದ ಅಧ್ಯಕ್ಷ ಸಂಜೀವನಾಯ್ಕ್ ದಲಿತ ವಿಮೋಚನಾ ಶಕ್ತಿಯ ರಾಜ್ಯಾಧ್ಯಕ್ಷ ಮಂಜು ನಾಥ, ಕಾರ್ಯದರ್ಶಿ ಸದಾನಂದ, ಪ್ರಜಾವಿಮೋಚನಾ ಬಹುಜನ ಸಮಿತಿಯ ರಾಜ್ಯಕಾರ್ಯದರ್ಶಿ ಚನ್ನಿಗರಾಯಪ್ಪ, ಅಂಬೇಡ್ಕರ್‌ಸೇನೆಯ ತಾಲೂಕು ಅಧ್ಯಕ್ಷ ನಂಜೇಶ್ ಮತ್ತು ದಸಂಸದ ಛಲವಾದಿ ಸುರೇಶ್ ಸೇರಿದಂತೆ ಸಂಘಟನೆಗಳ ಕಾರ್ಯಕರ್ತರು ಹಾಜರಿದ್ದರು.